Mysore
21
haze

Social Media

ಭಾನುವಾರ, 21 ಡಿಸೆಂಬರ್ 2025
Light
Dark

ಓದುಗರ ಪತ್ರ: ಭಾರತದ ದಿಟ್ಟ ಕ್ರಮ

ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ಪಾಕಿಸ್ತಾನ ಪ್ರೇರಿತ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿರುವುದಕ್ಕೆ ಪ್ರತೀಕಾರವಾಗಿ ಭಾರತ ಸರ್ಕಾರ ಪಾಕಿಸ್ತಾನದೊಂದಿಗೆ ಇದ್ದ ಎಲ್ಲ ಸಂಬಂಧಗಳನ್ನೂ ಕಡಿದುಕೊಂಡಿರುವುದು ದಿಟ್ಟ ಕ್ರಮವಾಗಿದೆ. ೧೯೬೦ರ ಸಿಂಧೂ ಮತ್ತು ಅದರ ಉಪನದಿಗಳ ನೀರು ಹಂಚಿಕೆ ಒಪ್ಪಂದವನ್ನು ಹಿಂತೆಗೆದುಕೊಂಡಿದ್ದಲ್ಲದೆ ಅಟ್ಟಾರಿ-ವಾಘಾ ಗಡಿಯ ರಸ್ತೆ ಸಂಚಾರವನ್ನು ಸಂಪೂರ್ಣವಾಗಿ ನಿರ್ಬಂಽಸಿ ಪಾಕಿಸ್ತಾನದ ಪ್ರಜೆಗಳೆಲ್ಲರೂ ದೇಶ ತೊರೆಯುಂತೆ ಸೂಚನೆ ನೀಡಿದೆ. ದೇಶದ ರಕ್ಷಣೆಗಾಗಿ ಎಲ್ಲ ರಾಜಕೀಯ ಪಕ್ಷಗಳೂ ಕೇಂದ್ರ ಸರ್ಕಾರದ ಬೆಂಬಲಕ್ಕೆ ನಿಂತಿರುವುದು ಸ್ವಾಗತಾರ್ಹ.

-ಬೂಕನಕೆರೆ ವಿಜೇಂದ್ರ, ಕುವೆಂಪು ನಗರ, ಮೈಸೂರು

Tags:
error: Content is protected !!