Andolana originals

ಓದುಗರ ಪತ್ರ: ಸಾಂಘಿಕ ಪ್ರದರ್ಶನದಿಂದ ಭಾರತದ ಮುಡಿಗೆ ಟಿ-೨೦ ವಿಶ್ವಕಪ್

ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಟಿ-೨೦ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾರತ ತಂಡದ ಸಾಂಘಿಕ ಪ್ರದರ್ಶನದಿಂದ ನ್ಯೂಜಿಲೆಂಡ್ ವಿರುದ್ಧ ೯೬ ರನ್‌ಗಳ ಜಯ ಸಾಧಿಸಿದ್ದು, ಮೂರನೇ ಬಾರಿ ವಿಶ್ವಕಪ್ ಎತ್ತಿಹಿಡಿದಿದೆ.

ಸಂಜು ಸ್ಯಾಮ್‌ಸನ್ ೮೯ರನ್, ಇಶಾನ್ ಕಿಶನ್ ಹಾಗೂ ಅಭಿಷೇಕ್ ಶರ್ಮಾ ಅವರ ಅರ್ಧ ಶತಕದಿಂದ ಭಾರತ ೨೫೫ರನ್‌ಗಳನ್ನು ಗಳಿಸಲು ಸಾಧ್ಯವಾಯಿತು. ಜಸ್ಪ್ರೀತ್ ಬೂಮ್ರಾ ಅವರ ಅತ್ಯುತ್ತಮ ಬೌಲಿಂಗ್ ಪ್ರದರ್ಶನ(೧೫ ರನ್ ಗೆ ೪ ವಿಕೆಟ್), ಅಕ್ಷರ್ ಪಟೇಲ್ ಅವರ ಚಾಣಾಕ್ಷ ಬೌಲಿಂಗ್ ಎದುರು ನ್ಯೂಜಿಲೆಂಡ್ ಆಟಗಾರರು ಮಂಕಾದರು. ಸೂರ್ಯಕುಮಾರ್ ಯಾದವ್ ಅವರ ನಾಯಕತ್ವದ ಬಲವೂ ಭಾರತದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿತು. ತನ್ಮೂಲಕ ಮೂರನೇ ಬಾರಿ ವಿಶ್ವ ಚಾಂಪಿಯನ್‌ಶಿಪ್ ಗೆದ್ದ ತಂಡ ಎಂಬ ಹೆಗ್ಗಳಿಕೆಗೂ ಭಾರತ ತಂಡವು ಪಾತ್ರವಾಯಿತು.

 – ಬಿ.ಗಣೇಶ, ಕೆ.ಜಿ.ಕೊಪ್ಪಲು,ಮೈಸೂರು

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಅನುಭವಿ ಮೌಲ್ಯಮಾಪಕರಿಗೆ ಆದ್ಯತೆ ನೀಡಿ

ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳ ಜೀವನದ ಪ್ರಮುಖ ಘಟ್ಟವಾಗಿದೆ. ವಿದ್ಯಾರ್ಥಿಗಳು ವರ್ಷವಿಡೀ ಶ್ರದ್ಧೆಯಿಂದ ಓದಿ ಪರೀಕ್ಷೆ ಬರೆದರೂ ಪ್ರತಿ ವರ್ಷವೂ…

7 mins ago

ಓದುಗರ ಪತ್ರ: ಆಟೋ ಚಾಲಕರಿಂದ ಅರವಟ್ಟಿಗೆ ಸೌಲಭ್ಯ

ಬೇಸಿಗೆ ಆರಂಭವಾಗುತ್ತಿದ್ದಂತೆಯೇ ಬಿಸಿಲಿನ ತಾಪ ಹೆಚ್ಚಾಗಿ ಜನರು ಕುಡಿಯುವ ನೀರಿಗಾಗಿ ಪರದಾಡುವ ಪರಿಸ್ಥಿತಿ ಉಂಟಾಗುತ್ತದೆ. ಇಂತಹ ಸಂದರ್ಭದಲ್ಲಿ ಮೈಸೂರಿನ ರಾಮಸ್ವಾಮಿ…

9 mins ago

ಓದುಗರ ಪತ್ರ: ಯುದ್ಧ: ಎಂಎಲ್‌ಸಿಗೆ ಸ್ಪಂದಿಸದ ಕೇಂದ್ರ ಸರ್ಕಾರ?

ಇಸ್ರೇಲ್- ಅಮೆರಿಕ ಹಾಗೂ ಇರಾನ್ ನಡುವಿನ ಯುದ್ಧ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಭಾರತದಿಂದ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಿಂದ ಕಾರ್ಯನಿಮಿತ್ತ…

11 mins ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಸ್ಲಮ್ ವಾಸಿಗಳಿಗೆ ಬದುಕು ಕಟ್ಟಿ ಕೊಟ್ಟ ಆರ್ಕಿಟೆಕ್ಟ್‌

ಕೊಳೆಗೇರಿಗಳ ೨೭,೦೦೦ ಮನೆಗಳಿಗೆ ಶೌಚಾಲಯ ಸೌಲಭ್ಯ ಪೂನಾದ ಇಂದಿರಾ ವಸಾಹತ್ ಎಂಬ ಪ್ರದೇಶದ ಒಂದು ಸ್ಲಮ್ಮಿನಲ್ಲಿ ವಾಸಿಸುವ ಲತಾ ರತನ್…

14 mins ago

ಮರಿಗಳೊಂದಿಗೆ ಹುಲಿ ಕಂಡು ಪುಳಕಿತರಾದ ಪ್ರವಾಸಿಗರು

ಮಹೇಂದ್ರ ಹಸಗೂಲಿ ತಾಯಿ ಹುಲಿ ನಾಪತ್ತೆಯಾಗಿದ್ದರಿಂದ ಮರಿಗಳನ್ನು ಪಾಲನೆ ಮಾಡಿದ್ದ ಅರಣ್ಯ ಇಲಾಖೆ  ಗುಂಡ್ಲುಪೇಟೆ: ಬಂಡೀಪುರದ ಸಫಾರಿಗೆ ಹೋಗಿದ್ದ ಪ್ರವಾಸಿಗರು…

44 mins ago

ಕೆರೆಗಳಿಗೆ ಪುನಶ್ಚೇತನ; ವನ್ಯಜೀವಿಗಳಿಗಿಲ್ಲ ನೀರಿನ ಕೊರತೆ

ನಾಗರಹೊಳೆ ಅರಣ್ಯದಲ್ಲಿ ಬೇಸಿಗೆಗೂ ಮುನ್ನವೇ ಕೆರೆಗಳ ಅಭಿವೃದ್ಧಿ ಕಾರ್ಯ ಕೈಗೊಂಡ ಅರಣ್ಯ ಇಲಾಖೆ ವೀರನಹೊಸಹಳ್ಳಿ: ಈ ಬಾರಿ ಬೇಸಿಗೆಗೂ ಮುನ್ನವೇ…

48 mins ago