ಮೈಸೂರು ಮಹಾನಗರ ಪಾಲಿಕೆ ವತಿಯಿಂದ ನಗರದ ವಿವಿಧ ಬಡಾವಣೆಗಳು ಹಾಗೂ ರಸ್ತೆಗಳ ಎಲ್ಲ ಕ್ರಾಸ್‌ಗಳಲ್ಲಿ ವಾರ್ಡ್ ಸಂಖ್ಯೆ, ಆ ಕ್ಷೇತ್ರವನ್ನು ಪ್ರತಿನಿಧಿಸುವ ಶಾಸಕರು ಹಾಗೂ ಪಾಲಿಕೆ ಸದಸ್ಯರ ಮಾಹಿತಿಯ ಜೊತೆಗೆ ಪ್ರಮುಖ ರಸ್ತೆಯ ಹೆಸರು ಮತ್ತು ಕ್ರಾಸ್‌ಗಳ ಬಗ್ಗೆ ಮಾಹಿತಿಯುಳ್ಳ ಫಲಕಗಳನ್ನು ಅಳವಡಿಸಲಾಗಿದೆ. ಇದು ನಾಗರಿಕರಿಗೆ ಆಯಾ ಪ್ರದೇಶಗಳ ಬಗ್ಗೆ ಮಾಹಿತಿ ಒದಗಿಸುವ ಉತ್ತಮ ಕೆಲಸವಾಗಿದೆ. ಆದರೆ ಈ ಮಾಹಿತಿ ಫಲಕಗಳು ಜನರಿಗೆ ಮಾರಕವಾಗಿ ಪರಿಣಮಿಸಿವೆ. ಈ ರೀತಿಯ ಮಾಹಿತಿ ಫಲಕಗಳನ್ನು ಅಳವಡಿಸಿರುವ ಸ್ಥಳಗಳಲ್ಲಿ ಸಂಚರಿಸುವ ಜನರ ತಲೆಗೆ ತಗುಲಿ ಪೆಟ್ಟಾಗಿರುವ ಸಾಕಷ್ಟು ಉದಾಹರಣೆಗಳು ವರದಿಯಾಗಿವೆ.
ಕೆಲವರಿಗೆ ತಲೆಗೆ ಪೆಟ್ಟಾಗಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದ ನಿದರ್ಶನಗಳು ಸಾಕಷ್ಟಿವೆ. ಇಂತಹ ಅಪಾಯದಿಂದ ಪಾರಾಗಲು ಆಯಾ ಕ್ರಾಸ್‌ಗಳ ನಿವಾಸಿಗಳು, ಅಂಗಡಿ ಮಾಲೀಕರು ಈ ಫಲಕಗಳ ಕೆಳಭಾಗಕ್ಕೆ ನೀರಿನ ಬಾಟಲಿ ಹಾಕಿ, ಮತ್ತೆ ಕೆಲವೆಡೆ ಬಟ್ಟೆಗಳನ್ನು ಸುತ್ತಿ ಅಥವಾ ಮೃದುವಾದ ವಸ್ತುಗಳಿಂದ ಮುಚ್ಚಿದ್ದಾರೆ. ಈ ನಾಮ ಫಲಕಗಳು ಸಾಕಷ್ಟು ಎತ್ತರವಾಗಿರದೇ ಕುಳ್ಳಾಗಿರುವುದು ಇಂತಹ ಅವಘಡಗಳು ಸಂಭವಿಸಲು ಪ್ರಮುಖ ಕಾರಣವಾಗಿದೆ. ಇದು ಅವೈಜ್ಞಾನಿಕ ಕ್ರಮವಾಗಿದೆ. ನಗರ ಪಾಲಿಕೆ ಮತ್ತಷ್ಟು ಅವಘಡಗಳು ಸಂಭವಿಸುವ ಮೊದಲು ಈಗ ಅಳವಡಿಸಿರುವ ಮಾಹಿತಿ ಫಲಕಗಳನ್ನು ಎತ್ತರಿಸುವುದರ ಜೊತೆಗೆ ಮುಂದೆ ನಗರದ ಬೇರೆ ಬೇರೆ ಬಡಾವಣೆಗಳಲ್ಲಿ ಅಳವಡಿಸಲು ಉದ್ದೇಶಿಸಿರುವ ಮಾಹಿತಿ ಫಲಕಗಳು ಸಾಕಷ್ಟು ಎತ್ತರವಾಗಿರುವಂತೆ ಮುನ್ನೆಚ್ಚರಿಕೆ ವಹಿಸುವುದು ಸೂಕ್ತ.
–ಅನುಷಾ ಎಂ., ಜೆ.ಪಿ.ನಗರ, ಮೈಸೂರು
ಮೊನ್ನೆ ತುಮಕೂರು ರಸ್ತೆ ಹಿಡಿದು ಬೆಂಗಳೂರಿನ ಕಡೆ ಬರುತ್ತಿರುವಾಗ, ರಸ್ತೆಯ ಬಲಭಾಗದಲ್ಲಿ ದೊಡ್ಡ ಕಲ್ಲು ಬೆಟ್ಟ ಕಾಣಿಸಿತು. ಕುಂಬಳಕಾಯಿಯನ್ನು ಚಾಕುವಿನಿಂದ…
ಐಟಿ, ಆರೋಗ್ಯ, ಆಡಳಿತ ಹೀಗೆ ಎಲ್ಲೆಲ್ಲಿ ಎಐ ಬಳಕೆ ಸಾಧ್ಯವೋ ಅಲ್ಲೆಲ್ಲಾ ಪ್ರಾಥಮಿಕ ಹಂತದ ಉದ್ಯೋಗ ಗಳು ಕಡಿತವಾಗಲಿವೆ. ಎಐ…
‘ಕೃತಕ ಬುದ್ಧಿವಂತಿಕೆ’ಯನ್ನು ನಮ್ಮ ಸಹಾಯಕನಾಗಿ ಬಳಸಿಕೊಳ್ಳಬೇಕೇ ಹೊರತು, ಅದರ ಮೇಲೆ ಅವಲಂಬಿತರಾಗಬಾರದು; ಇಂದು ಶಾಲೆ, ಕಾಲೇಜಿನ ಪ್ರಾಧ್ಯಾಪಕರಿಂದ ‘ಎಲ್ಲರ ಅಸೈನ್‌ಮೆಂಟೂ…
ನಾನು ಎ.ಐ. ಅಥವಾ ಕೃತಕ ಬುದ್ಧಿಮತ್ತೆಯ ರಂಗಕ್ಕೆ ಪ್ರಪ್ರಥಮವಾಗಿ ಇಳಿದದ್ದು ಸುಮಾರು ೩೫ ವರ್ಷಗಳ ಹಿಂದೆ, ನ್ಯೂಯಾರ್ಕಿನಲ್ಲಿ ಸ್ನಾತಕೋತ್ತರ ವಿದ್ಯಾರ್ಥಿಯಾಗಿದ್ದಾಗ.…
ಮಾನವ ದುಡಿಮೆಯನ್ನು ಕಡಿಮೆಗೊಳಿಸಿರುವ ಎಐಯನ್ನು ಸಂಪೂರ್ಣವಾಗಿ ಹೀಗಳೆಯುವಂತೆಯೂ ಇಲ್ಲ. ಮನುಷ್ಯ ನಿರ್ಮಿತ ಈ ಕೃತಕ ಬುದ್ಧಿಯ ಬೇತಾಳ ನಮ್ಮದೇ ಕೂಸು!…
೧೮೭೫ರಲ್ಲಿ ಬಂಕಿಮಚಂದ್ರ ಚಟ್ಟೋಪಾಧ್ಯಾಯ ರಚಿಸಿದ ‘ವಂದೇ ಮಾತರಂ’ ಸ್ವಾತಂತ್ರ್ಯ ಚಳವಳಿಯ ಭಾಗವಾಗಿತ್ತು. ಧಾರ್ಮಿಕ ಆಕ್ಷೇಪಣೆಗಳಿಂದಾಗಿ ೧೯೩೭ರಲ್ಲಿ ಕಾಂಗ್ರೆಸ್ ಮೊದಲ ಎರಡು…