Andolana originals

ಓದುಗರ ಪತ್ರ: ಅಮಾನವೀಯ ಕೃತ್ಯ

ಹಕ್ಕಿಪಿಕ್ಕಿ ಜನಾಂಗದ,ಅಪ್ರಾಪ್ತ ವಯಸ್ಸಿನ ಬಾಲಕನೊಬ್ಬನನ್ನು ಅರೆ ಬೆತ್ತಲೆ ಮಾಡಿ ಅಡಕೆ ಮರಕ್ಕೆ ಕಟ್ಟಿ ದೇಹದ ಮೇಲೆ ಕೆಂಪು ಇರುವೆ ಹತ್ತಿಸಿ ಚಿತ್ರ ಹಿಂಸೆ ಕೊಟ್ಟಿರುವ ಪ್ರಕರಣ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಅಪ್ತಾಫನಹಳ್ಳಿಯಲ್ಲಿ ನಡೆದಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ.

ಈ ಬಾಲಕ ಊರಿನಲ್ಲಿ ಕಳ್ಳತನ ಮಾಡುತ್ತಿದ್ದ ಎಂದು ಆರೋಪಿಸಿ ಆತನಿಗೆ ಅದೇ ಗ್ರಾಮದ ಕೆಲವು ವಿಕೃತ ಮನಸ್ಸಿನ ಯುವಕರು ಈ ರೀತಿ ಚಿತ್ರ ಹಿಂಸೆ ನೀಡಿದ್ದಾರೆ ಎನ್ನಲಾಗಿದೆ. ಬಾಲಕ ಕಳ್ಳತನ ಮಾಡಿದ್ದರೆ ಆತನ ವಿರುದ್ಧ ಪೊಲೀಸರಿಗೆ ದೂರು ನೀಡಬಹುದಿತ್ತು, ಆದರೆ ಮಾನಸಿಕವಾಗಿ ಮತ್ತು ದೈಹಿಕವಾಗಿ ಹಿಂಸೆ ನೀಡಿರುವುದು ನಾಗರಿಕ ಸಮಾಜ ತಲೆ ತಗ್ಗಿಸುವಂತೆ ಮಾಡಿದೆ.

– ಬೂಕನಕೆರೆ ವಿಜೇಂದ್ರ, ಕುವೆಂಪು ನಗರ, ಮೈಸೂರು

ಆಂದೋಲನ ಡೆಸ್ಕ್

Recent Posts

ದೇವಿ ಕೃಪೆ ಜನರ ಮೇಲಿರಲಿ, ಜನರ ಕೃಪೆ ನಮ್ಮ ಸರ್ಕಾರದ ಮೇಲಿರಲಿ: ಸಿಎಂ ಡಿಕೆಶಿ

ಮೈಸೂರು:  ಮೈಸೂರು ದಸರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ ಸಿಕ್ಕಿದೆ. ಈ ಹಿನ್ನೆಲೆಯಲ್ಲಿ ಮಾತನಾಡಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ದೇವಿಯ ಕೃಪೆ…

24 mins ago

ದಸರಾ ಉದ್ಘಾಟಿಸುವಷ್ಟು ದೊಡ್ಡವನು ನಾನಲ್ಲ: ಗವಿಸಿದ್ದೇಶ್ವರ ಶ್ರೀ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನಾ ಕಾರ್ಯಕ್ರಮದಲ್ಲಿ ಕೊಪ್ಪಳದ ಗವಿಮಠದ ಶ್ರೀ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ವಿನಮ್ರ ಮಾತುಗಳನ್ನಾಡಿದ್ದಾರೆ. “ದಸರಾ…

46 mins ago

ಮನಸೆಳೆವ ಫಲ ಪುಷ್ಪ ಪ್ರದರ್ಶನ

ಪ್ರಕೃತಿಯೊಂದಿಗೆ ನಂಟನ್ನು ನೆನಪಿಸುವ ಒಂದು ಸುಂದರ ಪಯಣ. 15 ಎಕರೆ ವಿಸ್ತೀರ್ಣ, 70 ಸಸ್ಯಶಾಸ್ತ್ರೀಯ ಜಾತಿಯ 327ಕ್ಕೂ ಹೆಚ್ಚಿನ ವೈವಿಧ್ಯಮಯ…

1 hour ago

ಮೈಸೂರು ದಸರಾ ಮಹೋತ್ಸವಕ್ಕೆ ಅಧಿಕೃತ ಚಾಲನೆ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ ಸಿಕ್ಕಿದೆ. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆಯುತ್ತಿರುವ 416ನೇ ನಾಡಹಬ್ಬ ದಸರಾ…

3 hours ago

ಓದುಗರ ಪತ್ರ: ಬಳಸಿದ ಅಡುಗೆ ಎಣ್ಣೆ: ಯೋಜನೆ ಪ್ರಶಂಸನೀಯ

ಬಳಸಿದ ಅಡುಗೆ ಎಣ್ಣೆಯನ್ನು ಸರಕಾರವೇ ಸಂಗ್ರಹಿಸಿ ಜೈವಿಕ ಇಂಧನವಾಗಿ (ಬಯೋಡೀಸೆಲ) ಪರಿವರ್ತಿಸುವ ಯೋಜನೆ ಪ್ರಶಂಸನೀಯ. ಪುನರಾವರ್ತಿತ ಎಣ್ಣೆ ಬಳಕೆಯಿಂದ ಹೊರಹೊಮ್ಮುವ…

4 hours ago

ಓದುಗರ ಪತ್ರ: ಇದೇನು ಪಾದಚಾರಿ ರಸ್ತೆಯೋ ಅಥವಾ…?

ಅನ್ನ ಬೆಂದಿದೆಯೋ ಇಲ್ಲವೋ ಎಂಬುದನ್ನುಪರೀಕ್ಷಿಸಲು ಪಾತ್ರೆಯ ಅನ್ನವನ್ನು ಮುಟ್ಟಿ ನೋಡಬೇಕಿಲ್ಲ. ಒಂದು ಅಗುಳನ್ನು ಪರೀಕ್ಷಿಸಿದರೆ ಸಾಕು. ಅಂತೆಯೇ ಮೈಸೂರಿನಲ್ಲಿ ಸಂಚಾರ…

4 hours ago