Mysore
33
few clouds

Social Media

ಶುಕ್ರವಾರ, 13 ಮಾರ್ಚ್ 2026
Light
Dark

ಓದುಗರ ಪತ್ರ: ನ್ಯಾಯಾಲಯದ ಬಳಿ ಸಿಗ್ನಲ್ ಲೈಟ್ ಅಳವಡಿಸಿ

ಮೈಸೂರಿನ ವಿವಿಧ ವೃತ್ತಗಳಲ್ಲಿ ಹೊಸದಾಗಿ ಸಿಗ್ನಲ್ ಲೈಟ್‌ಗಳನ್ನು ಅಳವಡಿಸಿದ್ದಾರೆ. ಆದರೆ ಚಾಮರಾಜಪುರಂನ ನ್ಯಾಯಾಲಯದ ಬಳಿ ವಾಹನ ಸಂಚಾರ ಹೆಚ್ಚಾಗಿದ್ದು, ನ್ಯಾಯಾಲಯದ ಸುತ್ತಮುತ್ತ ಶಾಲಾ ಕಾಲೇಜುಗಳು ಹಾಗೂ ಕಚೇರಿಗಳು ಇರುವುದರಿಂದ ಜನ ಸಂದಣಿಯೂ ಅಧಿಕವಾಗಿರುತ್ತದೆ.

ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಯವರು ಚಾಮರಾಜಪುರಂ ನ್ಯಾಯಾಲಯದ ಬಳಿ ಸಿಗ್ನಲ್ ಲೈಟ್‌ಗಳನ್ನು ಅಳವಡಿಸುವ ಮೂಲಕ ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸಬೇಕಾಗಿದೆ.

 -ಎಂ.ಎಸ್.ಉಷಾ ಪ್ರಕಾಶ್, ಎಸ್. ಬಿ.ಎಂ.ಕಾಲೋನಿ, ಮೈಸೂರು

Tags:
error: Content is protected !!