Mysore
26
overcast clouds

Social Media

ಮಂಗಳವಾರ, 03 ನವೆಂಬರ್ 2026
Light
Dark

ಓದುಗರ ಪತ್ರ: ಸೂಚನಾ ಫಲಕ, ಬೀದಿ ದೀಪ ಅಳವಡಿಸಿ

ಓದುಗರ ಪತ್ರ

ಕುವೆಂಪುನಗರದ ವಿಶ್ವಮಾನವ ಜೋಡಿ ರಸ್ತೆಯಲ್ಲಿ ಕಳೆದ ಒಂದು ವಾರದಿಂದ ಕಾಮಗಾರಿ ನಡೆಯುತ್ತಿದ್ದು, ಪ್ರತಿದಿನ ಈ ರಸ್ತೆಯಲ್ಲಿ ಸಂಚರಿಸುವ ಸಾರ್ವಜನಿಕರು ಹಾಗೂ ವಾಹನ ಸವಾರರು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ.

ಕಾಮಗಾರಿ ನಡೆಯುತ್ತಿರುವ ಬಗ್ಗೆ ಮಾಹಿತಿ ನೀಡುವ ಯಾವುದೇ ಸೂಚನಾ ಫಲಕ ಅಥವಾ ಎಚ್ಚರಿಕೆ ಫಲಕ ಅಳವಡಿಸದಿರುವುದರಿಂದ ವಾಹನ  ಸವಾರರಿಗೆ ಗೊಂದಲ ಉಂಟಾಗುತ್ತಿದೆ. ಜೊತೆಗೆ ರಾತ್ರಿ ಸಮಯದಲ್ಲಿ ರಸ್ತೆಯಲ್ಲಿ ವಿದ್ಯುತ್ ದೀಪಗಳ ವ್ಯವಸ್ಥೆ ಇಲ್ಲದ ಕಾರಣ ವಾಹನ ಸವಾರರು ಹಾಗೂ ವಾಕಿಂಗ್ ಮಾಡುವ ಹಿರಿಯ ನಾಗರಿಕರು, ಸಾರ್ವಜನಿಕರ ಮನದಲ್ಲಿ ಆತಂಕ ಮನೆ ಮಾಡಿದೆ. ಆದ್ದರಿಂದ ಮಹಾನಗರ ಪಾಲಿಕೆ ಅಧಿಕಾರಿಗಳು ಗಮನಹರಿಸಿ ಕಾಮಗಾರಿ ಪ್ರಗತಿ ಸೂಚನಾ ಫಲಕ, ಎಚ್ಚರಿಕೆ ಫಲಕ ಹಾಗೂ ವಿದ್ಯುತ್ ದೀಪಗಳನ್ನು ಅಳವಡಿಸಬೇಕಾಗಿದೆ.

– ಮಹದೇವ ಎಂ. ಕರಿಯನಪುರ, ಕೊಳ್ಳೇಗಾಲ ತಾ.‌

Tags:
error: Content is protected !!