Andolana originals

ಓದುಗರ ಪತ್ರ: ಸಾರಿಗೆ ಬಸ್‌ನಲ್ಲಿ ಕಸದ ಬುಟ್ಟಿ ಅಳವಡಿಸಿ

ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ಗಳಲ್ಲಿ ರಾಜ್ಯಾದ್ಯಂತ ಪ್ರತಿನಿತ್ಯ ಲಕ್ಷಾಂತರ ಜನರು ಪ್ರಯಾಣಿಸುತ್ತಾರೆ. ಬಸ್‌ನಲ್ಲಿ ಪ್ರಯಾಣಿಕರು ಕಡಲೆಕಾಯಿ ಸಿಪ್ಪೆ, ಚಾಕೋಲೇಟ್, ಬಿಸ್ಕೆಟ್ ಇನ್ನಿತರ ತಿಂಡಿ ತಿನಿಸುಗಳನ್ನು ತಿಂದು ಪ್ಲಾಸ್ಟಿಕ್ ಕವರ್‌ಗಳನ್ನು, ಬಸ್ಸಿನಲ್ಲಿ ಬಿಟ್ಟು ಹೋಗುತ್ತಾರೆ. ನೀರಿನ ಬಾಟಲಿಯನ್ನು ಬಿಸಾಡಿರುತ್ತಾರೆ. ಇನ್ನೂ ಕೆಲವರು ಕಿಟಕಿಯ ಮೂಲಕ ಕಸವನ್ನು ಎಸೆಯುತ್ತಾರೆ.

ಬೇರೆ ಪ್ರಯಾಣಿಕರು ಬಸ್ ಹತ್ತಿದಾಗ ಬಸ್‌ನಲ್ಲಿ ಕಸ ಬಿದ್ದಿರುವುದು ಕಂಡರೆ ಬೇಸರವಾಗುತ್ತದೆ. ಈ ಸಮಸ್ಯೆಯನ್ನು ಪರಿಹರಿಸಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ಗಳಲ್ಲಿ ಕಸದ ಬುಟ್ಟಿಯನ್ನು ಅಳವಡಿಸಿ, ಪ್ರಯಾಣಿಕರು ಕಡ್ಡಾಯವಾಗಿ ಕಸವನ್ನು ಕಸದ ಬುಟ್ಟಿಯಲ್ಲಿ ಹಾಕುವಂತೆ ಅರಿವು ಮೂಡಿಸಬೇಕು. ನಿಯಮ ಉಲ್ಲಂಸಿದವರಿಗೆ ದಂಡ ವಿಧಿಸಬೇಕು. ಹೀಗಾದಾಗ ಮಾತ್ರ ಸಾರಿಗೆ ನಿಗಮದ ಬಸ್‌ಗಳಲ್ಲಿ ಸ್ವಚ್ಛತೆ ಕಾಪಾಡಲು ಸಾಧ್ಯ. ಈ ನಿಟ್ಟಿನಲ್ಲಿ ಸಾರಿಗೆ ನಿಗಮದ ಅಧಿಕಾರಿಗಳು ಕ್ರಮ ಕೈಗೊಳ್ಳುವುದು ಅಗತ್ಯ.

– ನಾಗೇಶ್, ಮಾನಸಗಂಗೋತ್ರಿ, ಮೈಸೂರು

 

ಆಂದೋಲನ ಡೆಸ್ಕ್

Recent Posts

ಕಾವೇರಿ ತೀರ್ಥೋದ್ಭವಕ್ಕೆ ದಿನಗಣನೆ: ಕಾವೇರಿ ನೀರಾವರಿ ನಿಗಮದಿಂದ 2 ಕೋಟಿ ರೂ ಬಿಡುಗಡೆ

ಮಡಿಕೇರಿ: ನಾಡಿನ ಜೀವನದಿ ಕಾವೇರಿ ಉಗಮಸ್ಥಾನ ತಲಕಾವೇರಿಯಲ್ಲಿ ನಡೆಯಲಿರುವ ಪವಿತ್ರ ತೀರ್ಥೋದ್ಭವಕ್ಕೆ ದಿನಗಣನೆ ಶುರುವಾಗಿದ್ದು, ಇನ್ನೇನು ಕೇವಲ 15 ದಿನಗಳಷ್ಟೇ…

13 mins ago

ಮಂಡ್ಯ | ಕೇಂದ್ರದ ಬರ ಅಧ್ಯಯನ ತಂಡದಿಂದ ಕೆಆರ್‌ಎಸ್‌ ಹಾಗೂ ಬರಪೀಡಿತ ಹಳ್ಳಿಗಳ ಪರಿಶೀಲನೆ

ಮಂಡ್ಯ: ರಾಜ್ಯದಲ್ಲಿ ಕಂಡು ಕೇಳರಿಯದ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಇಂದು ಕೇಂದ್ರ ಬರ ಅಧ್ಯಯನ ಸಮಿತಿ ಸದಸ್ಯರು ಮಂಡ್ಯಕ್ಕೆ ಆಗಮಿಸಿ…

21 mins ago

ಓದುಗರ ಪತ್ರ: ಐತಿಹಾಸಿಕ ಸಂಗತಿ!

ಐತಿಹಾಸಿಕ ಸಂಗತಿ! ಸರ್ಕಾರದ ನಿರ್ದೇಶನದ ಮೇರೆಗೆ ಬೆಳಗಾವಿ ನಗರಪಾಲಿಕೆ ‘ಗಡಿ ವಿಷಯದಲ್ಲಿ ಮಹಾಜನ್ ವರದಿಯೇ ಅಂತಿಮ’ಎಂಬ ನಿರ್ಣಯ ಅಂಗೀಕರಿಸಿರುವುದು ಐತಿಹಾಸಿಕ…

5 hours ago

ಓದುಗರ ಪತ್ರ: ಟ್ರಾಫಿಕ್ ದಂಡ: ಸುಪ್ರೀಂ ಸಲಹೆ ಸ್ವಾಗತಾರ್ಹ

ಟ್ರಾಫಿಕ್ ನಿಯಮ ಉಲ್ಲಂಘಿಸಿ ದಂಡ ಪಾವತಿಸದೆ ಬಾಕಿ ಉಳಿಸಿಕೊಂಡಿರುವವರಿಂದ ಹಣ ವಸೂಲಿ ಮಾಡಲು, ಆ ದಂಡದ ಮೊತ್ತವನ್ನು ಅವರ ಮನೆ…

5 hours ago

ಓದುಗರ ಪತ್ರ: ಆಕಾಶದಲ್ಲಿ ಶೌರ‍್ಯಪ್ರದರ್ಶನಕ್ಕೊಂದು ಸಲಾಂ

ತನ್ನ ಪ್ರಾಣವನ್ನೇ ಒತ್ತೆಯಿಟ್ಟು ದುಬೈನಿಂದ ಇಸ್ರೇಲ್‌ನ ಅವೀವ್‌ಗೆ ತೆರಳುತ್ತಿದ್ದ -ದುಬೈ ವಿಮಾನ ಹೈಜಾಕ್ ತಪ್ಪಿಸಿದ ಭಾರತೀಯ ಪೈಲಟ್ ಕ್ಯಾಪ್ಟನ್ ಸ್ಮಿತ್…

5 hours ago

ಬ್ರೇಕ್ ಕಿತ್ತ ಬಸ್ಸಿನಲ್ಲಿ ಇಳಿಜಾರಿನಲ್ಲಿ ಸಾಗುತ್ತಿದ್ದೇವೆ…

ಡಾ . ಚೇತನ ಗುರುರಾಜು, ಮುಖ್ಯ ಶಿಕ್ಷಕಿ, ಅರಿವು ವಿದ್ಯಾಸಂಸ್ಥೆ, ಮೈಸೂರು  ಸಾಮಾಜಿಕ ಮಾಧ್ಯಮಗಳ ಬಲೆಗೆ ಸಿಲುಕಿವೆ ಹಲವು ದೇಶಗಳು…

5 hours ago