Andolana originals

ಓದುಗರ ಪತ್ರ: ರೈಲುಗಳಿಗೆ ಹೆಚ್ಚುವರಿ ಬೋಗಿ ಅಳವಡಿಸಿ

ಬೆಂಗಳೂರಿನ ಯಶವಂತಪುರ, ಎಸ್‌ಎಂವಿಟಿ, ಕೆ.ಆರ್.ಪುರಂ, ರೈಲ್ವೆ ನಿಲ್ದಾಣಗಳಿಂದ ಚಾಮರಾಜನಗರ, ಮೈಸೂರು, ಶಿವಮೊಗ್ಗ, ಕಡೂರು, ತಾಳಗುಪ್ಪ , ಹಾಸನ , ಉಡುಪಿ, ಮಂಗಳೂರು, ಬಳ್ಳಾರಿ, ಬೀದರ್, ಬೆಳಗಾವಿ, ಧಾರವಾಡ ಇನ್ನಿತರ ಭಾಗಗಳಿಗೆ ತೆರಳುವ ರೈಲುಗಾಡಿಗಳಲ್ಲಿ ದಿನ ನಿತ್ಯ ಪ್ರಯಾಣಿಕರ ಸಂಖ್ಯೆ ಏರಿಕೆಯಾಗುತ್ತಿದೆ.

ಶನಿವಾರ ಮತ್ತು ಭಾನುವಾರ ಕಾಯ್ದಿರಿಸದ ಬೋಗಿಗಳಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿರುತ್ತದೆ. ಜನರಲ್ ಬೋಗಿಗಳಲ್ಲಿ ನೂಕು ನುಗ್ಗಲಿನಲ್ಲಿ, ಮಹಿಳೆಯರು ಸೇರಿದಂತೆ ಗರ್ಭಿಣಿಯರೂ ಕೂಡ ಸೀಟು ಸಿಗದೆ ಪರದಾಡುವಂತಾಗುತ್ತದೆ. ಬಸ್ಸಿನಲ್ಲಿ ಪ್ರಯಾಣಿಸಲು ಸಾಧ್ಯವಾಗದ ಹಿರಿಯ ನಾಗರಿಕರು ರೈಲಿನಲ್ಲಿ ಪ್ರಯಾಣ ಮಾಡುವುದಕ್ಕೆ ಬಂದರೆ, ಜನರಲ್ ಬೋಗಿಗಳಲ್ಲಿ ಸೀಟು ಸಿಗದೇ ತೊಂದರೆ ಅನುಭವಿಸುತ್ತಿದ್ದಾರೆ.

ಜನರಲ್ ಬೋಗಿಯಲ್ಲಿ ಪ್ರಯಾಣಿಕರ ದಟ್ಟಣೆ ಹೆಚ್ಚಾದಾಗ ದ್ವಿತೀಯ ದರ್ಜೆ ಪ್ರಯಾಣದ ಟಿಕೆಟ್ ಪಡೆದವರು ಸ್ಲೀಪರ್ ಬೋಗಿಯಲ್ಲಿ ಪ್ರಯಾಣ ಮಾಡಲು ಮುಂದಾಗಿ ಟಿಕೆಟ್ ಕಲೆಕ್ಟರ್‌ಗಳಿಗೆ ಸಿಕ್ಕಿ ಬಿದ್ದು ದಂಡ ಕಟುವಂತಾಗಿದೆ. ರೈಲ್ವೆ ಖಾತೆ ರಾಜ್ಯ ಸಚಿವರಾಗಿರುವ ವಿ. ಸೋಮಣ್ಣ ಅವರು ಕೂಡಲೇ ಯಶವಂತಪುರ, ಎಸ್‌ಎಂವಿಟಿ, ಕೆ.ಆರ್ .ಪುರಂ, ರೈಲ್ವೆ ನಿಲ್ದಾಣಗಳಿಂದ ಸಂಚರಿಸುವ ರೈಲುಗಳಿಗೆ ಹೆಚ್ಚುವರಿಯಾಗಿ ಜನರಲ್ ಬೋಗಿಗಳನ್ನು ಅಳವಡಿಸಬೇಕು, ರೈಲುಗಳ ಜನರಲ್ ಬೋಗಿಗಳಲ್ಲಿ ಹಿರಿಯ ನಾಗರಿಕರಿಗೆ ಸೀಟು ಕಾಯ್ದಿರಿಸಬೇಕು ಹಾಗೂ ವಾರಾಂತ್ಯದಲ್ಲಿ ಮತ್ತು ರಜಾದಿನಗಳಲ್ಲಿ ಹೆಚ್ಚುವರಿಯಾಗಿ ರೈಲು ಸಂಚಾರ ವ್ಯವಸ್ಥೆ ಮಾಡುವ ಮೂಲಕ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕಾಗಿದೆ.

 – ನಾಗೇಶ್, ಮಾನಸಗಂಗೋತ್ರಿ, ಮೈಸೂರು

 

 

ಆಂದೋಲನ ಡೆಸ್ಕ್

Recent Posts

ಇ-ಕೆವೈಸಿಗೆ ಗಡುವು ವಿಸ್ತರಣೆ

ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…

8 hours ago

ಯುಪಿಐ ಶುಲ್ಕ | ನಮ್ಮ ಕಿಸೆಯೊಳಗೆ ಸರ್ಕಾರದ ಕೈ

ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…

9 hours ago

ಓದಗರ ಪತ್ರ | ಮರಳಿಗೆ ಮೊಳೆ ಹೊಡೆಯದೇ ದೀಪಾಲಂಕಾರಕ್ಕೆ ಪರ್ಯಾಯ ವ್ಯವಸ್ಥೆ ಮಾಡಲಿ

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…

9 hours ago

ಓದುಗರ ಪತ್ರ | ಮುಷ್ಕರದ ಉದ್ದೇಶವೇ ಭಂಗಗೊಳಿಸುವುದಲ್ಲವೇ ?

ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…

9 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವೈಡ್‌ ಆಂಗಲ್‌ | ಅನಂತ್‌ಗೆ ಫಾಲ್ಕೆ : ಕನ್ನಡ ಚಿತ್ರರಂಗಕ್ಕೆ ಅತ್ಯುನ್ನತ ಗೌರವ

ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…

9 hours ago

ಮಹಾಪಂಚ್ ಕಾರ್ಟೂನ್‌

ಮಹಾಪಂಚ್ ಕಾರ್ಟೂನ್‌ | ಸೆಪ್ಟಂಬರ್‌ 18 ಶುಕ್ರವಾರ

10 hours ago