ಮೈಸೂರಿನ ಕುವೆಂಪುನಗರದ ಡಾ.ಶಿವಕುಮಾರ ಸ್ವಾಮೀಜಿ ವೃತ್ತದ ಬಳಿ ಇರುವ ರಾಷ್ಟ್ರಕವಿ ಕುವೆಂಪು ಅವರ ಪ್ರತಿಮೆಗೆ ಬೆಳಕಿನ ವ್ಯವಸ್ಥೆ ಇಲ್ಲದೆ ಕತ್ತಲಲ್ಲಿ ಮುಳುಗಿದೆ.
ಕುವೆಂಪುರವರು ಎಲ್ಲೆಡೆ ಕನ್ನಡದ ಕಂಪನ್ನು ಪಸರಿಸಿದವರು. ಇಂತಹ ಮಹಾನ್ ವ್ಯಕ್ತಿಯ ಪ್ರತಿಮೆಯನ್ನು ಸ್ಥಾಪಿಸಿದ ಬಳಿಕ ಸೂಕ್ತ ಗೌರವವನ್ನು ಸೂಚಿಸಬೇಕಾದದ್ದು ನಮ್ಮ ಕರ್ತವ್ಯ. ಆದರೆ ಇಲ್ಲಿ ವಿದ್ಯುತ್ ದೀಪದ ಸೌಲಭ್ಯವಿಲ್ಲದೆ ಪ್ರತಿಮೆ ಕತ್ತಲಲ್ಲಿ ಮುಳುಗಿರುವುದು ಅವರಿಗೆ ಅಗೌರವ ಸೂಚಿಸಿದಂತಾಗುತ್ತದೆ. ಆದ್ದರಿಂದ ಅವರ ಪ್ರತಿಮೆ ಇವರು ಆವರಣವನ್ನು ಸ್ವಚ್ಛಗೊಳಿಸಿ ವಿದ್ಯುತ್ ದೀಪದ ವ್ಯವಸ್ಥೆ ಕಲ್ಪಿಸಬೇಕಿದೆ ಹಾಗೂ ಶಿವಕುಮಾರ ಸ್ವಾಮೀಜಿ ವೃತ್ತವನ್ನು ಅಭಿವೃದ್ಧಿಪಡಿಸಬೇಕಿದೆ.
–ಎಂ.ಎಸ್.ಉಷಾ ಪ್ರಕಾಶ್, ಎಸ್ಬಿಎಂ ಕಾಲೋನಿ, ಮೈಸೂರು.





