ಆಷಾಢ ಮಾಸದ ಶುಕ್ರವಾರಗಳಂದು ಚಾಮುಂಡಿಬೆಟ್ಟದಲ್ಲಿ ವಿಶೇಷ ಪೂಜೆನಡೆಯುವುದರಿಂದಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಚಾಮುಂಡಿಬೆಟ್ಟಕ್ಕೆ ಆಗಮಿಸುತ್ತಾರೆ.
ನೂರಾರು ಭಕ್ತರು ಬೆಳಗಿನ ಜಾವವೇ ಮೆಟ್ಟಿಲುಗಳ ಮೂಲಕ ಬೆಟ್ಟ ಚಾಮುಂಡೇಶ್ವರಿಯ ದರ್ಶನಕ್ಕೆ ಬರುತ್ತಾರೆ. ಆದರೆ, ಈ ಮಾರ್ಗದಲ್ಲಿ ವಿದ್ಯುತ್ ದೀಪಗಳಿಲ್ಲದೆ ಮುಂಜಾನೆಯ ನಸುಕಿನಲ್ಲಿ ಭಕ್ತರು ಪರದಾಡುವಂತಾಗಿದೆ. ಈ ಮಾರ್ಗದಲ್ಲಿ ವಿದ್ಯುತ್ ಕಂಬಗಳಿದ್ದರೂ ಬಲ್ಬ್‌ಗಳಿಲ್ಲದೆ ಬೆಳಕಿನ ವ್ಯವಸ್ಥೆ ಇಲ್ಲದಂತಾಗಿದೆ.
ಇದರಿಂದಾಗಿ ಕತ್ತಲಿನಲ್ಲಿ ಬೆಟ್ಟವನ್ನು ಏರಿ ಬರುವವರಿಗೆ ಕಾಡುಪ್ರಾಣಿಗಳ ಹಾವಳಿಯ ಜತೆಗೆ ಸರಗಳ್ಳರ ಭಯವೂ ಕಾಡುತ್ತಿರುತ್ತದೆ. ಆದ್ದರಿಂದ ಚಾಮುಂಡಿಬೆಟ್ಟ ಗ್ರಾಮ ಪಂಚಾಯಿತಿಯವರು ಈ ಮೆಟ್ಟಿಲುಗಳಿಗೆ ವಿದ್ಯುತ್ ದೀಪಗಳ ವ್ಯವಸ್ಥೆ ಮಾಡಿಸಬೇಕಿದೆ. ಅಲ್ಲದೆ ಪೊಲೀಸ್ ಇಲಾಖೆಯೂ ಅಲ್ಲಲ್ಲಿ ಸಿಬ್ಬಂದಿಯನ್ನು ನಿಯೋಜಿಸಿ ಭಕ್ತರಿಗೆ ರಕ್ಷಣೆ ನೀಡಬೇಕಿದೆ.
-ಬ್ಯಾಂಕ್ ಶಿವಕುಮಾರ್, ಜೆ.ಪಿ.ನಗರ, ಮೈಸೂರು





