Andolana originals

ಓದುಗರ ಪತ್ರ: ಹಂಪ್‌ಗಳನ್ನು ಅಳವಡಿಸಿ

ಮೈಸೂರಿನ ಶ್ರೀರಾಂಪುರ ವಾಟರ್ ಟ್ಯಾಂಕ್ ಸರ್ಕಲ್‌ಗೆ ನಾಲ್ಕು ದಿಕ್ಕಿನಿಂದಲೂ ರಸ್ತೆಗಳು ಕೂಡುತ್ತಿವೆ. ಯಾವ ರಸ್ತೆಗೂ ಹಂಪ್‌ಗಳನ್ನು ಅಳವಡಿಸದ ಪರಿಣಾಮ ಆಗಾಗ್ಗೆ ಅಪಘಾತಗಳು ಸಂಭವಿಸುತ್ತಿವೆ.

ನಗರದ ಭ್ರಮಾರಾಂಬ ಕಲ್ಯಾಣ ಮಂಟಪದ ಸಮೀಪವಿರುವ ಈ ಸರ್ಕಲ್ ವಿವೇಕಾನಂದ ಸರ್ಕಲ್, ಬೆಮೆಲ್ ಲೇಔಟ್, ಎಲ್‌ಐಸಿ ಕಾಲೋನಿ ಮತ್ತು ಲಿಂಗಾಂಬುಽ ಪಾಳ್ಯಕ್ಕೆ ಸಂಪರ್ಕ ಕಲ್ಪಿಸುತ್ತದೆ. ಅಲ್ಲದೆ ಪರಸಯ್ಯನ ಹುಂಡಿಗೂ ಇದೇ ಸರ್ಕಲ್ ಮೂಲಕ ಹಾದು ಹೋಗಬೇಕು.

ವಾಹನ ದಟ್ಟಣೆ ಹೆಚ್ಚಾಗಿರುವ ಈ ರಸ್ತೆಗಳಿಗೆ ಹಂಪ್ ಗಳಿಲ್ಲದಿರುವ ಪರಿಣಾಮ ವಾಹನ ಸವಾರರು ವೇಗವಾಗಿ ಸಂಚರಿಸುತ್ತಿದ್ದು, ನಿತ್ಯ ಒಂದಲ್ಲ ಒಂದು ಅಪಘಾತ ಸಂಭವಿಸುತ್ತಿವೆ. ಈ ರಸ್ತೆಗಳಿಗೆ ಹಂಪ್‌ಗಳನ್ನು ಅಳವಡಿಸುವಂತೆ ಸಂಬಂಧಪಟ್ಟವರ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ. ಆದ್ದರಿಂದ ಮಹಾನಗರ ಪಾಲಿಕೆಯ ಅಧಿಕಾರಿಗಳು ಈ ಬಗ್ಗೆ ಗಮನಹರಿಸಿ ಈ ವೃತ್ತಕ್ಕೆ ಸಂಪರ್ಕಗೊಂಡಿರುವ ರಸ್ತೆಗಳಿಗೆ ಹಂಪ್‌ಗಳನ್ನು ಅಳವಡಿಸಬೇಕಿದೆ.

-ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು

 

andolana

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

11 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

11 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

12 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

13 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

18 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

18 hours ago