Andolana originals

ಓದುಗರ ಪತ್ರ: ವೃತ್ತದಲ್ಲಿ ವಿದ್ಯುತ್ ದೀಪ, ನಾಮಫಲಕ ಅಳವಡಿಸಿ

ಎಚ್. ಡಿ. ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದ ಗದ್ದಿಗೆ-ಮಾದಾಪುರ ಸರ್ಕಲ್‌ನಲ್ಲಿ ಸರಿಯಾದ ಮಾರ್ಗಸೂಚಿ ಹಾಗೂ ನಾಮಫಲಕಗಳಿಲ್ಲದೆ ಪ್ರಯಾಣಿಕರು ಪರದಾಡುವಂತಾಗಿದೆ. ಮಾದಾಪುರದ ಈ ವೃತ್ತ ಎಚ್. ಡಿ. ಕೋಟೆ, ಮೈಸೂರು ಹಾಗೂ ಗದ್ದಿಗೆಗೆ ಸಂಪರ್ಕ ಕಲ್ಪಿಸುವ ವೃತ್ತವಾಗಿದ್ದು, ಜನರು ಎಚ್. ಡಿ. ಕೋಟೆಯಿಂದ ಮೈಸೂರು, ಹುಣಸೂರು, ಗದ್ದಿಗೆ ಹಾಗೂ ಹಾಸನಕ್ಕೂ ಇದೇ ಮಾರ್ಗವಾಗಿ ಸಂಚರಿಸುತ್ತಾರೆ. ಇಂತಹ ವೃತ್ತದಲ್ಲಿ ಯಾವುದೇ ನಾಮಫಲಕಗಳಾಗಲಿ, ಸೂಚನಾಫಲಕಗಳಾಗಲಿ ಇಲ್ಲದಿರುವುದು ಪ್ರಯಾಣಿಕರಿಗೆ ಗೊಂದಲವನ್ನುಂಟು ಮಾಡುತ್ತಿದೆ. ಅಲ್ಲದೆ ಈ ವೃತ್ತ ಮೈಸೂರು-ಮಾನಂದವಾಡಿ ಮುಖ್ಯರಸ್ತೆಗೆ ಸಂಪರ್ಕ ಹೊಂದಿದ್ದು, ಸೂಚನಾಫಲಕಗಳಿಲ್ಲದಿರುವುದರಿಂದ ಇಲ್ಲಿ ಆಗಾಗ್ಗೆ ಅಪಘಾತಗಳಾಗುತ್ತಿವೆ. ಇನ್ನು ಈ ವೃತ್ತಕ್ಕೆ ಸರಿಯಾದ ವಿದ್ಯುತ್ ದೀಪಗಳನ್ನು ಅಳವಡಿಸದಿರುವುದರಿಂದ ರಾತ್ರಿಯ ವೇಳೆ ಈ ವೃತ್ತದ ಬಳಿ ಸಂಚರಿಸಲು ಕಷ್ಟವಾಗುತ್ತಿದೆ. ಅಲ್ಲದೆ ಈ ವೃತ್ತದ ಸಮೀಪದಲ್ಲಿಯೇ ಮದ್ಯದಂಗಡಿಯೂ ಇದ್ದು, ಕುಡಿದು ವಾಹನ ಚಲಾಯಿಸುವವರು ಏಕಾಏಕಿ ಮುಖ್ಯ ರಸ್ತೆಗೆ ಬರುತ್ತಿದ್ದಾರೆ. ಇದರಿಂದಾಗಿ ಅಪಘಾತಗಳಾಗುತ್ತಿವೆ. ಆದ್ದರಿಂದ ಸಂಬಂಧಪಟ್ಟವರು ಈ ಸರ್ಕಲ್‌ಗೆ ವಿದ್ಯುತ್ ದೀಪಗಳನ್ನು ಅಳವಡಿಸುವ ಜತೆಗೆ ಸೂಚನಾಫಲಕಗಳನ್ನೂ ಅಳವಡಿಸಬೇಕಿದೆ.

-ಸಿದ್ದಲಿಂಗೇಗೌಡ, ಹೈರಿಗೆ, ಎಚ್. ಡಿ. ಕೋಟೆ ತಾ

 

andolana

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

10 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

10 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

11 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

12 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

17 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

17 hours ago