ಓದುಗರ ಪತ್ರ
ಮೈಸೂರಿನಿಂದ ನಂಜನಗೂಡಿನ ಕಡೆಗೆ ಸಾಗುವ ಮುಖ್ಯ ರಸ್ತೆ ಎಡಕ್ಕೆ ಕವಲಾಗಿ ಉತ್ತನಹಳ್ಳಿ ಕಡೆ ಹೋಗುವ ಮಾರ್ಗದಲ್ಲಿ ಬೀದಿ ದೀಪದ ವ್ಯವಸ್ಥೆಯಿಲ್ಲ ಇಲ್ಲ. ಈ ರಸ್ತೆಯು ಸಂತೆಪೇಟೆ(ಆರ್‌ಎಂಸಿ) ಹಿಂದಿರುವ ದ್ವಾರಕ್ಕೆ ಸಂಪರ್ಕ ಕಲ್ಪಿಸುತ್ತದೆ. ಈ ರಸ್ತೆಯಲ್ಲಿ ಸಾಗುವ ದೂಡ್ಡ ಮತ್ತು ಸಣ್ಣ ಪ್ರಮಾಣದ ವಾಹನಗಳಿಗೆ ಸಂತೆಪೇಟೆ ಒಳಗೆ ಪ್ರವೇಶಿಸಲು ಅವಕಾಶವಿದೆ.ಈ ಉತ್ತನಹಳ್ಳಿ ರಸ್ತೆಯು ಮುಂದುವರಿದಂತೆರಿಂಗ್ ರಸ್ತೆಗೆ ಸಂಪರ್ಕ ಕಲ್ಲಿಸುತ್ತದೆ. ಹೀಗಾಗಿ ಈ ರಸ್ತೆಯಲ್ಲಿ ಪ್ರತಿದಿನ ವಾಹನ ದಟ್ಟಣೆ ಸ್ವಲ್ಪ ಹೆಚ್ಚಾಗಿಯೇ ಇರುತ್ತದೆ.
ಉತ್ತನಹಳ್ಳಿಯ ಬಳಿ ಯುವ ದಸರಾ ಆಯೋಜನೆಗೊಳ್ಳುವುದರಿಂದ ಈ ವೇಳೆ ವಾಹನ ದಟ್ಟಣೆ ನಿರೀಕ್ಷೆಗಿಂತಲೂ ಹೆಚ್ಚಿರುತ್ತದೆ. ಈ ರಸ್ತೆಯಲ್ಲಿ ರಾತ್ರಿ ವೇಳೆ ಎದುರಿಗೆ ಬರುವ ವಾಹನಗಳ ಪ್ರಖರ ಬೆಳಕು ಕಣ್ಣು ಕುಕ್ಕುತ್ತದೆ. ಹೀಗಾಗಿ ವಾಹನ ಸವಾರರಿಗೆ ಮಾರ್ಗ ಸರಿಯಾಗಿ ಕಾಣದೆ ಗಲಿಬಿಲಿಗೊಳ್ಳುವ ಸಂದರ್ಭಗಳೇ ಹೆಚ್ಚು. ಇದರಿಂದ ಅಪಘಾತ ಸಂಭವಿಸುವ ಸಾಧ್ಯತೆಯಿದೆ. ಸಂಬಂಧಪಟ್ಟ ಅಧಿಕಾರಿಗಳು ಈ ರಸ್ತೆಯ ಎರಡೂ ಬದಿಯಲ್ಲಿ ಬೀದಿ ದೀಪ ಅಳವಡಿಸಿ, ವಾಹನ ಸವಾರರು ಮತ್ತು ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಲು ಮುಂದಾಗಬೇಕಿದೆ.
-ಎಂ.ಲಿಂಗರಾಜು, ಹೊಸಹುಂಡಿ, ಮೈಸೂರು ತಾ.
ಮೈಸೂರಿನ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಜಿ.ಟಿ.ದೇವೇಗೌಡರ ನೇತೃತ್ವದಲ್ಲಿ ಇಸ್ಕಾನ್ ಸಂಸ್ಥೆಯ ಅಕ್ಷಯಪಾತ್ರೆ ಫೌಂಡೇಶನ್ ಸಹಯೋಗದೊಂದಿಗೆ…
ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಅವರ ಕಚೇರಿಯಲ್ಲಿ ಸಮವಸ್ತ್ರದಲ್ಲಿದ್ದಾಗಲೇ ಮಹಿಳೆಯೊಂದಿಗೆ ನಡೆಸಿದ್ದಾರೆ ಎನ್ನಲಾದ ರಾಸಲೀಲೆಯ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್…
ಉತ್ತರ ಅಟ್ಲಾಂಟಿಕ್ ಸಮುದ್ರದಲ್ಲಿ ಇರುವ ವಿಶ್ವದ ಅತಿದೊಡ್ಡ ದ್ವೀಪವಾಗಿರುವ ಹಾಗೂ ಡೆನ್ಮಾರ್ಕ್ ದೇಶದ ನಿಯಂತ್ರಣದಲ್ಲಿರುವ ‘ಗ್ರೀನ್ ಲ್ಯಾಂಡ್’ ದ್ವೀಪವನ್ನು ತನ್ನ…
ನವೀನ್ ಡಿಸೋಜ ಅರಣ್ಯ ಇಲಾಖೆಯಿಂದ ಬೆಂಕಿ ರೇಖೆ ನಿರ್ಮಾಣ ಕಾರ್ಯ ಚುರುಕು; ಜನರಲ್ಲಿ ಜಾಗೃತಿ ಮೂಡಿಸಲು ಚಿಂತ ಮಡಿಕೇರಿ: ಬೇಸಿಗೆ…
ಎಂ ಯೋಗಾನಂದ್ ಜ.೨೩ರಿಂದ ೨೬ರವರೆಗೆ ಜಾತ್ರಾ ಮಹೋತ್ಸವ; ಮೆರುಗು ನೀಡಲಿರುವ ಗಾಡಿ ಓಡಿಸುವ ಸ್ಪರ್ಧೆ ಹುಣಸೂರು: ತಾಲ್ಲೂಕಿನ ಬಾಚಳ್ಳಿ ಗ್ರಾಮದಲ್ಲಿ…