ಮೈಸೂರಿನ ವಿವೇಕಾನಂದ ವೃತ್ತದಲ್ಲಿ ಹೊಸದಾಗಿ ವಿವೇಕಾನಂದರ ಪ್ರತಿಮೆಯನ್ನು ಸ್ಥಾಪಿಸಲು ಕಳೆದ ಮೂರು ವರ್ಷಗಳ ಹಿಂದೆಯೇ ಆರಂಭಿಸಿರುವ ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ. ಕಾಮಗಾರಿ ನಡೆಯುತ್ತಿರುವ ಜಾಗದ ಸುತ್ತ ಪಾರ್ಥೇನಿಯಂ ಗಿಡಗಳು ಬೆಳೆದಿವೆ.
ಜನವರಿ ೧೨ರಂದು ಸ್ವಾಮಿ ವಿವೇಕಾನಂದರ ಜಯಂತಿ ಇರುವುದರಿಂದ ಆ ವೇಳೆಗಾದರೂ ಕಾಮಗಾರಿಯನ್ನು ಪೂರ್ಣಗೊಳಿಸಿ, ಸ್ವಾಮಿ ವಿವೇಕಾನಂದರ ಪ್ರತಿಮೆಯನ್ನು ಸ್ಥಾಪಿಸಲು ಸಂಬಂಧಪಟ್ಟವರು ಕ್ರಮ ಕೈಗೊಳ್ಳಬೇಕು.
– ಬೂಕನಕೆರೆ ವಿಜೇಂದ್ರ, ಕುವೆಂಪು ನಗರ, ಮೈಸೂರು





