ಓದುಗರ ಪತ್ರ
ಕೇಂದ್ರೀಯ ಪಠ್ಯಕ್ರಮದ (ಎನ್ ಸಿಇಆರ್ ಟಿ) ೮ನೇ ತರಗತಿಯ ಪಠ್ಯ ಪುಸ್ತಕದಲ್ಲಿ ನಮ್ಮ ದೇಶದ ನ್ಯಾಯಾಂಗ ವ್ಯವಸ್ಥೆಯಲ್ಲೂ ಭ್ರಷ್ಟಾಚಾರ ಇದೆ ಎನ್ನುವಂತೆ ಪಠ್ಯ ಸೇರಿಸಿದ್ದು, ಈ ಬಗ್ಗೆ ಸುಪ್ರೀಂಕೋರ್ಟ್ ಆಕ್ರೋಶ ವ್ಯಕ್ತಪಡಿಸಿ, ಪುಸ್ತಕವನ್ನು ವಾಪಸ್ ಪಡೆಯಲು ಎನ್‌ಸಿ ಇಆರ್‌ಟಿಗೆ ಆದೇಶ ನೀಡಿದೆ.
ಶಿಕ್ಷಣವು ಸಮಾಜ ಮತ್ತು ದೇಶವನ್ನು ಕಟ್ಟಲು ಹೊಸ ಪೀಳಿಗೆಯನ್ನು ರೂಪಿಸು ವಂತಾಗಬೇಕು. ವಿದ್ಯಾರ್ಥಿಗಳು ಕಲಿ ಯುವ ವಯಸ್ಸಿನಲ್ಲಿ ನ್ಯಾಯಾಂಗದ ವ್ಯವಸ್ಥೆಯ ಮೇಲೆಯೇ ಅನುಮಾನ ಪಡುವಂತಾದರೆ, ಇನ್ಯಾರನ್ನು ನಂಬಬೇಕು? ದೇಶದ ಬಗ್ಗೆ ಅಭಿಮಾನ ಬರುವುದಾದರೂ ಹೇಗೆ? ಇಂತಹ ತಪ್ಪು ಮಾಹಿತಿ ನೀಡಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಸುಪ್ರೀಂ ಕೋರ್ಟ್‌ನ ಈ ತೀರ್ಪು ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆಗೆ ಪಾತ್ರವಾಗಿದೆ. ನ್ಯಾಯಾಂಗ ವ್ಯವಸ್ಥೆಯನ್ನು ಅನುಮಾನಿಸುವ ಬದಲು, ನಮ್ಮ ರಾಜಕೀಯ ವ್ಯವಸ್ಥೆಯ ಭ್ರಷ್ಟಾಚಾರದ ಬಗ್ಗೆ ಪಠ್ಯ ಪುಸ್ತಕದಲ್ಲಿ ಅಳವಡಿಸಿದರೆ ಮುಂದಿನ ದಿನಗಳಲ್ಲಿ ಸ್ವಲ್ಪಮಟ್ಟಿಗಾದರೂ ಭ್ರಷ್ಟಾಚಾರ ಕಡಿಮೆಯಾಗಬಹುದು.
-ಬೂಕನಕೆರೆ ವಿಜೇಂದ್ರ, ಕುವೆಂಪು ನಗರ ಮೈಸೂರು
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಶಿರಗೋಡು ಗ್ರಾಮದ ಶ್ರೀ ಲಕ್ಷ್ಮಿ ವೆಂಕಟೇಶ್ವರ ದೇವಾಲಯದಲ್ಲಿ ರಥೋತ್ಸವ ಭಾನುವಾರ ಬೆಳಿಗ್ಗೆ…
ಟೆಹರಾನ್: ಇರಾನ್ ಮೇಲೆ ಇಸ್ರೇಲ್ ಅಮೆರಿಕ ಜಂಟಿಯಾಗಿ ದಾಳಿ ನಡೆಸಿದ ಪರಿಣಾಮ ಇದೀಗ ಇರಾನ್ ಕೂಡ ಪ್ರತೀಕಾರವಾಗಿ ಇಸ್ರೇಲ್ ಅಮೆರಿಕಾ…
ಕೊಡಗು: ಆನೆ ದಾಳಿಗೆ ವಿದ್ಯಾರ್ಥಿನಿ ಬಲಿಯಾಗಿರುವ ಘಟನೆ ಕೊಡಗಿನಲ್ಲಿ ನಡೆದಿದೆ. ಮದೆ ಬೆಟ್ಟತ್ತೂರು ಗ್ರಾಮದ ಗಿರೀಶ್ ಎಂಬುವವರ ಪುತ್ರಿ ಪೂಜಾ…
ತಮಿಳುನಾಡು: ತಮಿಳುನಾಡು ವಿಧಾನಸಭಾ ಚುನಾವಣೆ 2026ರ ಸೀಟು ಹಂಚಿಕೆ ಮಾತುಕತೆ ಆರಂಭವಾಗಿದೆ. ಜಾತ್ಯಾತೀತ ಪ್ರಗತಿಪರ ಮೈತ್ರಿಕೂಟದ ಪಕ್ಷಗಳಿಗೆ ಸೀಟು ಹಂಚಿಕೆ…
ರಾಮನಗರ: ಚನ್ನಪಟ್ಟಣ-ರಾಮನಗರ ಭಾಗದಲ್ಲಿ ಕಾಡಾನೆ ಉಪಟಳ ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ಎರಡು ಕಾಡಾನೆಗಳ ಸೆರೆಗೆ ಸರ್ಕಾರ ಅನುಮತಿ ನೀಡಿದೆ. ಚನ್ನಪಟ್ಟಣದ ಬಿ.ವಿ.ಹಳ್ಳಿ…
ಚಿಕ್ಕಬಳ್ಳಾಪುರ: ಇಸ್ರೇಲ್ ಹಾಗೂ ಅಮೇರಿಕಾ ನಡೆಸಿದ ದಾಳಿಯಲ್ಲಿ ಇರಾನ್ ಸರ್ವೋಚ್ಛ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆಯಾಗಿದ್ದು, ಖನೇನಿಯ ಮಗಳು,…