Andolana originals

ಓದುಗರ ಪತ್ರ: ತನಿಖೆ ಪಾರದರ್ಶಕವಾಗಿರಲಿ

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಹಗರಣದ ಕುರಿತು ಎಸ್ ಐಟಿ ಹಾಗೂ ಇ.ಡಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಇ.ಡಿ. ಅಧಿಕಾರಿಗಳ ತನಿಖಾ ವರದಿಯಲ್ಲಿ ಮಾಜಿ ಸಚಿವ ನಾಗೇಂದ್ರ ಪ್ರಕರಣದ ಪ್ರಮುಖ ಆರೋಪಿಯಾಗಿದ್ದರೆ, ಎಸ್‌ಐಟಿ ಅಧಿಕಾರಿಗಳ ವರದಿಯಲ್ಲಿ ಅವರ ಹೆಸರೇ ಇಲ್ಲದಿರುವುದು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.

ಇ.ಡಿ. ಅಧಿಕಾರಿಗಳ ವರದಿಯಲ್ಲಿ ಈ ಪ್ರಕರಣದ ಪ್ರಮುಖ ಆರೋಪಿ ನಾಗೇಂದ್ರ ಎಂಬುದು ಸ್ಪಷ್ಟವಾಗಿ ದಾಖಲಾಗಿದೆ. ಅಲ್ಲದೆ ಅವರ ಅದೇಶದಂತೆಯೇ ಹಣಕಾಸಿನ ವ್ಯವಹಾರ ನಡೆದಿರುವುದೂ ಬೆಳಕಿಗೆ ಬಂದಿದೆ. ಆದರೆ ಎಸ್‌ಐಟಿ ಅಧಿಕಾರಿಗಳು ನಾಗೇಂದ್ರ ಅವರ ಹೆಸರನ್ನೇ ಕೈಬಿಟ್ಟು ವರದಿ ಸಿದ್ಧಪಡಿಸಿರುವುದನ್ನು ನೋಡಿದರೆ ಉದ್ದೇಶ ಪೂರ್ವಕವಾಗಿಯೇ ನಾಗೇಂದ್ರ ಅವರಿಗೆ ರಕ್ಷಣೆ ನೀಡಲಾಗುತ್ತಿದೆಯೇನೋ ಎಂಬ ಅನುಮಾನ ಕಾಡುತ್ತದೆ.

ಒಂದು ವೇಳೆ ಈ ಹಗರಣದಲ್ಲಿ ನಾಗೇಂದ್ರರವರು ಭಾಗಿಯಾಗಿಲ್ಲ ಎನ್ನುವುದಾದರೆ ಅವರಿಂದ ರಾಜೀನಾಮೆ ಪಡೆದ್ದಿದ್ದಾರೂ ಏಕೆ? ಆದ್ದರಿಂದ ಸರ್ಕಾರ ಪಾರದರ್ಶಕವಾಗಿ ಈ ಪ್ರಕರಣದ ತನಿಖೆ ಮಾಡಬೇಕಿದೆ.

-ಎ.ಎಸ್‌.ಗೋಪಾಲಕೃಷ್ಣ, ರಾಮಕೃಷ್ಣನಗರ, ಮೈಸೂರು.

ಆಂದೋಲನ ಡೆಸ್ಕ್

Recent Posts

ಯುಪಿಯಲ್ಲಿ ತಯಾರಾಗುತ್ತಿರುವ ಬ್ರಹ್ಮೋಸ್‌ ಕ್ಷಿಪಣಿಗಳು ಪಾಕ್‌ ನಿದ್ದೆಗೆಡಿಸಿವೆ: ಅಮಿತ್‌ ಶಾ

ಲಕ್ನೋ: ಉತ್ತರ ಪ್ರದೇಶದಲ್ಲಿ ರಕ್ಷಣಾ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ದೊರೆಯುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿದ್ದಾರೆ.…

18 hours ago

ಪ್ರಜಾಪ್ರಭುತ್ವ ರಕ್ಷಿಸಲು ಗಾಂಧಿ ಜಯಂತಿಯಂದು ಪ್ರತಿಜ್ಞೆ ಮಾಡೋಣ: ಅಭಿಜಿತ್‌ ದೀಪ್ಕೆ

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಕಾಕ್ರೋಚ್ ಜನತಾ ಪಾರ್ಟಿ, ಅಂದರೆ ಸಿಜೆಪಿ ಆಗ್ರಹಿಸಿದೆ. ಸಿಜೆಪಿ…

19 hours ago

ಕೊಡಗು ಜಿಲ್ಲೆಯಲ್ಲಿ ಮುಂದುವರಿದ ಮಳೆ

ಕೊಡಗು: ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 20.89 ಮಿ.ಮೀ. ಮಳೆಯಾಗಿದೆ. ಕಳೆದ…

19 hours ago

ಜನರೊಂದಿಗೆ ಬೆರೆಯುವುದು ಅದ್ಭುತ ಅನುಭವ: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಸೇವಾ ಸಂಕಲ್ಪ ಅಭಿಯಾನದಡಿ ವಾರಣಾಸಿಯಿಂದ ಗುಜರಾತ್‌ನ ವಡನಗರಕ್ಕೆ ತೆರಳುತ್ತಿರುವ ಯುವಕರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸಂವಾದ ನಡೆಸಿದರು. ವಿಡಿಯೋ…

19 hours ago

2028ಕ್ಕೂ ಡಿಕೆಶಿ ಸಿಎಂ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ: ಸತೀಶ್ ಜಾರಕಿಹೊಳಿ

ಮೈಸೂರು: 2028ರಲ್ಲೂ ಡಿ.ಕೆ. ಶಿವಕುಮಾರ್ ಅವರೇ ಮುಖ್ಯಮಂತ್ರಿಯಾಗಲಿ. ಅವರ ನೇತೃತ್ವದಲ್ಲೇ ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬರಲಿ ಎಂದು ಸತೀಶ್…

22 hours ago

ಓದುಗರ ಪತ್ರ: ವಿದ್ಯುತ್ ಕಡಿತ ಮುಂಚಿತವಾಗಿ ಪ್ರಕಟಿಸಿ

ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…

1 day ago