ಈ ಬಾರಿಯ ದಸರಾ ಮಹೋತ್ಸವ ಯಾವುದೇ ಅಡೆತಡೆ ಇಲ್ಲದೇ ನಡೆದಿದೆ. ಆದರೆ ಪಾಸ್ ವಿತರಣೆಯಲ್ಲಿ ಗೊಂದಲ ಉಂಟಾಗಿರುವ ಬಗ್ಗೆ ಸುದ್ದಿ ಮಾಧ್ಯಮಗಳು ಹಾಗೂ ಜಾಲತಾಣ ಗಳಲ್ಲಿ ವ್ಯಾಪಕ ಚರ್ಚೆಯಾಗಿದೆ. ಹಣ ಕೊಟ್ಟು ಪಾಸ್ ಪಡೆದ ಅನೇಕರಿಗೆ ದಸರಾ ಕಾರ್ಯಕ್ರಮಗಳನ್ನು ವೀಕ್ಷಿಸಲು ಅವಕಾಶ ಸಿಕ್ಕಿಲ್ಲ.
ಇದರಿಂದಾಗಿ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ವಿರುದ್ಧ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಸಾರ್ವಜನಿಕರ ಹಿತದೃಷ್ಟಿಯಿಂದ, ಜಿಲ್ಲಾಡಳಿತವು ಈ ಘಟನೆಗಳನ್ನು ಗಂಭೀರವಾಗಿ ಪರಿಗಣಿಸಿ, ಸಮಗ್ರ ತನಿಖೆ ನಡೆಸಬೇಕು. ತಪ್ಪಿತಸ್ಥ ಅಧಿಕಾರಿಗಳು ಮತ್ತು ವ್ಯಕ್ತಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಜೊತೆಗೆ, ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ನೋಡಿಕೊಳ್ಳಲು, ಪಾಸ್ ವಿತರಣಾ ವ್ಯವಸ್ಥೆಯನ್ನು ಇನ್ನಷ್ಟು ಪಾರದರ್ಶಕ ಮತ್ತು ಜವಾಬ್ದಾರಿಯುತವಾಗಿ ರೂಪಿಸಬೇಕಾಗಿದೆ.
-ಗೋವಿತ್ ಕಿರಣ್, ರಾಜೇಂದ್ರ ನಗರ, ಮೈಸೂರು



