Andolana originals

ಓದುಗರ ಪತ್ರ| ಪ್ರಶ್ನೆಗಳ ಆಕ್ಷೇಪಣೆಗೆ ಶುಲ್ಕ ವಿಧಿಸುವುದು ಸರಿಯೇ?

ಕರ್ನಾಟಕ ಲೋಕಸೇವಾ ಆಯೋಗ ನಡೆಸಿದ ಕೆಎಎಸ್ ಪರೀಕ್ಷೆಯಲ್ಲಿ ಕನ್ನಡ ಭಾಷೆಗೆ ಅನುವಾದವಾಗಿದ್ದ ಪ್ರಶ್ನೆಗಳು ಗೊಂದಲಮಯವಾಗಿದ್ದು, ಸರಿಯಾಗಿ ಉತ್ತರಗಳನ್ನು ಬರೆಯಲಾಗಿಲ್ಲ ಎಂದು ಆರೋಪಿಸಿರುವ ಅಭ್ಯರ್ಥಿಗಳಿಗೆ ಸೆ.4ರವರೆಗೆ ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.

ಇತ್ತ ಕರ್ನಾಟಕ ಲೋಕಸೇವಾ ಆಯೋಗವು ಭಾಷಾಂತರ ಮಾಡುವವರಿಂದಲೇ ಪ್ರಶ್ನೆಗಳನ್ನು ಭಾಷಾಂತರ ಮಾಡಿಸಿದ್ದು, ಯಾವುದೇ ಗೂಗಲ್ ಅಥವಾ ಎಐ ತಂತ್ರಜ್ಞಾನ ಬಳಸಿ ಭಾಷಾಂತರ ಮಾಡಿಲ್ಲ ಎಂದು ಹೇಳಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ. ಸದ್ಯ ಈ ಬಗ್ಗೆ ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶವನ್ನು ನೀಡಿದ್ದರೂ ಪ್ರತಿ ಪಶ್ನೆಗೆ 50 ರೂ.ಗಳ ಶುಲ್ಕ ಪಾವತಿಸಬೇಕಿದೆ. ಆಯೋಗ ಮಾಡಿದ ತಪ್ಪಿಗೆ ಆಕ್ಷೇಪಣೆ ಸಲ್ಲಿಸುವ ಪ್ರಶ್ನೆಗಳ ಬಗ್ಗೆ ಆಕ್ಷೇಪ ಸಲ್ಲಿಸುವ ಅಭ್ಯರ್ಥಿಗಳಿಗೆ ಶುಲ್ಕ ವಿಧಿಸುವುದು ಯಾವ ನ್ಯಾಯ?

ಅನೇಕ ಬಡ ಅಭ್ಯರ್ಥಿಗಳು ಹಣವನ್ನು ಕೂಡಿಟ್ಟು ದೂರದ ಊರು ಗಳಲ್ಲಿ ವಾಸ್ತವ್ಯ ಹೂಡಿ ಕೋಚಿಂಗ್ ಸೆಂಟರ್‌ಗಳನ್ನು ಸೇರಿ ತರಬೇತಿ ಪಡೆದು ಪರೀಕ್ಷೆ ಬರೆದಿರುತ್ತಾರೆ. ಈಗ ಆಯೋಗ ಮಾಡಿದ ತಪ್ಪಿಗೆ ಈ ಅಭ್ಯರ್ಥಿಗಳು ಮತ್ತೆ ಶುಲ್ಕ ಪಾವತಿಸಬೇಕು ಎಂದರೆ ಹಣ ಎಲ್ಲಿಂದ ತರುವುದು? ಆದ್ದರಿಂದ ಕರ್ನಾಟಕ ಲೋಕಸೇವಾ ಆಯೋಗವು ಆಕ್ಷೇಪಣೆ ಸಲ್ಲಿಸಲು ವಿಧಿಸಿರುವ ಶುಲ್ಕವನ್ನು ತೆಗೆದುಹಾಕಬೇಕು.

-ಬಿ.ಟಿ.ಅಂಬಿಕಾ, ಹಾಸನ.

ಆಂದೋಲನ ಡೆಸ್ಕ್

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

9 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

10 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

11 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

11 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

16 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

16 hours ago