Andolana originals

ಓದುಗರ ಪತ್ರ: ಆಟೋ ಗ್ಯಾಸ್ ಅಭಾವ ಕೃತಕವೋ? ನೈಜವೋ?

ಕೊಲ್ಲಿ ಯುದ್ಧದ ನೆಪದಲ್ಲಿ ಬಂಡವಾಳಶಾಹಿಗಳು  ಕೆಜಿಗೆ ರೂ. ೮೯ ಇದ್ದ  ಆಟೋ ಗ್ಯಾಸ್ ಗ್ಯಾಸ್ ಅನ್ನು ರೂ. ೧೭೦ಕ್ಕೆ ಮಾರುತ್ತಾ ಹಗಲು ದರೋಡೆ ಮಾಡುತ್ತಿದ್ದರೂ ಸರ್ಕಾರ ಮೂಕ ಪ್ರೇಕ್ಷಕವಾಗಿದೆ. ಕಳೆದ ೪೦ ದಿನಗಳಿಂದ ಆಟೋ ಚಾಲಕರು ಗ್ಯಾಸ್ ಬಂಕ್‌ಗಳ ಮುಂದೆ ರಾತ್ರಿಯಿಡೀ ಕಾಯುತ್ತಿದ್ದು, ಅವರ ಕುಟುಂಬಗಳು ಉಪವಾಸ ಬೀಳುತ್ತಿವೆ. ಕೇವಲ ರೂ. ೫೦೦ ಮಿತಿಯ ಗ್ಯಾಸ್ ನೀಡುತ್ತಿರುವುದು ದುರಂತ.

ಇದು ಕೇವಲ ಇಂಧನ ಕೊರತೆಯಲ್ಲ. ಆಡಳಿತ ಯಂತ್ರದ ಸಂಪೂರ್ಣ ವೈಫಲ್ಯ ಹಾಗೂ ದಿವ್ಯ ನಿರ್ಲಕ್ಷ್ಯದ ಸಂಕೇತ.  ಮಾರುಕಟ್ಟೆಯಲ್ಲಿನ ಈ ಅರಾಜಕತೆಯನ್ನು ತಡೆಗಟ್ಟಲು ಸರ್ಕಾರ ತಕ್ಷಣವೇ ಗ್ಯಾಸ್ ದರವನ್ನು ನಿಯಂತ್ರಿಸಿ ಕಾಳಸಂತೆಕೋರರ ಮೇಲೆ ನಿರ್ದಾಕ್ಷಿಣ್ಯವಾಗಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು. ಬಡವರ ಹೊಟ್ಟೆ ಮೇಲೆ ಹೊಡೆಯುವ ಈ ದಬ್ಬಾಳಿಕೆ ನಿಲ್ಲದಿದ್ದರೆ, ಮುಂಬರುವ ದಿನಗಳಲ್ಲಿ ಬೀದಿಗಿಳಿದು ಉಗ್ರ ಹೋರಾಟ ಮಾಡುವುದು ಅನಿವಾರ್ಯವಾಗುತ್ತದೆ. ಸರ್ಕಾರ ಇನ್ನಾದರೂ ಎಚ್ಚೆತ್ತುಕೊಳ್ಳಲಿ. ಸಾರ್ವಜನಿಕ ಸಾರಿಗೆಯ ಜೀವನಾಡಿಯಾಗಿರುವ ಆಟೋಗಳನ್ನು ನಂಬಿರುವ ಪ್ರಯಾಣಿಕರಿಗೂ ಇದರಿಂದ ತೀವ್ರ ತೊಂದರೆಯಾಗುತ್ತಿದ್ದು, ಪರ್ಯಾಯ ಇಂಧನ ಪೂರೈಕೆ ವ್ಯವಸ್ಥೆ ಕಲ್ಪಿಸಲು ಮೀನ ಮೇಷ ಎಣಿಸುತ್ತಿರುವ ಸರ್ಕಾರದ ನಡೆಯು ಅಕ್ಷಮ್ಯ ಅಪರಾಧವಾಗಿದೆ.

-ಡಾ.ಎಚ್.ಕೆ.ವಿಜಯಕುಮಾರ, ಬೆಂಗಳೂರು

ಆಂದೋಲನ ಡೆಸ್ಕ್

Recent Posts

ಕೊಪ್ಪಳದ ಗವಿಸಿದ್ದೇಶ್ವರ ಸ್ವಾಮಿಗಳಿಂದ ಈ ಬಾರಿ ದಸರಾ ಉದ್ಘಾಟನೆ

ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಈ ಬಾರಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ…

7 hours ago

ಕಾಡಾನೆ ದಾಳಿಗೆ 75 ತೆಂಗಿನ ಮರ ನಾಶ: ಬೆಳೆ ಪರಿಹಾರಕ್ಕೆ ರೈತ ಕುಟುಂಬದ ಮನವಿ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಕಾಡಾನೆಗಳ ನಿರಂತರ ದಾಳಿಯಿಂದ ಕಷ್ಟಪಟ್ಟು ಬೆಳೆದಿದ್ದ ತೆಂಗಿನ ಮರ ಸಂಪೂರ್ಣ ನಾಶವಾಗಿರುವುದರಿಂದ…

13 hours ago

ಅ.29ರಿಂದ ನ.11ರವರೆಗೆ ಹಾಸನಾಂಬಾ ಜಾತ್ರಾ ಮಹೋತ್ಸವ

ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಈ ಕುರಿತು ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಮಾಹಿತಿ…

13 hours ago

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್ ನೀಡಿದ ಸುಪ್ರೀಂಕೋರ್ಟ್‌

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, CWMA ನೀಡಿರುವ ಆದೇಶವನ್ನು ಪಾಲಿಸುವಂತೆ ಸುಪ್ರೀಂಕೋರ್ಟ್‌ ಸೂಚನೆ ನೀಡಿದೆ.…

14 hours ago

ಕೋಟೆ ಟಿಎಪಿಸಿಎಂಎಸ್: ನಾಳೆ ಮೈತ್ರಿ ಪಕ್ಷದ 8 ಸದಸ್ಯರ ರಾಜೀನಾಮೆ ಭವಿಷ್ಯ ನಿರ್ಧಾರ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ಟಿಎಪಿಸಿಎಂಎಸ್‌ನ ಎಂಟು ಜನ ನಿರ್ದೇಶಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅಂಗೀಕಾರ ಮಾಡಲು ಮತ್ತು…

15 hours ago

ಓದುಗರ ಪತ್ರ: ಸಿಗಲಿ ನ್ಯಾಯ!

ಸಿಗಲಿ ನ್ಯಾಯ! ಮರುಜೀವ ಬಂದಿದೆ ಹೊಸಬೆಳಕು ಮೂಡಿದೆ ಸುಪ್ರೀಂಕೋರ್ಟಿನ ಸೌಜನ್ಯಾ ಪ್ರಕರಣದ ಮರುತನಿಖೆಯ ಆದೇಶ! ಸಲಾಂ ಸುಪ್ರೀಂಗೆ! ನಡೆಯಲಿ ತನಿಖೆ…

20 hours ago