ಓದುಗರ ಪತ್ರ
ವಿಶ್ವವಿಖ್ಯಾತ ಮೈಸೂರು ದಸರೆಗೆ ತನ್ನದೇ ಆದ ಇತಿಹಾಸವಿದೆ. ಇತ್ತೀಚಿನ ವರ್ಷಗಳಲ್ಲಿ ಸಮುದಾಯಗಳಿಗೆ ಅನುಕೂಲವಾಗುವಂತಹ ಇಲ್ಲವೆ ಸ್ಪೂರ್ತಿ ನೀಡುವಂತಹ ಕಾರ್ಯಕ್ರಮಗಳು ಸೇರ್ಪಡೆಯಾಗುತ್ತಿವೆ. ಆದರೆ ಈ ವರ್ಷ ದಿಢೀರ್ ಅಂತ ಕಂಬಳ ಸೇರ್ಪಡೆಗೊಳಿಸಿರುವುದು ಅಚ್ಚರಿ ಜೊತೆಗೆ ವಿವಾದಕ್ಕೂ ಕಾರಣವಾಗಿದೆ. ದಸರಾದಲ್ಲಿ ಕಂಬಳ ಆಯೋಜನೆ ಮಾಡುವುದು ಸರಿಯಲ್ಲ. ಅದು ಕರಾವಳಿ ಭಾಗದ ಸಂಸ್ಕೃತಿ. ಅದಕ್ಕೆ ಅಗತ್ಯವಾದ ವಾತಾವರಣವನ್ನು ಮೈಸೂರಿನಲ್ಲಿ ಸಿದ್ಧಮಾಡಿಕೊಂಡು ಆಯೋಜಿಸಬೇಕೆಂಬ ಹಂಬಲ ಏಕೆ ಬಂದಿದೆ ಎಂಬುದೇ ಹಲವರ ಪ್ರಶ್ನೆಯಾಗಿದೆ.
ಕಂಬಳ ಆಯೋಜನೆಗೆ ಸಿದ್ಧತೆಯ ನೆಪದಲ್ಲಿ ಕಾನೂನು ಉಲ್ಲಂಸಿ ಮರಗಳನ್ನು ಕಡಿದು ಪರಿಸರ ನಾಶ ಮಾಡಲಾಗುತ್ತಿದೆ ಎಂಬುದು ಪರಿಸರ ವಾದಿಗಳು ಹಾಗೂ ಇತರೆ ಸಂಘ ಸಂಸ್ಥಗಳ ಆಕ್ರೋಶ, ಆರೋಪ. ರಾಜ್ಯದ ಹಲವೆಡೆ ಬರ ಆತಂಕದಲ್ಲಿ ರೈತರು ತಲೆಮೇಲೆ ಕೈಹೊತ್ತು ಕೂರುವ ಸ್ಥಿತಿಯಲ್ಲಿದ್ದಾರೆ. ಇಂತಹವರ ನೆರವಿಗೆ ಸರ್ಕಾರ ಮುಂದಾಗಬೇಕೇ ಹೊರತು ಕಂಬಳವನ್ನು ನಡೆಸಿಯೇ ತೀರುತ್ತೇವೆ ಎಂಬ ಹಠ ಒಳ್ಳೆಯದಲ್ಲ. ಇದಕ್ಕೆ ಖರ್ಚುಮಾಡುವ ಹಣವನ್ನು ರೈತರಿಗೆ ಅನುಕೂಲವಾಗುವ ರೀತಿ ಖರ್ಚು ಮಾಡಿದರೆ ಅರ್ಥಪೂಣವಾಗಿರುತ್ತದೆ.
-ಸಿದ್ದಲಿಂಗೇಗೌಡ, ಹೈರಿಗೆ ಗ್ರಾಮ, ಹೆಚ್. ಡಿ. ಕೋಟೆ ತಾಲ್ಲೂಕು
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ೧೦೦ ದಿನಗಳನ್ನು ಪೂರ್ಣಗೊಳಿಸಿದ್ದಾರೆ. ರಾಜ್ಯದ ಜನತೆಗೆ ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ. ಬಡವರು, ರೈತರು, ಮಹಿಳೆಯರು, ವಿದ್ಯಾರ್ಥಿಗಳ…
ಶುಭಾ ಖಟಾವಕರ ಮ್ಹೆತ್ರಸ್ “ಕೇವಲ ಒಂದು ದಶಕದಲ್ಲಿ ಕೃತ್ರಿಮ ಬುದ್ಧಿಮತ್ತೆಯು (ಎಐ) ಮನುಕುಲವನ್ನು ನಾಶಪಡಿಸಲಿದೆ" ಎಂದು ಎಐನ ದೈತ್ಯ ಸಂಸ್ಥೆಯಾದ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ರಾಜಕೀಯದಲ್ಲಿ ೧೯೮೩ರ ರಾಜಕೀಯ ಸನ್ನಿವೇಶ ರೂಪುಗೊಳ್ಳುತ್ತಿದೆಯೇ ಎಂಬ ಅನುಮಾನಗಳು ಶುರುವಾಗಿವೆ. ಅಂದ ಹಾಗೆ…
ಎಂ.ಕೇಶವ ಎರಡು ವರ್ಷಗಳಿಂದ ನಡೆಯುತ್ತಿರುವ ಕಾಮಗಾರಿಯಿಂದ ಕಂಗಾಲು; ಹಿರಿಯರು, ಮಹಿಳೆಯರು, ಸವಾರರಿಗೆ ಓಡಾಟವೇ ಸವಾಲು ಮೈಸೂರು: ಒಂದರ ಮೇಲೊಂದರಂತೆ ಎರಡು…
ಪ್ರಶಾಂತ್ ಎನ್.ಮಲ್ಲಿಕ್ ಸಾರ್ವಜನಿಕರಿಗೆ ತೊಂದರೆ ತಪ್ಪುತ್ತದೆ: ಸಮರ್ಥನೆ ಡಿಜೆಗೆ ಕಡಿವಾಣ ಸರಿಯಲ್ಲ: ಅಸಮಾಧಾನ ಮೈಸೂರು: ರಾಜ್ಯದಲ್ಲಿ ಗೌರಿ ಗಣೇಶ ಹಬ್ಬದ…
ಆರ್.ಶ್ರೀನಿವಾಸ್ ೪೦೦೦ ಕೊಳವೆಬಾವಿಗಳಲ್ಲಿ ಅಂತರ್ಜಲ ಕುಸಿತ, ಕುಡಿಯುವ ನೀರಿಗೂ ಹಾಹಾಕಾರ ಕೆ.ಆರ್.ಪೇಟೆ: ಸುಮಾರು ೫೦ ವರ್ಷಗಳ ಅವಧಿಯಲ್ಲಿ ಮೊದಲ ಬಾರಿಗೆ…