Andolana originals

ಓದುಗರ ಪತ್ರ: ಇದೇನು ಪಾದಚಾರಿ ರಸ್ತೆಯೋ ಅಥವಾ…?

ಅನ್ನ ಬೆಂದಿದೆಯೋ ಇಲ್ಲವೋ ಎಂಬುದನ್ನುಪರೀಕ್ಷಿಸಲು ಪಾತ್ರೆಯ ಅನ್ನವನ್ನು ಮುಟ್ಟಿ ನೋಡಬೇಕಿಲ್ಲ. ಒಂದು ಅಗುಳನ್ನು ಪರೀಕ್ಷಿಸಿದರೆ ಸಾಕು.

ಅಂತೆಯೇ ಮೈಸೂರಿನಲ್ಲಿ ಸಂಚಾರ ವ್ಯವಸ್ಥೆ ಹೇಗಿದೆ ಎಂಬುದನ್ನು ಅರಿಯಲು ಇಡೀಮೈಸೂರು ನಗರ ಪ್ರದಕ್ಷಿಣೆ ಮಾಡಬೇಕಿಲ್ಲ. ಮೈಸೂರಿನ ಹೃದಯ ಭಾಗದಲ್ಲಿರುವ ಅರಮನೆಯ ದಕ್ಷಿಣ ಪ್ರವೇಶ ದ್ವಾರದ ಎದುರು ಇರುವ ಪಾದಚಾರಿ ಮಾರ್ಗವನ್ನು ಗಮನಿಸಿದರೆ ಸಾಕು. ಸಂಚಾರ ಪೊಲೀಸರ ಭಯವೇ ಇಲ್ಲ ಎಂಬುದನ್ನು ಈ ಚಿತ್ರ ಸಾರಿಹೇಳುತ್ತಿದೆ. ಮೈಸೂರಿನ ಅರಮನೆಯ ದಕ್ಷಿಣ ಪ್ರವೇಶ ದ್ವಾರದ ಎದುರು ಇರುವ ಪಾದಚಾರಿ ಮಾರ್ಗದಲ್ಲಿ ದ್ವಿಚಕ್ರ ಸವಾರಿಯೂ ನಡೆಯುತ್ತದೆ ಜತೆಗೆ ಅ ವಾಹನ ನಿಲ್ಲಿಸುವ ವಾಹನಗಳ ಸ್ಟಾಂಡ್ ಮಾಡಿಕೊಳ್ಳಲಾಗಿದೆ. ಸುಂದರವಾದ ಪಾದಚಾರಿ ರಸ್ತೆಯನ್ನು ಈ ರೀತಿ ಮಾಡಿಕೊಂಡರೆ ಸದ್ಯದಲ್ಲೆ ಫುಟ್‌ಪಾತ್ ವ್ಯಾಪಾರಿಗಳು ಇಲ್ಲಿಗೆ ಬಂದರೂ ಆಶ್ಚರ್ಯವಿಲ್ಲ. ಇದನ್ನು ಸಂಚಾರ ಪೊಲೀಸರ ನಿಷ್ಕ್ರಿಯತೆ ಎನ್ನಬೇಕೊ? ನಿರ್ಲಕ್ಷ್ಯವೆನ್ನಬೇಕೊ? ಇದಕ್ಕಿಂತ ಸಾಕ್ಷಿ ಬೇಕೇ? ಹಿರಿಯ ಪೊಲೀಸ್ ಅಧಿಕಾರಿಗಳು ಈ ಬಗ್ಗೆ ಗಮನಹರಿಸಿ ಅರಮನೆಯ ದಕ್ಷಿಣ ದ್ವಾರದ ಬಳಿ ಇರುವ ಪಾದಚಾರಿ ಮಾರ್ಗದಲ್ಲಿ ವಾಹನಗಳು ಸಂಚರಿಸದಂತೆ ಕ್ರಮಕೈಗೊಳ್ಳಬೇಕು. ಹಾಗೆಯೇ ದ್ವಿಚಕ್ರ ವಾಹನಗಳು ನಿಲ್ಲದಂತೆ ನೋಡಿಕೊಳ್ಳಬೇಕಾಗಿದೆ.

-ಪಿ.ಜೆ.ರಾಘವೇಂದ್ರ, ಮೈಸೂರು

ಆಂದೋಲನ ಡೆಸ್ಕ್

Recent Posts

ಮೈಸೂರು ದಸರಾ ಮಹೋತ್ಸವಕ್ಕೆ ಅಧಿಕೃತ ಚಾಲನೆ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ ಸಿಕ್ಕಿದೆ. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆಯುತ್ತಿರುವ 416ನೇ ನಾಡಹಬ್ಬ ದಸರಾ…

8 mins ago

ಓದುಗರ ಪತ್ರ: ಬಳಸಿದ ಅಡುಗೆ ಎಣ್ಣೆ: ಯೋಜನೆ ಪ್ರಶಂಸನೀಯ

ಬಳಸಿದ ಅಡುಗೆ ಎಣ್ಣೆಯನ್ನು ಸರಕಾರವೇ ಸಂಗ್ರಹಿಸಿ ಜೈವಿಕ ಇಂಧನವಾಗಿ (ಬಯೋಡೀಸೆಲ) ಪರಿವರ್ತಿಸುವ ಯೋಜನೆ ಪ್ರಶಂಸನೀಯ. ಪುನರಾವರ್ತಿತ ಎಣ್ಣೆ ಬಳಕೆಯಿಂದ ಹೊರಹೊಮ್ಮುವ…

52 mins ago

ಓದುಗರ ಪತ್ರ: ನಕಲಿ ಔಷಧಿಗಳ ಜಾಲದ ತಡೆಗೆ ಕಠಿಣ ಕ್ರಮ ಕೈಗೊಳ್ಳಿ

ಮಾರುಕಟ್ಟೆಯಲ್ಲಿ ನಕಲಿ ಔಷಧಿಗಳ ಮಾರಾಟ ಹೆಚ್ಚಾಗುತ್ತಿರುವುದು ಅಂತಕ ಮೂಡಿಸಿದೆ. ಬ್ರಾಂಡೆಡ್ ಹೆಸರಿನಲ್ಲಿ ಸೂಕ್ತ ಪ್ರಮಾಣದಲ್ಲಿ ರಾಸಾಯನಿಕಗಳಿಲ್ಲದ ಅಥವಾ ಹಾನಿಕಾರಕ ಘಟಕಾಂಶಗಳಿರುವ…

59 mins ago

ಹರಿಕಥೆ ಮೇಷ್ಟ್ರು ಮಾದೇಶ ಇನ್ನಿಲ್ಲ

ಗುಂಡ್ಲುಪೇಟೆ : ತಾಲ್ಲೂಕಿನ ಬಾಚಹಳ್ಳಿಗ್ರಾಮದ ನಿವಾಸಿ, ಹರಿಕಥೆ ಮೇಷ್ಟ್ರು ಮಾದೇಶ(55) ಅವರು ಶನಿವಾರ ರಾತ್ರಿ ನಿಧನರಾದರು. ಚಿಕ್ಕನಿಂದಲೇ ಕಲೆಯನ್ನು ಮೈಗೂಡಿಸಿಕೊಂಡಿದ್ದ…

1 hour ago

ಜೆನ್ ಝೀ ಶಕ್ತಿಗೆ ಹೆದರಿದ ಕೇಂದ್ರದ ಎನ್‌ಡಿಎ ಸರ್ಕಾರ

ದೆಹಲಿ ಕಣ್ಣೋಟ, ಶಿವಾಜಿ ಗಣೇಶನ್‌ ಅವರ ವಾರದ ಅಂಕಣ  ಜನರು ಮತ್ತು ಯುವಕರು ದಿಕ್ಕೆಟ್ಟ ಆಡಳಿತದ ವಿರುದ್ಧ ಸಿಡಿದು ಬೀದಿಗಿಳಿದಿದ್ದಾರೆ…

1 hour ago

ಮತ್ತೆ ಹುಯ್ಯುತ್ತಿರುವ ಪ್ರತಿಭಟನೆಯ ಸುರಿಮಳೆ

ಕೆ.ನೀಲಾ ಕರುನಾಡ ಹೋರಾಟಗಾರ್ತಿ ಕಾಮ್ರೇಡ್ ನೀಲಾ ನೆನಪುಗಳು ನಾನು ಆಗ ಏಳು ಅಥವಾ ಎಂಟನೇ ತರಗತಿ ಓದುತ್ತಿದ್ದೆ ಎಂದು ನೆನಪು.…

2 hours ago