Andolana originals

ಓದುಗರ ಪತ್ರ: ಭಾರತದಲ್ಲಿ ಹೀಗೆ ಪ್ರತಿಭಟನೆ ಸಾಧ್ಯವೇ?

ದೇಶವೊಂದರ ಮುಖ್ಯಸ್ಥ ಇನ್ನೊಂದು ದೇಶದ ವಿರುದ್ಧ ಯುದ್ಧ ಸಾರಿದ್ದಾರೆ. ಈ ಸಂಘರ್ಷದಲ್ಲಿ ತಮ್ಮ ಜನರೂ ಪ್ರಾಣ ಕಳೆದುಕೊಳ್ಳುತ್ತಾರೆ ಎಂಬುದರ ಅರಿವಿದ್ದರೂ ಆತನದ್ದು ಅಪಾರ ಅಹಂಕಾರ. ಇಂತಹ ಸರ್ವಾಧಿಕಾರಿ ಧೋರಣೆಯಿಂದ ಅಭಿವ್ಯಕ್ತಿ ಸ್ವಾತಂತ್ರ್ಯ ಹರಣಕ್ಕೂ ಮುಂದಾಗಿರುವ ಮುಖ್ಯಸ್ಥನ ವಿರುದ್ಧ ಇಡೀ ದೇಶವೇ ತಿರುಗಿಬಿದ್ದಿದೆ. ಎಲ್ಲ ವಯೋಮಾನದವರೂ ಪ್ರತಿಭಟನೆಯ ಅಸ್ತ್ರ ಹಿಡಿದು ಬೀದಿಗಿಳಿದಿದ್ದಾರೆ. ಮುಖ್ಯಸ್ಥನ ಪ್ರತಿಕೃತಿಯನ್ನು ದಹಿಸಿದ್ದಾರೆ. ಸಿಕ್ಕಿದ್ದರೆಲ್ಲೆಲ್ಲ ಆತನ ಚಿತ್ರಪಟಕ್ಕೆ ಹೊಡೆಯುತ್ತಿದ್ದಾರೆ. ನಮಗೆ ರಾಜಪ್ರಭುತ್ವ ಬೇಕಿಲ್ಲ; ಪ್ರಜಾಪ್ರಭುತ್ವ ಬೇಕು ಎಂದು ಗುಡುಗಿದ್ದಾರೆ. ಹಾಗಿದ್ದರೂ ಯುದ್ಧದಿಂದ ಹಿಂದೆ ಸರಿಯುವ ಜನಪರ, ಜೀವಪರ ಚಿಂತನೆ ಆತನಿಗಿಲ್ಲ. ಆದರೆ, ಜನಾಕ್ರೋಶವನ್ನು ಎದುರಿಸುವುದು ಅಷ್ಟು ಸುಲಭವಲ್ಲ ಎಂಬುದು ಆ ಮುಖ್ಯಸ್ಥನಿಗೆ ಅರ್ಥ ಆಗಿದ್ದಂತೆ ಇಲ್ಲ. ಇದು ಯಾವ ದೇಶದ ಕಥೆ ನಿಮಗೆ ಗೊತ್ತಾಯಿತೆ? ಇದು ಅಮೆರಿಕ ದೇಶದ ಪರಿಸ್ಥಿತಿ. ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅಟ್ಟಹಾಸದ ಪರಿಣಾಮ.

ಭಾರತದಲ್ಲಿ ಪ್ರಸ್ತುತ ಕಾಲಘಟ್ಟದಲ್ಲಿ ನಡೆಯುತ್ತಿರುವ ಬೆಳವಣಿಗೆಗಳನ್ನು ಗಮನಿಸಿದರೆ, ಇಲ್ಲಿಯೂ ಅಮೆರಿಕದಂತಹ ಪ್ರತಿಭಟನೆಗಳು ನಡೆಯುವುದು ಸಾಧ್ಯವೆ? ವಾಕ್ ಸ್ವಾತಂತ್ರ್ಯಕ್ಕೆ ಧಕ್ಕೆಯಾದರೆ ಜನರು ಆಕ್ರೋಶ ವ್ಯಕ್ತಪಡಿಸಲು ಅವಕಾಶ ಇದೆಯೇ? ಜನಪರ ಹೋರಾಟಗಾರರು ಜೈಲಿಗೆ ಹೋಗದೇ ತಪ್ಪಿಸಿಕೊಳ್ಳಲು ಅವಕಾಶ ಇದೆಯೇ? ಎಲ್ಲರೂ ಯೋಚಿಸಬೇಕಾದ ಜರೂರತ್ತು ಇದೆ.

ರಾಜಶೇಖರ್, ಜನತಾನಗರ, ಮೈಸೂರು

ಆಂದೋಲನ ಡೆಸ್ಕ್

Recent Posts

ವರ್ತಕರಿಗೆ ಹಬ್ಬದ ನಿರಾಳತೆ: ದೀಪಾವಳಿ ನಂತರಕ್ಕೆ UPI ಮರ್ಚೆಂಟ್‌ ಶುಲ್ಕ ಜಾರಿ ಮುಂದೂಡಿಕೆ

ನವದೆಹಲಿ: ವರ್ತಕರಿಗೆ ದೀಪಾವಳಿ ಸಂದರ್ಭದಲ್ಲಿ ತಾತ್ಕಾಲಿಕ ನಿರಾಳತೆ ಸಿಕ್ಕಿದೆ. ಅಕ್ಟೋಬರ್‌ 15ರಿಂದ ಜಾರಿಯಾಗಬೇಕಿದ್ದ ಆಯ್ದ UPI ಮರ್ಚೆಂಟ್‌ ಪಾವತಿಗಳ ಮೇಲಿನ…

12 hours ago

ಸ್ಟಿಂಗ್ ಆಪರೇಷನ್ ಬಗ್ಗೆ ಕುಮಾರಸ್ವಾಮಿಯನ್ನೇ ಕೇಳಿ: ಸಚಿವ ಪುಟ್ಟರಂಗಶೆಟ್ಟಿ

ಮೈಸೂರು: ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಸ್ಟಿಂಗ್ ಆಪರೇಷನ್ ವಿಚಾರಕ್ಕೆ ಸಂಬಂಧಿಸಿದಂತೆ ಪುಟ್ಟರಂಗಶೆಟ್ಟಿ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. “ಸ್ಟಿಂಗ್ ಆಪರೇಷನ್ ಅಂದರೇನು ಎಂಬುದು…

13 hours ago

ಸ್ಟಿಂಗ್ ಆಪರೇಷನ್ ಆರೋಪ: ಸಾಕ್ಷಿ ಬಿಡುಗಡೆಗೆ ಶಾಸಕ ತನ್ವೀರ್ ಸೇಠ್ ಒತ್ತಾಯ

ಮೈಸೂರು: ಸ್ಟಿಂಗ್ ಆಪರೇಷನ್ ಬಗ್ಗೆ ದಿನಕ್ಕೊಂದು ಹೇಳಿಕೆ ನೀಡುವ ಬದಲು, ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ ಎಂದು ಶಾಸಕ ತನ್ವೀರ್ ಸೇಠ್…

13 hours ago

ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಮೈಸೂರು: ಮಾಜಿ ಮುಖ್ಯಮಂತ್ರಿ…

13 hours ago

ಕಾಡಾನೆ ದಾಳಿ: ರೈತ ಸಾವು

ನಂಜನಗೂಡು: ಜಮೀನಿಗೆ ರಾತ್ರಿ ಕಾವಲು ಕಾಯಲು ತೆರಳಿದ್ದ ರೈತ, ಬೆಳಿಗ್ಗೆ ಮನೆಗೆ ಮರಳುವಾಗ ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ನಂಜನಗೂಡು ತಾಲ್ಲೂಕಿನ…

14 hours ago

ಓದುಗರ ಪತ್ರ: ರಾಜಕಾರಣಿಗಳದ್ದು ‘ಆಚಾರವಿಲ್ಲದ ನಾಲಿಗೆ’ ಆಗಬಾರದಲ್ಲವೇ?

ಕೆಲವು ಜನಪ್ರತಿನಿಧಿಗಳೂ ಸೇರಿದಂತ ಹಲವು ರಾಜಕಾರಣಿಗಳು ಸಾರ್ವಜನಿಕ ವೇದಿಕೆಗಳಲ್ಲಿ ಹಾಗೂ ಇತರ ಸಭೆ-ಸಮಾರಂಭಗಳಲ್ಲಿ ಪ್ರಜ್ಞಾವಂತರೇನೂ ಸಾಮಾನ್ಯ ಜನರಿಗೂ ಮುಜುಗರವಾಗುವಂತಹ ಮಾತುಗಳನ್ನು…

17 hours ago