ಓದುಗರ ಪತ್ರ
ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ ನಡುವೆ ತಮಿಳುನಾಡು ರಾಜ್ಯ ಎಂದಿನಂತೆ ತನ್ನ ನೀರಿನ ಹಕ್ಕಿನ ಕ್ಯಾತೆಯನ್ನು ಮುಂದುವರಿಸಿದೆ.
ತಮಿಳುನಾಡು ತಮ್ಮ ಪಾಲಿನ ನೀರಿಗೆ ಹಕ್ಕು ಮಂಡಿಸಿರುವುದು ಶೋಚನೀಯ. ನಮ್ಮ ರಾಜ್ಯವು ಕಳೆದ ಸಾಲಿನಲ್ಲಿ ೨೩೦ ಟಿಎಂಸಿಗಳಿಗೂ ಹೆಚ್ಚಿನ ನೀರನ್ನು ತಮಿಳುನಾಡಿಗೆ ಹರಿಸಿದೆ. ಕಾವೇರಿ ನೀರು ನಿಯಂತ್ರಣ ಸಮಿತಿ ಏಕಪಕ್ಷೀಯವಾಗಿಯೇ ತಮಿಳುನಾಡಿಗೆ ಕರ್ನಾಟಕ ನೀರು ಹರಿಸಬೇಕೆಂದು ಆದೇಶ ನೀಡುತ್ತಿರುವುದು ಸರಿಯಲ್ಲ. ಬಹುಶಃ ಲೋಕಸಭೆಯಲ್ಲಿ ಮಂಡಿಸಲಿರುವ ಕೆಲವು ಮಸೂದೆಗಳ ಬೆಂಬಲವನ್ನು ತಮಿಳುನಾಡಿನ ಡಿಎಂಕೆ ಮತ್ತು ಇತರೆ ಪಕ್ಷಗಳಿಂದ ಪಡೆಯುವ ಸಲುವಾಗಿ ಕರ್ನಾಟಕವನ್ನು ಹರಕೆಯ ಕುರಿಯನ್ನಾಗಿ ಮಾಡುವ ಇರಾದೆಯನ್ನೂ ತಳ್ಳಿಹಾಕುವಂತಿಲ್ಲ.
ಇನ್ನು ಕಾವೇರಿ ನದಿ ನೀರು ಬಿಡುಗಡೆ ವಿರೋಧಿಸುವ ವಾಟಾಳ್ ನಾಗರಾಜ್ ರವರು, ನಮ್ಮ ಕೈಮೇಲೆ ನಾವೇ ಬರೆಹಾಕಿಕೊಂಡಂತೆ, ನಮ್ಮ ರಾಜ್ಯವನ್ನು ಬಂದ್ ಮಾಡಿ, ನಮ್ಮ ವಹಿವಾಟಿಗೆ ಧಕ್ಕೆ ತಂದುಕೊಂಡು ಮತ್ತು ನಮ್ಮ ಜನಕ್ಕೆ ತೊಂದರೆಯಾಗುವಂತೆ ಮಾಡಿದರೆ ಆಗುವ ಲಾಭವೇನು? ಕೇಂದ್ರದ ವಿರುದ್ಧ ಜನ ದನಿ ಎತ್ತಬೇಕು, ಅದಕ್ಕೆ ರಾಜ್ಯದ ಎಲ್ಲ ಸಂಸದರು ಪಕ್ಷಾತೀತವಾಗಿ ಹೋರಾಡಬೇಕು. ಅಂತರರಾಜ್ಯ ನದಿ ನೀರು ವಿವಾದ ಕಾಯ್ದೆ ೧೯೫೬ ಅನ್ನು ಇಂದಿನ ಪರಿಸ್ಥಿತಿಗೆ ತಕ್ಕಂತೆ ಮಾರ್ಪಡಿಸಬೇಕೆನ್ನುವ ಕೂಗು ಪ್ರಧಾನಿಯನ್ನು ಮುಟ್ಟಲಿ. ವಾಸ್ತವ ಅರಿಯುವಂತೆ ಮಾಡಿ ಹೋರಾಟ ನಡೆಸಲಿ.
-ವಿಜಯ್ ಹೆಮ್ಮಿಗೆ, ಮೈಸೂರು
ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…
ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…
ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…
ಮಂಡ್ಯ: ಮನ್ಮುಲ್ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…
ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…
ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…