ಆರ್‌ಸಿಬಿ ತಂಡ ೨೦೨೫ನೇ ಆವೃತ್ತಿಯ ಐಪಿಎಲ್ ಕಪ್ ಗೆದ್ದ ಹಿನ್ನೆಲೆಯಲ್ಲಿ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ವಿಜಯೋತ್ಸವದ ವೇಳೆ ಉಂಟಾದ ನೂಕುನುಗ್ಗಲಿನಿಂದ ಕಾಲ್ತುಳಿತಕ್ಕೊಳಗಾಗಿ ೧೧ ಜನ ಅಭಿಮಾನಿಗಳು ಸಾವನಪ್ಪಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಪೊಲೀಸ್ ಕಮಿಷನರ್ ಸೇರಿದಂತೆ ಐವರು ಪೊಲೀಸ್ ಅಧಿಕಾರಿಗಳನ್ನು ಅಮಾನತ್ತು ಗೊಳಿಸಿರುವುದು ಸರಿಯಾದ ಕ್ರಮವಲ್ಲ. ‘ಜನ ಮರುಳೋ ಜಾತ್ರೆ ಮರಳೋ’ ಎಂಬ ನಾಣ್ಣುಡಿಯಂತೆ ಸಾವಿರಾರು ಅಭಿಮಾನಿಗಳು ಒಟ್ಟಿಗೆ ನುಗ್ಗಿದರೆ ಪರಿಸ್ಥಿತಿ ಕೈಮೀರುತ್ತದೆ. ಇದಕ್ಕೆ ಪೊಲೀಸರನ್ನು ಹೊಣೆ ಮಾಡುವುದು ತಪ್ಪು. ಇದಕ್ಕೆ ಕಾರಣರಾದ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧವೂ ಕ್ರಮ ಕೈಗೊಳ್ಳಬೇಕಿದೆ.
–ಪಿ.ಸಿ.ಕಂಗಾಣಿ ಸೋಮು, ಕ್ಯಾತಮಾರನಹಳ್ಳಿ, ಮೈಸೂರು





