ಓದುಗರ ಪತ್ರ
ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಕೋಟ್ಯಂತರ ಮಂದಿ ಭಾಗಿಯಾಗಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ಮಾಡುತ್ತಿದ್ದಾರೆ. ಕರ್ನಾಟಕ ದಿಂದಲೂ ಅನೇಕ ಮಂದಿ ಪ್ರಯಾಗ್‌ರಾಜ್‌ಗೆ ಭೇಟಿ ನೀಡುತ್ತಿದ್ದಾರೆ.
ಸದ್ಯ ಈ ಮಹಾಕುಂಭಮೇಳದ ಬಗ್ಗೆ ಕಾಂಗ್ರೆಸ್ ಪಕ್ಷದ ಕೆಲ ನಾಯಕರು ಅವಹೇಳನ ಕಾರಿಯಾಗಿ ಮಾತನಾಡುತ್ತಿದ್ದು, ಒಂದು ಸಮುದಾಯದ ಧಾರ್ಮಿಕ ಭಾವನೆಗಳಿಗೆ ಧಕ್ಕೆಯುಂಟು ಮಾಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು, ‘ಕೊಳಚೆ ಯಾಗಿರುವ ಗಂಗೆಯಲ್ಲಿ ಸ್ನಾನ ಮಾಡಿದರೆ, ಪುಣ್ಯ ಬರುವುದಿಲ್ಲ, ರೋಗ ಬರುವುದು ಗ್ಯಾರಂಟಿ’ ಎಂದು ಲೇವಡಿ ಮಾಡಿದ್ದರೆ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ‘ಮೋದಿ ಮತ್ತು ಅಮಿತ್ ಶಾ ಹೋಗಿ ಗಂಗೆಯಲ್ಲಿ ಸ್ನಾನ ಮಾಡಿದರೆ ಅವರ ಪಾಪ ಕಳೆಯುವುದಿಲ್ಲ’ ಎಂದು ಟೀಕಿಸಿದ್ದಾರೆ. ಅಲ್ಲದೆ ಸಮಾಜ ಕಲ್ಯಾಣ ಇಲಾಖೆಯ ಸಚಿವ ಎಚ್.ಸಿ. ಮಹದೇವಪ್ಪನವರಿಗೆ ಪತ್ರಕರ್ತರು ನೀವೂ ಕುಂಭಮೇಳದಲ್ಲಿ ಪುಣ್ಯಸ್ನಾನ ಮಾಡುತ್ತೀರಾ ಎಂದು ಕೇಳಿದ್ದಕ್ಕೆ ‘ನಾನು ನಿತ್ಯ ಸ್ನಾನ ಮಾಡುತ್ತೇನೆ’ ಎಂದು ವ್ಯಂಗ್ಯವಾಡಿದ್ದಾರೆ. ಜವಾಬ್ದಾರಿಯುತ ಸ್ಥಾನದಲ್ಲಿರುವ ಇವರು ಒಂದು ಪಕ್ಷವನ್ನು ಟೀಕಿಸುವ ಬದಲು ಒಂದು ಸಮುದಾಯದ ಧಾರ್ಮಿಕ ಆಚರಣೆಯನ್ನು ಟೀಕಿಸುವುದು ಎಷ್ಟು ಸರಿ? ಮತ್ತೊಬ್ಬರ ಧಾರ್ಮಿಕ ಆಚರಣೆಯನ್ನು ಅವಹೇಳನ ಮಾಡಬಾರದು ಎಂಬ ಕನಿಷ್ಠ ಪ್ರಜ್ಞೆಯೂ ಈ ಜನಪ್ರತಿನಿಧಿಗಳಿಗೆ ಇಲ್ಲದಿರುವುದು ಬೇಸರದ ಸಂಗತಿ. ಆದ್ದರಿಂದ ಜನಪ್ರತಿನಿಧಿಗಳು ಮುಂದಿನ ದಿನಗಳಲ್ಲಾದರೂ ಮತ್ತೊಬ್ಬರ ಧಾರ್ಮಿಕ ಭಾವನೆಗೆ ಧಕ್ಕೆಯುಂಟಾಗದಂತೆ ಮಾತನಾಡುವುದನ್ನು ಕಲಿಯಲಿ.
-ರಾಜೇಶ್, ಎಚ್.ಡಿ.ಕೋಟೆ ತಾ.
ಮಂಡ್ಯ : ತಾಲೂಕಿನ ಸೂನಗಹಳ್ಳಿ-ಬೂತನಹೊಸೂರು ನಡುವಿನ ಹೆಬ್ಬಾಳ ಕಟ್ಟೆ ಬಳಿ ಕಬ್ಬಿನ ಗದ್ದೆಯಲ್ಲಿ ಬುಧವಾರ ಮೂರು ಚಿರತೆ ಮರಿಗಳು ಪತ್ತೆಯಾಗಿವೆ.…
ಟೆಹ್ರಾನ್ : ಇರಾನ್ ಹಿಡಿತದಲ್ಲಿದ್ದ ಜಗತ್ತಿನ ಪ್ರಮುಖ ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ತೀವ್ರ ದಾಳಿ ನಡೆಸಿದೆ. ಜಲಮಾರ್ಗದ ಬಳಿಕ…
ಬೆಂಗಳೂರು : ರಾಜ್ಯದಲ್ಲಿ ಮರ್ಯಾದೆಯ ಹೆಸರಿನಲ್ಲಿ ಹತ್ಯೆ, ಹಲ್ಲೆ ಮತ್ತು ಬೆದರಿಕೆ ಹಾಕುವವರಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸುವ…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಲ್ಲಿ ಬುಧವಾರ ಸಂಜೆ ಏಕಾಏಕಿ ಮಳೆ ಸುರಿದು ಬಿರು ಬಿಸಿಲಿನಿಂದ ಬಳಲಿದ್ದ ನಗರವನ್ನು ಸ್ವಲ್ಪ…
ಮೈಸೂರು : ನಾಡಿನಾದ್ಯಂತ ಯುಗಾದಿ ಹಬ್ಬದ ಸಂಭ್ರಮ ಜೋರಾಗಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಹಬ್ಬದ ಕಳೆಗಟ್ಟಿದೆ. ಅರಮನೆಯಲ್ಲಿ ವಿಶೇಷ ಸಾಂಸ್ಕೃತಿಕ…
ಮುಂಬೈ : ಆದಿತ್ಯ ಧರ್ ನಿರ್ದೇಶನದ, ರಣವೀರ್ ನಟನೆಯ ಧುರಂಧರ್-2 ಚಿತ್ರದ ಎರಡನೇ ಭಾಗವು ನಾಳೆ(ಮಾರ್ಚ್.19) ಬಿಡುಗಡೆಯಾಗಲಿದೆ. ಕಳೆದ ವರ್ಷ…