Andolana originals

ಓದುಗರ ಪತ್ರ: ಧಾರ್ಮಿಕ ಭಾವನೆಗೆ ಧಕ್ಕೆ ತರುವಂತೆ ಮಾತನಾಡುವುದು ಸರಿಯಲ್ಲ

ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಕೋಟ್ಯಂತರ ಮಂದಿ ಭಾಗಿಯಾಗಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ಮಾಡುತ್ತಿದ್ದಾರೆ. ಕರ್ನಾಟಕ ದಿಂದಲೂ ಅನೇಕ ಮಂದಿ ಪ್ರಯಾಗ್‌ರಾಜ್‌ಗೆ ಭೇಟಿ ನೀಡುತ್ತಿದ್ದಾರೆ.

ಸದ್ಯ ಈ ಮಹಾಕುಂಭಮೇಳದ ಬಗ್ಗೆ ಕಾಂಗ್ರೆಸ್ ಪಕ್ಷದ ಕೆಲ ನಾಯಕರು ಅವಹೇಳನ ಕಾರಿಯಾಗಿ ಮಾತನಾಡುತ್ತಿದ್ದು, ಒಂದು ಸಮುದಾಯದ ಧಾರ್ಮಿಕ ಭಾವನೆಗಳಿಗೆ ಧಕ್ಕೆಯುಂಟು ಮಾಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು, ‘ಕೊಳಚೆ ಯಾಗಿರುವ ಗಂಗೆಯಲ್ಲಿ ಸ್ನಾನ ಮಾಡಿದರೆ, ಪುಣ್ಯ ಬರುವುದಿಲ್ಲ, ರೋಗ ಬರುವುದು ಗ್ಯಾರಂಟಿ’ ಎಂದು ಲೇವಡಿ ಮಾಡಿದ್ದರೆ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ‘ಮೋದಿ ಮತ್ತು ಅಮಿತ್ ಶಾ ಹೋಗಿ ಗಂಗೆಯಲ್ಲಿ ಸ್ನಾನ ಮಾಡಿದರೆ ಅವರ ಪಾಪ ಕಳೆಯುವುದಿಲ್ಲ’ ಎಂದು ಟೀಕಿಸಿದ್ದಾರೆ. ಅಲ್ಲದೆ ಸಮಾಜ ಕಲ್ಯಾಣ ಇಲಾಖೆಯ ಸಚಿವ ಎಚ್.ಸಿ. ಮಹದೇವಪ್ಪನವರಿಗೆ ಪತ್ರಕರ್ತರು ನೀವೂ ಕುಂಭಮೇಳದಲ್ಲಿ ಪುಣ್ಯಸ್ನಾನ ಮಾಡುತ್ತೀರಾ ಎಂದು ಕೇಳಿದ್ದಕ್ಕೆ ‘ನಾನು ನಿತ್ಯ ಸ್ನಾನ ಮಾಡುತ್ತೇನೆ’ ಎಂದು ವ್ಯಂಗ್ಯವಾಡಿದ್ದಾರೆ. ಜವಾಬ್ದಾರಿಯುತ ಸ್ಥಾನದಲ್ಲಿರುವ ಇವರು ಒಂದು ಪಕ್ಷವನ್ನು ಟೀಕಿಸುವ ಬದಲು ಒಂದು ಸಮುದಾಯದ ಧಾರ್ಮಿಕ ಆಚರಣೆಯನ್ನು ಟೀಕಿಸುವುದು ಎಷ್ಟು ಸರಿ? ಮತ್ತೊಬ್ಬರ ಧಾರ್ಮಿಕ ಆಚರಣೆಯನ್ನು ಅವಹೇಳನ ಮಾಡಬಾರದು ಎಂಬ ಕನಿಷ್ಠ ಪ್ರಜ್ಞೆಯೂ ಈ ಜನಪ್ರತಿನಿಧಿಗಳಿಗೆ ಇಲ್ಲದಿರುವುದು ಬೇಸರದ ಸಂಗತಿ. ಆದ್ದರಿಂದ ಜನಪ್ರತಿನಿಧಿಗಳು ಮುಂದಿನ ದಿನಗಳಲ್ಲಾದರೂ ಮತ್ತೊಬ್ಬರ ಧಾರ್ಮಿಕ ಭಾವನೆಗೆ ಧಕ್ಕೆಯುಂಟಾಗದಂತೆ ಮಾತನಾಡುವುದನ್ನು ಕಲಿಯಲಿ.

-ರಾಜೇಶ್, ಎಚ್.ಡಿ.ಕೋಟೆ ತಾ.

ಆಂದೋಲನ ಡೆಸ್ಕ್

Recent Posts

ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಲು ಯತ್ನಿಸಿದ್ದರು: ಸಿಎಂ ಡಿಕೆಶಿ ಬಾಂಬ್

ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…

7 hours ago

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್!

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…

8 hours ago

ಎಸ್‌ಐಆರ್‌ ವಿರುದ್ಧ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…

9 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ಗೆ ಮತ್ತೆ ಶಾಕ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…

9 hours ago

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ನಿಧನ

ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…

12 hours ago

ಓದುಗರ ಪತ್ರ: ಪಿಎಚ್‌ಸಿಗಳಲ್ಲಿ ಬಿಪಿ, ಶುಗರ್ ಮಾತ್ರೆಗಳು ಸಿಗುವಂತೆ ಕ್ರಮ ಕೈಗೊಳ್ಳಿ

ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…

13 hours ago