ಓದುಗರ ಪತ್ರ
ಮಂಡ್ಯದಲ್ಲಿ ಕಳೆದ ವರ್ಷ ನಡೆದ ೮೭ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ನೆನಪಿನಾರ್ಥವಾಗಿ ‘ಕನ್ನಡ ಭವನ’ ನಿರ್ಮಿಸಲು ಜಿಲ್ಲಾಡಳಿತ ಮುಂದಾಗಿರುವುದು ಸಂತೋಷದ ವಿಚಾರ. ಆದರೂ ನಿರ್ಮಾಣ ಸ್ಥಳ ಇನ್ನೂ ಖಚಿತವಾಗಿಲ್ಲ. ಈಗ ಕ್ರೀಡಾಂಗಣದ ಪಕ್ಕದಲ್ಲಿ ಜಾಗ ಗುರುತಿಸಿರುವುದಕ್ಕೆ ಜಿಲ್ಲಾ ವಾಲಿಬಾಲ್ ಸಂಸ್ಥೆ ಆಕ್ಷೇಪ ವ್ಯಕ್ತಪಡಿಸಿದೆ.
ಕನ್ನಡ ಭವನಕ್ಕೆ ಸೂಕ್ತವಾದ ಸ್ಥಳ ಎಂದರೆ ಹೆದ್ದಾರಿ ಪಕ್ಕದಲ್ಲಿ ಇರುವ ಜ್ಯೂಬಿಲಿ ಪಾರ್ಕ್. ಈ ಜ್ಯೂಬಿಲಿ ಪಾರ್ಕ್‌ನ್ನು ಮಂಡ್ಯ ಪುರಸಭೆ ಅಸ್ತಿತ್ವಕ್ಕೆ ಬಂದ ೨೫ನೇ ವಾರ್ಷಿಕೋತ್ಸವದ ನೆನಪಿಗೆ ೧೯೩೫ರಲ್ಲಿ ನಿರ್ಮಿಸಲಾಯಿತು. ಆದರೆ, ಇಂದು ನಗರಸಭೆಯವರ ನಿರ್ಲಕ್ಷ ಕ್ಕೆ ಒಳಗಾಗಿದೆ. ನಗರ ಸಭೆ ಹಿಂದೊಮ್ಮೆ ಅಲ್ಲಿ ಭವನ ನಿರ್ಮಿಸಲು ಉದ್ದೇಶ ಹೊಂದಿತ್ತು. ಆದರೆ, ಅದು ಕಾರ್ಯರೂಪಕ್ಕೆ ಬರಲಿಲ್ಲ. ಹಿಂದೊಮ್ಮೆ ಈ ಪಾರ್ಕ್ ಚಳವಳಿಯ ಕೇಂದ್ರವಾಗಿತ್ತು.
ರಾಜಕೀಯ ಚಟುವಟಿಕೆಗಳ ಕೇಂದ್ರವಾಗಿತ್ತು. ವರುಣ ನಾಲೆಯ ಚಳವಳಿ, ಕಾವೇರಿ ಚಳವಳಿ ಮುಂತಾದ ಚಟುವಟಿಕೆಗಳಿಗೆ ಕೇಂದ್ರ ಸ್ಥಾನವಾಗಿತ್ತು. ಆದರೀಗ ಅದು ತುಂಬಾ ನಿರ್ಲಕ್ಷ ಕ್ಕೆ ಒಳಗಾಗಿದೆ. ಈ ಸ್ಥಳದಲ್ಲಿ ‘ಕನ್ನಡ ಭವನ ‘ನಿರ್ಮಿಸಿ ಅಲ್ಲಿ ಕನ್ನಡ ಪುಸ್ತಕಗಳ ಬಿಡುಗಡೆ, ಕನ್ನಡದ ಬಗ್ಗೆ ಚಿಂತನ ಮಂಥನ ಕಾರ್ಯಕ್ರಮಗಳು, ಸಣ್ಣ ಪುಟ್ಟ ಸಾಂಸ್ಕೃತಿಕ ಕಾರ್ಯಕ್ರಮಗಳು ಸದಾ ನಡೆಯುವಂತೆ ಮಾಡಬೇಕು. ಈ ಬಗ್ಗೆ ಜಿಲ್ಲಾಡಳಿತ, ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಚಲುವರಾಯಸ್ವಾಮಿ ಮತ್ತು ಶಾಸಕ ರವಿಕುಮಾರ್ ಗಣಿಗ ಅವರು ಸೂಕ್ತ ನಿರ್ಧಾರ ತೆಗೆದುಕೊಳ್ಳಬೇಕು.
– ಸಿ. ಸಿದ್ದರಾಜು ಆಲಕೆರೆ, ಮಂಡ್ಯ
ಸುಂಟಿಕೊಪ್ಪ: ಹಾರಂಗಿ ಜಲಾಶಯದ ಹಿನ್ನೀರಿನಲ್ಲಿ ಮುಳುಗಿ ತಮಿಳುನಾಡು ಮೂಲದ ವಿದ್ಯಾರ್ಥಿಯೋರ್ವ ಉಸಿರು ಚೆಲ್ಲಿರುವ ಘಟನೆ ಇಂದು ಬೆಳಿಗ್ಗೆ ಹೇರೂರುವಿನಲ್ಲಿ ನಡೆದಿದೆ.…
ಮಂಡ್ಯ: ಜಿಲ್ಲೆಯಲ್ಲಿ ಕಂದಾಯ ಇಲಾಖೆ ನೌಕರರು ಕರ್ತವ್ಯ ನಿಷ್ಠೆಯಿಂದ ಕಾರ್ಯ ನಿರ್ವಹಿಸಿ ಜಿಲ್ಲೆಯ ಅಭಿವೃದ್ದಿಗೆ ಶ್ರಮಿಸಬೇಕು ಎಂದು ಕೃಷಿ ಹಾಗೂ…
ಮಂಡ್ಯ: 2026ರ ಸಾಲಿನ ಮೇಲುಕೋಟೆ ಶ್ರೀ ಚೆಲುವನಾರಾಯಣಸ್ವಾಮಿ ವೈರಮುಡಿ ಬ್ರಹ್ಮೋತ್ಸವವು ಮಾರ್ಚ್ 23ರಿಂದ ಏಪ್ರಿಲ್.4ರವರೆಗೆ ನಡೆಯಲಿದೆ. ಈ ಉತ್ಸವದ ಪ್ರಮುಖ…
ಮಂಡ್ಯ: ಜಿಲ್ಲೆಯಲ್ಲಿ ಅಭಿವೃದ್ಧಿ ಪರ್ವ ಆರಂಭವಾಗಿದೆ. ನಾನು ಕೊಟ್ಟ ಮಾತಿನಂತೆ ನುಡಿದಂತೆ ನಡೆಯುತ್ತಿದ್ದೇನೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಗೆ ತಿಳಿಸಿದ್ದಾರೆ.…
ಮೈಸೂರು: ಕೆಲವು ಕಡೆ ಊಟದ ವಿಚಾರಕ್ಕಾಗಿಯೇ ಪ್ರವಾಸಿಗರು ಹೋಟೆಲ್ ರೂಂ ಬುಕ್ಕಿಂಗ್ ಕ್ಯಾನ್ಸಲ್ ಮಾಡಿಕೊಂಡಿದ್ದಾರೆ ಎಂದು ಹೋಟೆಲ್ ಮಾಲೀಕರ ಸಂಘದ…
ಚೆನ್ನೈ: ಟಿವಿಕೆ ಪಕ್ಷ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಸೇರಲಿದೆ ಎಂಬ ಸುದ್ದಿಗಳು ಕೇಳಿಬರುತ್ತಿರುವ ಬೆನ್ನಲ್ಲೇ ಟಿವಿಕೆ ಈಗ ಸ್ಪಷ್ಟನೆ…