Andolana originals

ಓದುಗರ ಪತ್ರ: ಹೆದ್ದಾರಿ ಪಕ್ಕದಲ್ಲಿ ಕನ್ನಡ ಭವನ ನಿರ್ಮಾಣವಾಗಲಿ

ಮಂಡ್ಯದಲ್ಲಿ ಕಳೆದ ವರ್ಷ ನಡೆದ ೮೭ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ನೆನಪಿನಾರ್ಥವಾಗಿ ‘ಕನ್ನಡ ಭವನ’ ನಿರ್ಮಿಸಲು ಜಿಲ್ಲಾಡಳಿತ ಮುಂದಾಗಿರುವುದು ಸಂತೋಷದ ವಿಚಾರ. ಆದರೂ ನಿರ್ಮಾಣ ಸ್ಥಳ ಇನ್ನೂ ಖಚಿತವಾಗಿಲ್ಲ. ಈಗ ಕ್ರೀಡಾಂಗಣದ ಪಕ್ಕದಲ್ಲಿ ಜಾಗ ಗುರುತಿಸಿರುವುದಕ್ಕೆ ಜಿಲ್ಲಾ ವಾಲಿಬಾಲ್ ಸಂಸ್ಥೆ ಆಕ್ಷೇಪ ವ್ಯಕ್ತಪಡಿಸಿದೆ.

ಕನ್ನಡ ಭವನಕ್ಕೆ ಸೂಕ್ತವಾದ ಸ್ಥಳ ಎಂದರೆ ಹೆದ್ದಾರಿ ಪಕ್ಕದಲ್ಲಿ ಇರುವ ಜ್ಯೂಬಿಲಿ ಪಾರ್ಕ್. ಈ ಜ್ಯೂಬಿಲಿ ಪಾರ್ಕ್‌ನ್ನು ಮಂಡ್ಯ ಪುರಸಭೆ ಅಸ್ತಿತ್ವಕ್ಕೆ ಬಂದ ೨೫ನೇ ವಾರ್ಷಿಕೋತ್ಸವದ ನೆನಪಿಗೆ ೧೯೩೫ರಲ್ಲಿ ನಿರ್ಮಿಸಲಾಯಿತು. ಆದರೆ, ಇಂದು ನಗರಸಭೆಯವರ ನಿರ್ಲಕ್ಷ ಕ್ಕೆ ಒಳಗಾಗಿದೆ. ನಗರ ಸಭೆ ಹಿಂದೊಮ್ಮೆ ಅಲ್ಲಿ ಭವನ ನಿರ್ಮಿಸಲು ಉದ್ದೇಶ ಹೊಂದಿತ್ತು. ಆದರೆ, ಅದು ಕಾರ್ಯರೂಪಕ್ಕೆ ಬರಲಿಲ್ಲ. ಹಿಂದೊಮ್ಮೆ ಈ ಪಾರ್ಕ್ ಚಳವಳಿಯ ಕೇಂದ್ರವಾಗಿತ್ತು.

ರಾಜಕೀಯ ಚಟುವಟಿಕೆಗಳ ಕೇಂದ್ರವಾಗಿತ್ತು. ವರುಣ ನಾಲೆಯ ಚಳವಳಿ, ಕಾವೇರಿ ಚಳವಳಿ ಮುಂತಾದ ಚಟುವಟಿಕೆಗಳಿಗೆ ಕೇಂದ್ರ ಸ್ಥಾನವಾಗಿತ್ತು. ಆದರೀಗ ಅದು ತುಂಬಾ ನಿರ್ಲಕ್ಷ ಕ್ಕೆ ಒಳಗಾಗಿದೆ. ಈ ಸ್ಥಳದಲ್ಲಿ ‘ಕನ್ನಡ ಭವನ ‘ನಿರ್ಮಿಸಿ ಅಲ್ಲಿ ಕನ್ನಡ ಪುಸ್ತಕಗಳ ಬಿಡುಗಡೆ, ಕನ್ನಡದ ಬಗ್ಗೆ ಚಿಂತನ ಮಂಥನ ಕಾರ್ಯಕ್ರಮಗಳು, ಸಣ್ಣ ಪುಟ್ಟ ಸಾಂಸ್ಕೃತಿಕ ಕಾರ್ಯಕ್ರಮಗಳು ಸದಾ ನಡೆಯುವಂತೆ ಮಾಡಬೇಕು. ಈ ಬಗ್ಗೆ ಜಿಲ್ಲಾಡಳಿತ, ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಚಲುವರಾಯಸ್ವಾಮಿ ಮತ್ತು ಶಾಸಕ ರವಿಕುಮಾರ್ ಗಣಿಗ ಅವರು ಸೂಕ್ತ ನಿರ್ಧಾರ ತೆಗೆದುಕೊಳ್ಳಬೇಕು.

– ಸಿ. ಸಿದ್ದರಾಜು ಆಲಕೆರೆ, ಮಂಡ್ಯ

ಆಂದೋಲನ ಡೆಸ್ಕ್

Recent Posts

ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು: ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…

13 hours ago

ನಾಡಹಬ್ಬ ಮೈಸೂರು ದಸರಾ: ಸಂಪ್ರದಾಯದಂತೆ ಪ್ರಮೋದಾ ದೇವಿ ಒಡೆಯರ್ ಗೆ ಆಹ್ವಾನ

ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…

13 hours ago

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಬಿದ್ದ ಮರ: ಕೂದಲೆಳೆಯಲ್ಲಿ ಪಾರಾದ ಚಾಲಕ

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…

19 hours ago

ಓದುಗರ ಪತ್ರ: ಗೊಬ್ಬಳಿ ಮರ ಬಸ್‌ನಿಲ್ದಾಣದ ಆವರಣ ಸ್ವಚ್ಛವಾಗಿರಲಿ

ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…

19 hours ago

ಓದುಗರ ಪತ್ರ: ಮಹಾತ್ಮರ ರಾಮರಾಜ್ಯದ ಕಲ್ಪನೆಯ ಸಂದೇಶ ಸಾಕಾರಗೊಳ್ಳಲಿ

ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…

20 hours ago

ಓದುಗರ ಪತ್ರ: ಇಬ್ಬರು ಮಹಾನ್ ನಾಯಕರ ಆಶಯ ಮುಂದಿನ ಪೀಳಿಗೆಗೆ ದಾಟಿಸಲಿ

ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…

20 hours ago