ಡಿಜಿಟಲ್ ಯುಗದಲ್ಲಿ ಕೃಷಿ ಕ್ಷೇತ್ರಕ್ಕೂ ಡಿಜಿಟಲ್ ತಂತ್ರಜ್ಞಾನವನ್ನು ಬಳಸಿ ಬೆಳೆ ಉತ್ಪಾದನೆಯನ್ನು ಸುಧಾರಿಸುವ ಉದ್ದೇಶದಿಂದ ಕೇಂದ್ರ ಸರ್ಕಾರವು ಆರಂಭಿಸಿರುವ ಡಿಜಿಟಲ್ ಕೃಷಿ ಮಿಷನ್ ದೇಶದ ಅನೇಕ ರಾಜ್ಯಗಳಲ್ಲಿ ಯಶಸ್ವಿಯಾಗಿ ನಡೆಯುತ್ತಿದೆ.
ಕರ್ನಾಟಕದಲ್ಲಿ ಈ ಯೋಜನೆಯ ಸುಳಿವೇ ಇಲ್ಲ. ಕರ್ನಾಟಕವು ಅಕ್ಕಿ, ಸಕ್ಕರೆ, ಕಬ್ಬು, ಕಾಫಿ, ರಾಗಿ, ಹಣ್ಣುಗಳು ಹಾಗೂ ತರಕಾರಿಗಳ ಉತ್ಪಾದನೆಯಲ್ಲಿ ಮುಂಚೂಣಿಯಲ್ಲಿದೆ. ಕರ್ನಾಟಕದ ಕೃಷಿ ವೈವಿಧ್ಯತೆ ಮತ್ತು ತಂತ್ರಜ್ಞಾನ ಬಳಕೆಯು ಇತರೆ ರಾಜ್ಯಗಳಿಗೆ ಮಾದರಿಯಾಗಿದೆ. ಆದರೂ, ಡಿಜಿಟಲ್ ಕೃಷಿ ಮಿಷನ್ ರಾಜ್ಯದಲ್ಲಿ ಜಾರಿಯಲ್ಲಿ ಇಲ್ಲದಿರುವುದು ರೈತ ಸಮುದಾಯದಲ್ಲಿ ನಿರಾಶೆಯನ್ನು ಉಂಟುಮಾಡಿದೆ.
ರಾಜ್ಯವೂ ಡಿಜಿಟಲ್ ಕೃಷಿ ಮಿಷನ್ ನ ಭಾಗವಾದರೆ ರೈತರಿಗೆ ಮಣ್ಣಿನ ಗುಣಮಟ್ಟದ ನಕ್ಷೆ, ಬೆಳೆ ಸಲಹೆಗಳು, ಹವಾಮಾನ ಮಾಹಿತಿ, ಹಾಗೂ ಬೆಳೆ ಉತ್ಪಾದನಾ ಅಂದಾಜುಗಳಂತಹ ಆಧುನಿಕ ಸೌಲಭ್ಯಗಳು ದೊರೆಯುತ್ತದೆ. ಕೇಂದ್ರ ಸರ್ಕಾರವು ಈ ವಿಷಯವನ್ನು ತಕ್ಷಣ ಪರಿಗಣಿಸಿ ಕರ್ನಾಟಕವನ್ನೂ ಮಿಷನ್‌ನಲ್ಲಿ ಸೇರಿಸಬೇಕು. ಡಿಜಿಟಲ್ ಕೃಷಿ ಮಿಷನ್ ನಿಂದ ರೈತರ ಜೀವನದಲ್ಲಿ ಬದಲಾವಣೆ ತರಲು ಸಾಧ್ಯ. ಕರ್ನಾಟಕದ ಒಳಗೊಳ್ಳುವಿಕೆಯು ರಾಷ್ಟ್ರದ ಕೃಷಿ ಡಿಜಿಟಲೀಕರಣದ ಪ್ರಯತ್ನಕ್ಕೆ ನಿಜವಾದ ಶಕ್ತಿ ನೀಡುತ್ತದೆ.
– ಡಾ. ಎಚ್.ಕೆ.ವಿಜಯಕುಮಾರ್, ಬೆಂಗಳೂರು
ನ್ಯೂಯಾರ್ಕ್: ಅಮೆರಿಕದ ಕ್ಯಾಲಿಫೋರ್ನಿಯಾದ ಬರ್ಕ್ಲಿಯಲ್ಲಿ ಕಾಣೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ (22) ಅವರ ಮೃತದೇಹ ಪತ್ತೆಯಾಗಿದೆ ಎಂದು ಸ್ಯಾನ್…
ಹೊಸದಿಲ್ಲಿ : ವಿವಾಹಪೂರ್ವ ದೈಹಿಕ ಸಂಬಂಧಗಳಲ್ಲಿ ಅತ್ಯಂತ ಜಾಗರೂಕತೆ ವಹಿಸಬೇಕು ಎಂದು ಸುಪ್ರೀಂ ಕೋರ್ಟ್ ಎಚ್ಚರಿಕೆ ನೀಡಿದೆ. ಮದುವೆಯ ಸುಳ್ಳು…
ಮೈಸೂರು : ಎಲಾನ್ ಮಸ್ಕ್ ಒಡೆತನದ ಸಾಮಾಜಿಕ ಜಾಲತಾಣ ಎಕ್ಸ್ (X, ಹಿಂದಿನ ಟ್ವಿಟರ್) ಇಂದು ಸಂಜೆ (ಫೆಬ್ರವರಿ 16)…
ಬೆಂಗಳೂರು : ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ರೈತರ ಮೇಲೆ ಪರಿಣಾಮ ಬೀರುವ ಭಾರತ-ಅಮೆರಿಕ ವ್ಯಾಪಾರ…
ಮಲ್ಕುಂಡಿ : ಕಾಡಾನೆಗಳ ದಾಳಿಯಿಂದ ಗುಡಿಸಲು ಹಾಗೂ ಸೋಲಾರ್ ತಂತಿ ಬೇಲಿ ನಾಶವಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ದೇವರಾಯಶೆಟ್ಟಿಪುರ ಗ್ರಾಮದಲ್ಲಿ…
ಮೈಸೂರು : ನಗರದಲ್ಲಿ ಅಪರಾಧ ನಿಯಂತ್ರಣ ಮತ್ತು ಪತ್ತೆ ಸಂಬಂಧ ರಾಜ್ಯ ಪೊಲೀಸ್ ಇಲಾಖೆಯ ಅಪರಾಧ ಮತ್ತು ತಾಂತ್ರಿಕ ಸೇವೆ…