ಓದುಗರ ಪತ್ರ
ಕರೂರಿನಲ್ಲಿ ತಮಿಳಿಗ ವೆಟ್ರಿ ಕಳಗಂ ಪಕ್ಷದ ಸಂಸ್ಥಾಪಕ ಮತ್ತು ನಟ ವಿಜಯ್ ಅವರು ಹಮಿಕೊಂಡಿದ್ದ ರ‍್ಯಾಲಿಯಲ್ಲಿ ಸಂಭವಿಸಿದ ಕಾಲ್ತುಳಿತ ದುರಂತ ದೇಶದ ಜನತೆಯನ್ನು ಆಘಾತಕ್ಕೀಡುಮಾಡಿದೆ. ಇದು ಕೇವಲ ಒಂದು ದುಃಖಕರ ಘಟನೆ ಮಾತ್ರವಲ್ಲ ಜನಸಮೂಹ ನಿರ್ವಹಣೆಯಲ್ಲಿ ಕಂಡುಬಂದ ಗಂಭೀರ ಲೋಪವಾಗಿದೆ. ಈ ಸಮಾವೇಶವನ್ನು ನಿರ್ವಹಿಸಬೇಕಿತ್ತು ಅಷ್ಟೇ ಹೊಣೆಗಾರಿಕೆಯಿಂದ ಭದ್ರತಾ ವ್ಯವಸ್ಥೆಯನ್ನು ಕೈಗೊಳ್ಳಬೇಕಿತ್ತು. ದೊಡ್ಡ ಜನಸಮೂಹವು ಕೇವಲ ಸಂಖ್ಯೆಗಳಲ್ಲ, ಅದು ಜೀವಗಳು, ಕುಟುಂಬಗಳು ಮತ್ತು ಭವಿಷ್ಯದ ಸಂಕೇತ. ಅದನ್ನು ಸಮರ್ಪಕವಾಗಿ ಕಾಯುವುದು ಕಾರ್ಯಕ್ರಮ ಆಯೋಜಕರು ಹಾಗೂ ಆಡಳಿತದ ಕರ್ತವ್ಯ.
ಈ ದುರ್ಘಟನೆಯಲ್ಲಿ ಮಕ್ಕಳೂ ಬಲಿಯಾದದ್ದು ಹೃದಯವಿದ್ರಾವಕ. “ಜನರನ್ನು ಸೆಳೆಯುವುದು ಸುಲಭ, ಆದರೆ ಅವರನ್ನು ಸುರಕ್ಷಿತವಾಗಿ ಮನೆಗೆ ತಲುಪಿಸುವುದು ನಿಜವಾದ ನಾಯಕತ್ವ” ಎಂಬ ಮಾತು ಎಲ್ಲ ನಾಯಕರಿಗೂ ಮಾರ್ಗದರ್ಶಿಯಾಗಬೇಕು. ಭವಿಷ್ಯದಲ್ಲಿ ಇಂತಹ ದುರಂತಗಳು ಮರುಕಳಿಸದಂತೆ ಕಟ್ಟುನಿಟ್ಟಾದ ಜನಸಮೂಹ ನಿಯಂತ್ರಣ, ಮುನ್ನೆಚ್ಚರಿಕಾ ಕ್ರಮಗಳು ಮತ್ತು ತುರ್ತು ಚಿಕಿತ್ಸಾ ಸೌಲಭ್ಯಗಳನ್ನು ಸರ್ಕಾರ ಹಾಗೂ ರಾಜಕೀಯ ಪಕ್ಷಗಳು ಖಚಿತಪಡಿಸಬೇಕು. ಸುರಕ್ಷತಾ ಮಾರ್ಗಸೂಚಿಗಳ ಆಧಾರದ ಮೇಲೆ ಕಾರ್ಯಕ್ರಮಗಳು ನಡೆಯುವಂತಾಗಬೇಕು. ಕರೂರು ದುರಂತವು ಇನ್ನು ಮುಂದೆ ದೇಶದಲ್ಲಿ ನಡೆಯುವ ರಾಜಕೀಯ ಸಮಾವೇಶಗಳಿಗೆ ಎಚ್ಚರಿಕೆಯ ಪಾಠವಾಗಲಿ.
-ಡಾ.ಎಚ್.ಕೆ.ವಿಜಯಕುಮಾರ್, ಬೆಂಗಳೂರು.
ಎಚ್.ಡಿ.ಕೋಟೆ: ತಾಲೂಕಿನ ಹ್ಯಾಂಡ್‌ಪೋಸ್ಟ್ ಜಕ್ಕಳ್ಳಿ ಸಮೀಪವಿರುವ ಜಫ್ರುಲ್ಲಾ ಎಂಬುವರಿಗೆ ಸೇರಿದ ಗುಜರಿ ಗೋಡೌನ್‌ಗೆ ಬೆಂಕಿ ತಗುಲಿ, ಲಕ್ಷಾಂತರ ರೂಪಾಯಿ ವೆಚ್ಚದ…
ಪಾಟ್ನಾ: ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಪ್ರಯಾಣಿಕರಿಗೆ ನೀಡಿದ ಮೊಸರಿನಲ್ಲಿ ಹುಳುಗಳು ಪತ್ತೆಯಾದ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆ ಐಆರ್‌ಸಿಟಿಸಿಗೆ 10…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶ ಬೈಲೂರು ವಲಯ ವ್ಯಾಪ್ತಿಯ…
ಮೈಸೂರು: ಜನಸ್ನೇಹಿ ಪಾದಾಚಾರಿ ಮಾರ್ಗಗಳ ಅಭಿವೃದ್ಧಿಗೆ 10 ಕೋಟಿ ರೂ ಮೀಸಲಿಟ್ಟಿರುವ ಪಾಲಿಕೆಯು ಪಾರಂಪರಿಕ ಕಟ್ಟಡಗಳ ಅಭಿವೃದ್ಧಿಗೆ ನಯಾಪೈಸೆ ಅನುದಾನ…
ಗುಂಡ್ಲುಪೇಟೆ: ತಾಲ್ಲೂಕಿನ ಮದ್ದೂರು ವಲಯದಲ್ಲಿ ಮತ್ತೆರಡು ಹುಲಿಗಳು ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ. ಹುಲಿಗಳ ಚಲನವಲನದ ದೃಶ್ಯ ಡ್ರೋನ್ ಕ್ಯಾಮೆರಾದಲ್ಲಿ…
ಬೆಂಗಳೂರು: ಕಾಂಗ್ರೆಸ್ ಸರ್ಕಾರ ಬಜೆಟ್ ಮೂಲಕ ಜನರನ್ನು ಸಾಲದ ಕೂಪಕ್ಕೆ ತಳ್ಳಿರುವುದನ್ನು ಅಧಿವೇಶನದಲ್ಲಿ ಮನವರಿಕೆ ಮಾಡಿಕೊಟ್ಟಿದ್ದೇವೆ. ಹಾಗೆಯೇ ಅನೇಕ ಸಮಸ್ಯೆಗಳನ್ನು…