Mysore
18
overcast clouds

Social Media

ಭಾನುವಾರ, 07 ಡಿಸೆಂಬರ್ 2025
Light
Dark

ಓದುಗರ ಪತ್ರ: ಕೆಇಎ ಶಿಷ್ಯವೇತನಕ್ಕೆ ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸಲಿ

ಓದುಗರ ಪತ್ರ

ಸಮಾಜ ಕಲ್ಯಾಣ ಇಲಾಖೆಯ ಅಡಿಯಲ್ಲಿ ಬರುವ ಇಂದಿರಾ ಗಾಂಧಿ ವೃತ್ತಿ ಅಭಿವೃದ್ಧಿ ಕೇಂದ್ರದ ಮೂಲಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ೨೦೨೪-೨೫ನೇ ಸಾಲಿಗೆ ಕೆಎಎಸ್, ಗ್ರೂಪ್ ಸಿ, ಬ್ಯಾಂಕಿಂಗ್, ಆರ್‌ಆರ್ ಬಿ, ನ್ಯಾಯಾಂಗ ಸೇವೆಯ ಪೂರ್ವಭಾವಿ ಪರೀಕ್ಷೆಗೆ ಉಚಿತ ತರಬೇತಿ ಮತ್ತು ಶಿಷ್ಯವೇತನ ನೀಡುವ ಸಲುವಾಗಿ ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಸಿ ಅದರಲ್ಲಿಗಳಿಸಿದ ಅಂಕಗಳ ಆಧಾರದ ಮೇಲೆ ಶಿಷ್ಯವೇತನ ಮತ್ತು ಅಭ್ಯರ್ಥಿ ಪ್ರವೇಶ ಪಡೆದ ತರಬೇತಿ ಕೇಂದ್ರಗಳಿಗೆ ಸರ್ಕಾರದಿಂದಲೇ ಹಣ ಪಾವತಿ ಮಾಡಲಾಗುತ್ತಿದೆ.

ಇದರನ್ವಯ ಕಳೆದ ಜೂನ್ ತಿಂಗಳಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಸಲಾಗಿತ್ತು. ಕೆಇಎಯ ಇಲಾಖಾ ತಂತ್ರಾಂಶದಲ್ಲಿ ಒಟ್ಟಾರೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಫಲಿತಾಂಶವನ್ನು ಬಿಡುಗಡೆ ಮಾಡಲಾಗಿದೆ. ಆದರೆ ಆಯ್ಕೆಯಾದ ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಇಲ್ಲಿಯವರೆಗೂ ಪ್ರಕಟಿಸದೇ ನಿರ್ಲಕ್ಷ್ಯ ವಹಿಸಿದೆ.

ಹೆಚ್ಚಾಗಿ ಬಡ, ಮಧ್ಯಮವರ್ಗದ ಅಭ್ಯರ್ಥಿಗಳು ಶಿಷ್ಯವೇತನಕ್ಕಾಗಿ ಪರೀಕ್ಷೆ ಬರೆದಿದ್ದರು. ಆದರೆ ಅಂತಿಮ ಪಟ್ಟಿಯೂ ಬಿಡುಗಡೆ ಆಗದೆ , ತರಬೇತಿಯನ್ನೂ ಪಡೆಯದೆ ಅಭ್ಯರ್ಥಿಗಳು ಕಂಗಾಲಾಗಿದ್ದಾರೆ. ಹಾಗಾಗಿ ಸಮಾಜ ಕಲ್ಯಾಣ ಸಚಿವರು ಮತ್ತು ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನ ಹರಿಸಿ ಆಯ್ಕೆಯಾದ ಅಭ್ಯರ್ಥಿಗಳ ಅಂತಿಮ ಪಟ್ಟಿ ಪ್ರಕಟಿಸಿ ಅವರಿಗೆ ಶಿಷ್ಯವೇತನ ದೊರೆಯುವಂತೆ ಮಾಡಲು ಮತ್ತು ತರಬೇತಿ ಕೇಂದ್ರಕ್ಕೆ ಸೇರಲು ಶೀಘ್ರದಲ್ಲೇ ಅವಕಾಶ ಮಾಡಿಕೊಡಬೇಕು.

 – ಎಂ.ಪಿ.ದರ್ಶನ್ ಚಂದ್ರ ಮುಕ್ಕಡಹಳ್ಳಿ, ಚಾಮರಾಜನಗರ ತಾ

Tags:
error: Content is protected !!