ಮೈಸೂರಿನ ಕುವೆಂಪುನಗರ ಎಂ ಬ್ಲಾಕ್‌ನ ಗಣಪತಿ ದೇವಾಲಯಕ್ಕೆ ಹೊಂದಿಕೊಂಡಂತಿರುವ ಉದ್ಯಾನವನದಲ್ಲಿ ಕಸದ ರಾಶಿಯೇ ಸಂಗ್ರಹವಾಗಿದ್ದು, ಅನೈರ್ಮಲ್ಯ ವಾತಾವರಣ ನಿರ್ಮಾಣವಾಗಿದೆ.
ಈ ಉದ್ಯಾನವನಕ್ಕೆ ಸೂಕ್ತ ರಕ್ಷಣೆ ಒದಗಿಸದ ಪರಿಣಾಮ ವಾತಾವರಣವೇ ಹಾಳಾಗಿದ್ದು, ಕೆಲ ಕಾಲೇಜು ವಿದ್ಯಾರ್ಥಿಗಳು ಹಾಗೂ ಮದ್ಯವ್ಯಸನಿಗಳು ಪಾರ್ಕ್‌ನಲ್ಲಿಯೇ ಧೂಮಪಾನ, ಮದ್ಯಪಾನ ಮಾಡುತ್ತಿದ್ದಾರೆ. ಅಲ್ಲದೆ ಕುಡಿದ ಬಳಿಕ ಮದ್ಯದ ಬಾಟಲಿಗಳನ್ನು ಎಲ್ಲೆಂದರಲ್ಲಿ ಬೀಸಾಡಿ ಹೋಗುತ್ತಿದ್ದಾರೆ.
ಇನ್ನು ಈ ಉದ್ಯಾನವನದ ತುಂಬೆಲ್ಲ ಪ್ಲಾಸ್ಟಿಕ್ ಬಾಟಲಿಗಳು, ಕವರ್‌ಗಳು ಹರಡಿಕೊಂಡಿದ್ದು, ಕಸದ ರಾಶಿಯೇ ಸಂಗ್ರಹವಾಗಿ ದುರ್ವಾಸನೆ ಬೀರುತ್ತಿದೆ. ಇದರಿಂದಾಗಿ ಪಾರ್ಕ್‌ಗೆ ವಾಯುವಿಹಾರಕ್ಕೆಂದು ಬರುವವರಿಗೆ ಕಿರಿಕಿರಿಯಾಗುತ್ತಿದೆ.
ಪಾರ್ಕ್ ನಿರ್ವಹಣೆಯ ಗುತ್ತಿಗೆ ಪಡೆದಿರುವವರು ಇತ್ತ ಗಮನ ಹರಿಸದ ಪರಿಣಾಮ ಪಾರ್ಕ್‌ನಲ್ಲಿ ಗಿಡಗಂಟಿಗಳು ಬೆಳೆದುಕೊಂಡಿದ್ದು, ವಿಷ ಜಂತುಗಳ ಕಾಟವೂ ಹೆಚ್ಚಾಗಿದೆ. ಆದ್ದರಿಂದ ಸಂಬಂಧಪಟ್ಟವರು ಕೂಡಲೇ ಈ ಪಾರ್ಕ್ ಅನ್ನು ಸ್ವಚ್ಛಗೊಳಿಸಲು ಕ್ರಮವಹಿಸಬೇಕಿದೆ.
-ನಾಗೇಶ್, ಮಾನಸಗಂಗೋತ್ರಿ, ಮೈಸೂರು.
ಎಚ್.ಡಿ.ಕೋಟೆ : ತಾಲೂಕಿನ ಚೌಡಹಳ್ಳಿ ಗ್ರಾಮದ ಪಕ್ಕದಲ್ಲೇ ಇರುವ ಜಮೀನೊಂದರಲ್ಲಿ ಹಸುವಿನ ಮೇಲೆ ದಾಳಿ ನಡೆಸಿರುವ ಹುಲಿ ಹಸುವನ್ನು ಕೊಂದು…
ಮೈಸೂರು : ಮೈಸೂರು ಮೂಲದ ಗೃಹಿಣಿಯೊಬ್ಬಳು ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಉತ್ತರ ಕರ್ನಾಟಕ ಮೂಲದ ಪೊಲೀಸ್ ಕಾನ್ಸ್ ಟೇಬಲ್ ನೊಂದಿಗೆ…
ಮೈಸೂರು : ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಹನುಮ ಜಯಂತ್ಯೋತ್ಸವ ಸಮಿತಿ ವತಿಯಿಂದ ಶನಿವಾರ ನಡೆದ ಏಳನೇ ವರ್ಷದ ಹನುಮೋತ್ಸವ ಮೆರವಣಿಗೆಯು…
ಮನೆಯಲ್ಲಿ ರಾತ್ರಿಯಿಡೀ ಕೂಡಿಹಾಕಿ ಹಲ್ಲೆ ನಡೆಸಿದ ಮೂವರು ಆರೋಪಿಗಳು; ಹನಿಟ್ರ್ಯಾಪ್ ಶಂಕೆ, ತನಿಖೆ ಚುರುಕು ಮಡಿಕೇರಿ : ಸಾಮಾಜಿಕ ಜಾಲತಾಣದಲ್ಲಿ…
ಮೈಸೂರು : ನಗರದಲ್ಲಿ ಯುನಿಟಿ ಮಾಲ್ ನಿರ್ಮಿಸಲು ನಮ್ಮ ವಿರೋಧ ಇಲ್ಲ. ಆದರೆ, ಸರ್ಕಾರ ಗೊಂದಲವಿಲ್ಲದ ಸ್ಥಳ ನೀಡದೆ ದಿಕ್ಕು…
ಮೈಸೂರು : ಚುಮು ಚುಮು ಚಳಿಯ ನಡುವೆ ನಗರದ ನಂಜರಾಜ ಬಹದ್ದೂರ್ ಛತ್ರದಲ್ಲಿ ಗ್ರಾಹಕರ ಆಕರ್ಷಿಸುವ ಹಾಗೂ ಗ್ರಾಮೀಣ ಸೊಗಡಿನ…