ಕಿಸಾನ್ ಸಮ್ಮಾನ್ ಯೋಜನೆಯಡಿ ಇ-ಕೆವೈಸಿ ಮತ್ತು ಸೆಂಟ್ರಲ್ ಐಡಿ ಪಡೆಯಲು ರೈತರು ಎದುರಿಸುತ್ತಿರುವ ತಾಂತ್ರಿಕ ತೊಂದರೆ ದಿನೇ ದಿನೇ ಹೆಚ್ಚಾಗುತ್ತಿದೆ. ಒಬ್ಬ ರೈತ ನಾಲ್ಕು ಬಾರಿ ಒಟಿಪಿ ಪಡೆಯಬೇಕಾದ ಅನಿವಾರ್ಯತೆಯಿದೆ. ಪದೇ ಪದೇ ಸರ್ವರ್ ಕೈಕೊಡುತ್ತಿದೆ. ಗ್ರಾಮೀಣ ಭಾಗದಲ್ಲಿ ಇಂದಿಗೂ ಶೇ.೬೦ರಷ್ಟು ನೆಟ್‌ವರ್ಕ್ ಸಮಸ್ಯೆ ಇರುವುದರಿಂದ ಇಂತಹ ಸಂಕೀರ್ಣ ಪ್ರಕ್ರಿಯೆಗಳು ರೈತರನ್ನು ಹೈರಾಣಾಗಿಸುತ್ತಿವೆ. ಸರ್ಕಾರವು ಈ ಕೂಡಲೇ ಸರ್ವರ್ ಸಾಮರ್ಥ್ಯ ಹೆಚ್ಚಿಸಿ ಇ-ಕೆವೈಸಿ ಗಡುವನ್ನು ಕನಿಷ್ಠ ೧೫ ದಿನಗಳ ಕಾಲ ವಿಸ್ತರಿಸಬೇಕು. ಕೇವಲ ಒಟಿಪಿ ಬದಲಿಗೆ ಬಯೋಮೆಟ್ರಿಕ್ ಅಥವಾ ಗ್ರಾಮ ಪಂಚಾಯಿತಿ ಮಟ್ಟದ ವಿಶೇಷ ಶಿಬಿರಗಳ ಮೂಲಕ ದಾಖಲಾತಿಗಳನ್ನು ದೃಢೀಕರಿಸುವ ಪರ್ಯಾಯ ಮಾರ್ಗ ಅನುಸರಿಸುವುದು ಉತ್ತಮ. ಕೃಷಿ ಇಲಾಖೆ ಅಧಿಕಾರಿಗಳು ಇತ್ತ ಗಮನ ಹರಿಸಿ ರೈತರಿಗೆ ಆಗುತ್ತಿರುವ ತೊಂದರೆಯನ್ನು ನಿವಾರಿಸಲು ಕ್ರಮ ಕೈಗೊಳ್ಳಬೇಕು.
-ಡಾ. ಎಚ್.ಕೆ.ವಿಜಯಕುಮಾರ್, ಬೆಂಗಳೂರು
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಸಿಸಿಬಿ ನಾರ್ಕೋಟಿಕ್ಸ್ ವಿಭಾಗದ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಬರೋಬ್ಬರಿ 10 ಕೋಟಿ ರೂಪಾಯಿ ಮೌಲ್ಯದ…
ವಾಷಿಂಗ್ಟನ್: ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶತ್ರು ರಾಷ್ಟ್ರಗಳಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ಅಮೇರಿಕಾದ ಬಳಿ ಮುಗಿಯದ ಶಸ್ತ್ರಾಸ್ತ್ರಗಳ ಬೃಹತ್…
ತವರಿನಲ್ಲೇ ಕಣ್ಣೀರಿಡುತ್ತಿರುವ ಜೀವನದಿ; ಸ್ವಚ್ಛತೆಗೆ ಸೂಕ್ತ ಕ್ರಮ ಕೈಗೊಳ್ಳದಿದ್ದಲ್ಲಿ ಹೋರಾಟದ ಎಚ್ಚರಿಕೆ ಕೃಷ್ಣ ಸಿದ್ದಾಪುರ ಸಿದ್ದಾಪುರ: ಕೋಟ್ಯಾಂತರ ಜನರ ಜೀವನಾಡಿಯಾಗಿರುವ…
ಬೆಂಗಳೂರು: ಇಂದು ನಭೋ ಮಂಡಲ ಚಂದ್ರಗ್ರಹಣದ ಕೌತುಕಕ್ಕೆ ಸಾಕ್ಷಿಯಾಗಲಿದೆ. ಈ ರಕ್ತ ಚಂದ್ರಗ್ರಹಣ ಇಂದು ಮಧ್ಯಾಹ್ನ ಆರಂಭವಾಗಿ ಸಂಜೆ ವೇಳೆಗೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟದ ಸಾಲೂರು ಬೃಹನ್ಮಠದ ಪೀಠಾಧಿಪತಿ ಡಾ.ಶ್ರೀ ಶಾಂತಮಲ್ಲಿಕಾರ್ಜುನ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಡಂಚಿನ ಗ್ರಾಮಗಳಿಗೆ…