ಓದುಗರ ಪತ್ರ
ಎಚ್.ಡಿ.ಕೋಟೆ ಮತ್ತು ಸರಗೂರು ತಾಲ್ಲೂಕುಗಳಲ್ಲಿ ಕೈಗಾರಿಕೆ ಸ್ಥಾಪಿಸುವ ಮೂಲಕ ಯುವ ಜನತೆಗೆ ಉದ್ಯೋಗ ಕಲ್ಪಿಸಬೇಕು ಎಂದು ಮಾಜಿ ಸಚಿವ ಕೋಟೆ ಎಂ. ಶಿವಣ್ಣನವರು ಬೆಂಗಳೂರಿನಲ್ಲಿ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲರಿಗೆ ಮನವಿ ಮಾಡಿದ್ದಾರೆ ಎಂದು ದಿನ ಪತ್ರಿಕೆಗಳಲ್ಲಿ ವರದಿಯಾಗಿದೆ. ಇದು ಸ್ವಾಗತಾರ್ಹ ವಿಚಾರ.
ಹಿಂದುಳಿದ ತಾಲ್ಲೂಕು ಎಂದು ನಂಜುಂಡಪ್ಪನವರ ವರದಿಯಲ್ಲಿ ಗುರುತಿಸಲ್ಪಟ್ಟಿದ್ದರೂ ಅದರ ನಿವಾರಣೆಗೆ ಇಷ್ಟು ವರ್ಷಗಳಾದರೂ ಸರ್ಕಾರದಿಂದ ಯಾವ ಪ್ರಯತ್ನವೂ ನಡೆದಿಲ್ಲ. ತಾಲ್ಲೂಕಿನಲ್ಲಿ ೩ ಪ್ರಮುಖ ಆಣೆಕಟ್ಟೆಗಳಿದ್ದರೂ ಇದರ ಪ್ರಯೋಜನ ದೊರಕುತ್ತಿರುವುದು, ನಂಜನಗೂಡು, ತಿ. ನರಸೀಪುರ, ಕೊಳ್ಳೇಗಾಲ ತಾಲ್ಲೂಕುಗಳಿಗೆ ಮಾತ್ರ. ನೀರಿನ ಲಭ್ಯತೆ ಇದ್ದರೂ ತಾಲ್ಲೂಕಿನಲ್ಲಿ ಯಾವುದೇ ಕೈಗಾರಿಕೆಗಳು ಸ್ಥಾಪನೆಯಾಗಿಲ್ಲ.
ಕಬಿನಿ ಹಿನ್ನೀರಿನ ಉದ್ದಕ್ಕೂ ಅನೇಕ ರೆಸಾರ್ಟ್‌ಗಳು ನಾಯಿ ಕೊಡೆಗಳಂತೆ ತಲೆ ಎತ್ತಿವೆ. ಮುಂದೆ ಇನ್ನೂ ಅನೇಕ ರೆಸಾರ್ಟ್‌ಗಳು ತಲೆ ಎತ್ತಬಹುದು. ಹಣವಂತರು, ವಿಲಾಸಿಗಳು ಮೋಜು, ಮಸ್ತಿ ಮಾಡಲು ಬೆಂಗಳೂರು, ಹೊರ ರಾಜ್ಯಗಳಿಂದ ಇಲ್ಲಿಗೆ ಬರುತ್ತಾರೆ. ಆದರೆ ಸ್ಥಳೀಯರಿಗೆ ರೆಸಾರ್ಟ್‌ಗಳಿಂದ ಯಾವ ಪ್ರಯೋಜನವೂ ಇಲ್ಲ. ಬದಲಾಗಿ ಇಂತಹ ರೆಸಾರ್ಟ್‌ಗಳಿಂದ ಪರಿಸರಕ್ಕೆ ಹಾನಿಯಾಗುತ್ತದೆ. ರೆಸಾರ್ಟ್‌ಗಳು ಮೋಜು ಮಸ್ತಿಯ ಇನ್ನೊಂದು ಮುಖವಷ್ಟೇ. ಇಂತಹ ರೆಸಾರ್ಟ್‌ಗಳಿಗೆ ಅನುಮತಿ ಕೊಡುವ ಬದಲು ಸರ್ಕಾರ ಕೈಗಾರಿಕೆಗಳನ್ನು ಸ್ಥಾಪಿಸಲು ಮನಸ್ಸು ಮಾಡಬೇಕು.
-ಮುಳ್ಳೂರು ಪ್ರಕಾಶ್, ಕನಕದಾಸನಗರ, ಮೈಸೂರು
ಹಾಸನ : ಮುಂದಿನ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಸಿದ್ಧತೆ ನಡೆಸುವ ಸಂದೇಶವನ್ನು ರಾಜ್ಯದ ಜನರಿಗೆ ತಲುಪಿಸುವ ಗುರಿಯೊಂದಿಗೆ ನಗರದಲ್ಲಿ ಆಯೋಜಿಸಿದ್ದ…
ಮಳವಳ್ಳಿ : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಹತ್ತುಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಹೊಸಹಳ್ಳಿ…
ನಂಜನಗೂಡು : ಶ್ರೀಕಂಠೇಶ್ವರ ದೇವಾಲಯದ ಆವರಣದಲ್ಲಿನ ಅನಧಿಕೃತ ಅಂಗಡಿಗಳನ್ನು ಇಂದು(ಜ.24) ಮತ್ತೋಮ್ಮೆ ತೆರವು ಗೊಳಿಸಲಾಯಿತು. ದೇವಾಲಯದ ನೂತನ ಕಾರ್ಯನಿರ್ವಾಹಕ ಅಧಿಕಾರ…
ಮುಂಬೈ : ಸೌದಿ ಅರೇಬಿಯಾದಿಂದ ಅಂತರರಾಷ್ಟ್ರೀಯ ಕೊರಿಯರ್ ಟರ್ಮಿನಲ್‌ನಲ್ಲಿ ಸಾಗಿಸುತ್ತಿದ್ದ ಗ್ರೈಂಡರ್‌ನಲ್ಲಿ ಬಚ್ಚಿಟ್ಟಿದ್ದ 2.89 ಕೋಟಿ ರೂ.ಮೌಲ್ಯದ ಚಿನ್ನವನ್ನು ಕಂದಾಯ…
ಭುಗಿಲೆದ್ದ ಆಕ್ರೋಶ; ಬಿಜೆಪಿ -ಕಾಂಗ್ರೆಸ್ ಆರೋಪ-ಪ್ರತ್ಯಾರೋಪ ಬೆಂಗಳೂರು : ದೇಶದ 77ನೇ ಗಣರಾಜ್ಯೋತ್ಸವ ಸಂಭ್ರಮಕ್ಕೆ ಕ್ಷಣಗಣನೆ ಆರಂಭವಾಗಿದೆ. ಆದರೆ, ಈ…
ಮಂಡ್ಯ : ಮೈಷುಗರ್ ಕಾರ್ಖಾನೆಯನ್ನು ಯಾವುದೇ ಕಾರಣಕ್ಕೂ ಖಾಸಗಿಯವರಿಗೆ ವಹಿಸುವ ಪ್ರಶ್ನೆಯೇ ಇಲ್ಲ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ…