ಓದುಗರ ಪತ್ರ
ಶಾಲಾ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಹೊಸದಾಗಿ ೮೦೦ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯಲು ತ್ವರಿತವಾಗಿ ಟೆಂಡರ್ ಕರೆಯಬೇಕು, ಮುಂದಿನ ಎರಡು ವರ್ಷಗಳಲ್ಲಿ ಎಲ್ಲ ಶಾಲೆಗಳೂ ಕಾರ್ಯಾರಂಭ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿರುವುದು ಪತ್ರಿಕೆಗಳಲ್ಲಿ ವರದಿಯಾಗಿದೆ.
ಇದನ್ನು ಗಮನಿಸಿದರೆ ಶಿಕ್ಷಣದ ಬಗ್ಗೆ ಸರ್ಕಾರಕ್ಕೆ ಇರುವ ಕಾಳಜಿ ಎನ್ನುವುದು ಮೇಲ್ನೋಟಕ್ಕೆ ಗೋಚರವಾಗುತ್ತದೆ. ಆದರೆ ವಾಸ್ತವವೇ ಬೇರೆ ಇದೆ. ಈಗಾಗಲೇ ಖಾಸಗಿ ಶಾಲೆಗಳ ಪೈಪೋಟಿಯಿಂದ ಸರ್ಕಾರಿ ಶಾಲೆಗಳು ಸೊರಗಿವೆ. ಕೆಲವೆಡೆ ಶಾಲೆಗಳನ್ನೇ ಪಕ್ಕದ ಊರಿನ ಶಾಲೆಗೆ ವರ್ಗಾಯಿಸಲಾಗುತ್ತಿದೆ. ಇದನ್ನು ಶಿಕ್ಷಕರು, ಊರಿನ ಜನರು ವಿರೋಧಿಸುತ್ತಿದ್ದಾರೆ. ಇಂತಹ ವಿರೋಧವನ್ನು ಪಕ್ಕಕ್ಕಿಡಲು ಸರ್ಕಾರ ಕಂಡು ಕೊಂಡ ದಾರಿಯೇ ಈ ‘ಕರ್ನಾಟಕ ಪಬ್ಲಿಕ್ ಶಾಲೆ’! ಮುಂದಿನ ಕೆಲವರ್ಷಗಳಲ್ಲಿ ನಗರ, ಪಟ್ಟಣ, ಗ್ರಾಮೀಣ ಭಾಗಗಳಲ್ಲಿರುವ ಎಲ್ಲ ಸರ್ಕಾರಿ ಶಾಲೆಗಳನ್ನೂ ಕೆಪಿಎಸ್‌ಗೆ ವಿಲೀನಗೊಳಿಸಿ, ಸರ್ಕಾರ ತನ್ನ ಯೋಜನೆಯನ್ನು ಯಶಸ್ವಿಯಾಗಿ ಜಾರಿಗೊಳಿಸುತ್ತದೆ. ಆಗ ಸಾವಿರಾರು ಸರ್ಕಾರಿ ಶಾಲೆಗಳು ಅಸ್ತಿತ್ವ ಕಳೆದುಕೊಳ್ಳುತ್ತವೆ.
ಇದಕ್ಕೆ ಪೂರಕವಾಗಿ ಈ ವರ್ಷದಿಂದಲೇ ಕೆಪಿಎಸ್ ಶಾಲೆಗಳ ಮಕ್ಕಳಿಗೆ ಉಚಿತ ಬಸ್ ಸೌಲಭ್ಯ ಒದಗಿಸಲಾಗುವುದು ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ. ಇದು ಸರ್ಕಾರದ ಜಾಣ ನಡೆ ಅಷ್ಟೇ.
– ಮುಳ್ಳೂರು ಪ್ರಕಾಶ್, ಮೈಸೂರು
ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…
ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…
ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…
ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…
ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…