ಓದುಗರ ಪತ್ರ
ಕರ್ನಾಟಕ ಲೋಕಸೇವಾ ಆಯೋಗವು ರಾಜ್ಯದ ಅತ್ಯುನ್ನತ ನಾಗರಿಕ ಸೇವೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಜವಾಬ್ದಾರಿಯುತ ಸಂಸ್ಥೆಯಾಗಿದೆ. ಆದರೆ ಇತ್ತೀಚಿನ ವರ್ಷಗಳಲ್ಲಿ ಕೆಪಿಎಸ್‌ಸಿ ನಡೆಸುವ ಪರೀಕ್ಷೆಗಳು ಸರಣಿ ಹಗರಣಗಳು, ಪ್ರಶ್ನೆ ಪತ್ರಿಕೆ ಸೋರಿಕೆ, ಡಿಜಿಟಲ್ ಮೌಲ್ಯಮಾಪನದಲ್ಲಿ ಲೋಪದೋಷಗಳು ಮತ್ತು ಭ್ರಷ್ಟಾಚಾರದ ಆರೋಪಗಳಿಂದ ಸದಾ ಸುದ್ದಿಯಲ್ಲಿರುತ್ತಿರುವುದು ಅತ್ಯಂತ ಬೇಸರದ ಸಂಗತಿಯಾಗಿದೆ.
ವರ್ಷಗಟ್ಟಲೆ ಹಗಲಿರುಳು ಕಷ್ಟಪಟ್ಟು ಓದುವ ಲಕ್ಷಾಂತರ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಅಭ್ಯರ್ಥಿಗಳ ಭವಿಷ್ಯದೊಂದಿಗೆ ಈ ವ್ಯವಸ್ಥೆ ಆಟವಾಡುತ್ತಿದೆ. ಪರೀಕ್ಷೆಗಳನ್ನು ಮುಂದೂಡುವುದು, ಪರೀಕ್ಷೆ ಬರೆದವರು ನ್ಯಾಯಾಲಯದ ಮೆಟ್ಟಿಲೇರುವುದು ಮತ್ತು ಮರುಪರೀಕ್ಷೆಗಳನ್ನು ನಡೆಯುವುದರಿಂದ ಅಭ್ಯರ್ಥಿಗಳು ಮಾನಸಿಕವಾಗಿ ಜರ್ಜರಿತರಾಗುತ್ತಿದ್ದಾರೆ. ಇಂತಹ ಅವ್ಯವಹಾರಗಳು ಆಯೋಗದ ಮೇಲಿರುವ ನಂಬಿಕೆಯನ್ನೇ ಸಂಪೂರ್ಣವಾಗಿ ಕುಸಿಯುವಂತೆ ಮಾಡಿದೆ. ಈ ವ್ಯವಸ್ಥೆಯನ್ನು ಸರಿಪಡಿಸಲು ಕಟ್ಟುನಿಟ್ಟಾದ ತಂತ್ರಜ್ಞಾನದ ಬಳಕೆ ಮಾಡಬೇಕಿದೆ. ಪ್ರಶ್ನೆ ಪತ್ರಿಕೆಗಳ ತಯಾರಿಕೆಯಿಂದ ಹಿಡಿದು ವಿತರಣೆಯವರೆಗೆ ಅತ್ಯಾಧುನಿಕ, ಸೈಬರ್ ಸುರಕ್ಷಿತ ತಂತ್ರಜ್ಞಾನವನ್ನು ಬಳಸಬೇಕು. ಬಯೋಮೆಟ್ರಿಕ್ ಮತ್ತು ಜಿಪಿಎಸ್ ಆಧಾರಿತ ಕಣ್ಗಾವಲು ಕಡ್ಡಾಯಗೊಳಿಸುವ ಅವಶ್ಯಕತೆ ಇದೆ. ಎಲ್ಲದಕ್ಕಿಂತ ಹೆಚ್ಚಾಗಿ ಈ ಸಂಸ್ಥೆಯು ರಾಜಕೀಯ ಹಸ್ತಕ್ಷೇಪದಿಂದ ಮುಕ್ತವಾಗಿ, ಉನ್ನತ ಮಟ್ಟದ ಪ್ರಾಮಾಣಿಕ ಮತ್ತು ದಕ್ಷ ಅಧಿಕಾರಿಗಳನ್ನು ಮಾತ್ರ ಆಯೋಗದ ಪ್ರಮುಖ ಹುದ್ದೆಗಳಿಗೆ ನೇಮಿಸಬೇಕಿದೆ. ಮುಖ್ಯಮಂತ್ರಿಗಳು ಮತ್ತು ಸಂಬಂಧಪಟ್ಟ ಸಚಿವರು ಆಯೋಗದಲ್ಲಿ ಸುಧಾರಣೆಗಳನ್ನು ತರಲು ತಕ್ಷಣವೇ ಮುಂದಾಗಬೇಕಿದೆ.
– ಹರಳಹಳ್ಳಿ ಪುಟ್ಟರಾಜು, ಪಾಂಡವಪುರ.
ಕೋಲ್ಕತ್ತಾ: ದುರ್ಗಾಪೂಜೆ ಸಂಭ್ರಮದ ನಡುವೆ ಭೀಕರ ದುರಂತ ಸಂಭವಿಸಿದೆ. ಉತ್ತರ ಕೋಲ್ಕತ್ತಾದ ಚೋರ್ಬಗಾನ್ನ ಜನಪ್ರಿಯ ದುರ್ಗಾಪೂಜೆ ಪೆಂಡಾಲ್ನಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ…
ದಕ್ಷಿಣ ಕನ್ನಡ: ಜಿಲ್ಲೆಯ ಪುತ್ತೂರು ತಾಲೂಕಿನ ಪಾಣಾಜೆಯಲ್ಲಿ ಭಾರೀ ಮಳೆಯಾಗಿದ್ದು, ರಾಜ್ಯದಲ್ಲೇ ಅತ್ಯಧಿಕ 16.7 ಸೆಂಟಿಮೀಟರ್ ಮಳೆ ದಾಖಲಾಗಿದೆ. ಶನಿವಾರ…
ಗುಂಡ್ಲುಪೇಟೆ: ಅಕ್ರಮವಾಗಿ ಕೇರಳ ಲಾಟರಿ ಟಿಕೆಟ್ಗಳನ್ನು ಮಾರಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬರನ್ನು ಗುಂಡ್ಲುಪೇಟೆ ಠಾಣೆ ಪೊಲೀಸರು ಬಂಧಿಸಿ, ಲಾಟರಿ ಟೆಕೆಟ್ಗಳನ್ನು ವಶಕ್ಕೆ…
ಮೈಸೂರು: ಇಲ್ಲಿನ ಜೆಕೆ ಮೈದಾನದಲ್ಲಿ ಆಯೋಜಿಸಿರುವ ಶ್ವಾನ ಪ್ರದರ್ಶನವು ಶ್ವಾನಪ್ರಿಯರ ಗಮನ ಸೆಳೆಯುತ್ತಿದೆ. ಪ್ರದರ್ಶನದಲ್ಲಿ 50ಕ್ಕೂ ಹೆಚ್ಚು ತಳಿಗಳ ಸಾವಿರಕ್ಕೂ…
ಮೈಸೂರು: ದಸರಾದ ಏರ್ ಶೋ ವೀಕ್ಷಿಸಲು ಕಾತುರದಿಂದ ಕಾಯುತ್ತಿದ್ದ ಸಾವಿರಾರು ಪ್ರೇಕ್ಷಕರಿಗೆ ಹವಾಮಾನ ವೈಪರೀತ್ಯ ನಿರಾಸೆ ಉಂಟುಮಾಡಿದೆ. ಭಾರತೀಯ ವಾಯುಪಡೆಯ…
ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಯವರು ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ಪತ್ರಿಕಾಗೋಷ್ಠಿಯಲ್ಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಏಕವಚನ…