Mysore
16
clear sky

Social Media

ಶುಕ್ರವಾರ, 12 ಡಿಸೆಂಬರ್ 2025
Light
Dark

ಓದುಗರ ಪತ್ರ: ಬೀದಿ ನಾಯಿಗಳ ಹಾವಳಿ ತಪ್ಪಿಸಿ

ಕೆ.ಆರ್.ಪೇಟೆ ತಾಲ್ಲೂಕಿನ ಅಂಚನಹಳ್ಳಿ ಗ್ರಾಮದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಜನರು ರಸ್ತೆಯಲ್ಲಿ ಓಡಾಡಲು ಆತಂಕ ಪಡುವಂತಾಗಿದೆ. ಈ ಬೀದಿ ನಾಯಿಗಳು ಕುರಿ, ಮೇಕೆ, ಕೋಳಿ ಹಾಗೂ ದನಕರುಗಳ ಮೇಲೆ ದಾಳಿ ಮಾಡುತ್ತಿದ್ದು, ಮಹಿಳೆಯರು, ಮಕ್ಕಳ ಮೇಲೂ ದಾಳಿಗೆ ಮುಂದಾಗುವ ಅಪಾಯವಿದೆ. ಈ ಬೀದಿ ನಾಯಿಗಳು ರಾತ್ರಿಯ ವೇಳೆ ದ್ವಿಚಕ್ರ ವಾಹನಗಳನ್ನು ಹಿಮ್ಮೆಟ್ಟುತ್ತಿದ್ದು, ಅವುಗಳಿಗೆ ಹೆದರಿ ವೇಗವಾಗಿ ವಾಹನ ಚಲಾಯಿಸಿ ಅನೇಕರು ಬಿದ್ದು ಗಾಯಗೊಂಡಿದ್ದಾರೆ. ಬೀದಿನಾಯಿಗಳ ಹಾವಳಿಯನ್ನು ನಿಯಂತ್ರಿಸುವಂತೆ ಇಲ್ಲಿನ ಗ್ರಾಮ ಪಂಚಾಯಿತಿಯವರ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗುತ್ತಿಲ್ಲ. ಆದ್ದರಿಂದ ಸಂಬಂಧಪಟ್ಟವರು ಕೂಡಲೇ ಗಮನಹರಿಸಿ ಬೀದಿನಾಯಿಗಳ ಹಾವಳಿಯನ್ನು ತಪ್ಪಿಸಲು ಕ್ರಮಕೈಗೊಳ್ಳಬೇಕು.

-ಮಹಾಲಕ್ಷ್ಮಿ, ಬನುಮಯ್ಯ ವಾಣಿಜ್ಯ ಮತ್ತು ಕಲಾ ಕಾಲೇಜು, ಮೈಸೂರು.

Tags:
error: Content is protected !!