ಕೆ.ಆರ್.ಎಸ್. ಹಿನ್ನೀರಿನ ಪ್ರದೇಶದಲ್ಲಿ ಕೆಲವು ಪ್ರಭಾವಿ ವ್ಯಕ್ತಿಗಳು ಭೂಮಿಯನ್ನು ಒತ್ತುವರಿ ಮಾಡಿ ರೆಸಾರ್ಟ್‌ಗಳನ್ನು ನಿರ್ಮಿಸಿ ಕೊಂಡಿರುವ ಆರೋಪಕ್ಕೆ ಸಂಬಂಧಿಸಿದಂತೆ, ಕೂಡಲೇ ಕೆ.ಆರ್.ಎಸ್. ಅಣೆಕಟ್ಟೆಗೆ ಸೇರಿದ ಭೂಮಿಯನ್ನು ಸರ್ವೆ ಮಾಡಿ, ಗಡಿ ಕಲ್ಲುಗಳನ್ನು ನೆಟ್ಟು ಸರ್ಕಾರಕ್ಕೆ ವರದಿ ನೀಡುವಂತೆ ಮಂಡ್ಯ ಮತ್ತು ಮೈಸೂರು ಜಿಲ್ಲಾಧಿಕಾರಿಗಳಿಗೆ ಜಲಸಂಪನ್ಮೂಲ ಸಚಿವರೂ ಆದ ಉಪ ಮುಖ್ಯಮಂತ್ರಿ ಡಿ. ಕೆ.ಶಿವಕುಮಾರ್ ಅವರು ಆದೇಶ ನೀಡಿರುವುದು ಸ್ವಾಗತಾರ್ಹ.
ಹಿನ್ನೀರಿನ ಪ್ರದೇಶದಲ್ಲಿರುವ ಗ್ರಾಮದ ರೈತರು ಕೆ.ಆರ್.ಎಸ್‌ಗೆ ಸೇರಿದ ಭೂಮಿಯಲ್ಲಿ ಪೂರ್ವ ಮುಂಗಾರು ಸಮಯದಲ್ಲಿ, ಅಲಸಂದೆ, ಜೋಳ ಮತ್ತು ಎಳ್ಳು ಬೆಳೆಗಳನ್ನು ಬೆಳೆಯಲು ಭೂಮಿಯನ್ನು ಉಳುಮೆ ಮಾಡುವುದರಿಂದ ರಾಸಾಯನಿಕ ಗೊಬ್ಬರ ಸೇರಿ ಜಲಾಶಯದ ನೀರು ಕಲುಷಿತವಾಗುತ್ತಿದ್ದು, ಸಂಬಂಧಪಟ್ಟವರು ಹಿನ್ನೀರಿನ ಪ್ರದೇಶದಲ್ಲಿ ಕೃಷಿ ಚಟುವಟಿಕೆಗೂ ಕಡಿವಾಣ ಹಾಕಬೇಕಾಗಿದೆ.
– ಬೂಕನಕೆರೆ ವಿಜೇಂದ್ರ, ಕುವೆಂಪು ನಗರ, ಮೈಸೂರು





