ಓದುಗರ ಪತ್ರ
ನಮ್ಮ ನಾಡಿನ ಸಾಕ್ಷಿ ಪ್ರಜ್ಞೆ ಜಗದಗಲಕ್ಕೂ ಮನುಜ ಮತ ವಿಶ್ವಪಥ ಎಂಬ ಸಂದೇಶ ಸಾರಿದ ಮೇರು ವ್ಯಕ್ತಿತ್ವದ ಜ್ಞಾನ ಶಿಖರ ರಾಷ್ಟ್ರಕವಿ ಕುವೆಂಪು ಅವರಿಗೆ ದೇಶ ಕೊಡ ಮಾಡುವ ಪ್ರತಿಷ್ಠಿತ ಪ್ರಶಸ್ತಿಯಾದ ‘ಭಾರತರತ್ನ’ ವನ್ನು ಮರಣೋತ್ತರವಾಗಿ ಕೊಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿರುವ ರಾಜ್ಯ ಸರ್ಕಾರದ ನಡೆ ಶ್ಲಾಘನೀಯ ಹಾಗೂ ಕನ್ನಡಿಗರಿಗೆ ಹೆಮ್ಮೆಯ ವಿಷಯ.
ಕನ್ನಡ ಭಾಷೆಯ ಸಾಹಿತ್ಯ ಸಾಂಸ್ಕ ತಿಕ ಲೋಕವನು ಶ್ರೀಮಂತ ಗೊಳಿಸಿದವರಲ್ಲಿ ಕುವೆಂಪು ಎಂದಿಗೂ ಅಗ್ರಗಣ್ಯರು. ತಮ್ಮ ಜೀವಮಾನವನ್ನೆಲ್ಲಾ ವೈಚಾರಿಕತೆಗೆ ಒತ್ತು ನೀಡಿ ಮೌಢ್ಯ ಕಟ್ಟುಪಾಡುಗಳಿಗೆ ಸಡ್ಡು ಹೊಡೆದು ತಾವು ನುಡಿದಂತೆ ನಡೆದು ಬರೆದಂತೆ ಬದುಕಿ ವಿಶಾಲ ಮನೋಭಾವಹೊಂದಿ ವೈಜ್ಞಾನಿಕತೆಗೆ ಮುನ್ನೆಲೆ ಹಾಕಿದ ಸಮ ಸಮಾಜದ ಆದರ್ಶವಾದಿ. ಕೇಂದ್ರ ಸರ್ಕಾರವು ಅರ್ಹ ಹಾಗೂ ಯೋಗ್ಯರಾದ ಇವರಿಗೆ ಮರಣೋತ್ತರವಾಗಿ ‘ಭಾರತರತ್ನ ’ ನೀಡಲಿ.
– ಅನಿಲ್ ಕುಮಾರ್, ನಂಜನಗೂಡು
ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…
ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…
ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…
ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…
ಬೆಂಗಳೂರು: ನಟ ಕಿಚ್ಚ ಸುದೀಪ್ ಅಭಿನಯದ ಮಾರ್ಕ್ ಸಿನಿಮಾ ಟ್ರೈಲರ್ ಅದ್ಧೂರಿಯಾಗಿ ಬಿಡುಗಡೆ ಮಾಡಲಾಗಿದೆ. ವಿಜಯ್ ಕಾರ್ತಿಕೇಯ-ಸುದೀಪ್ ಕಾಂಬಿನೇಷನ್‌ನಲ್ಲಿ ಮೂಡಿಬಂದಿರುವ…