ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ದಿಲ್ಲಿಯಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆ ವೇಳೆ ಕೇಂದ್ರ ಸರ್ಕಾರದ ಕುಮ್ಮಕ್ಕು ಹಾಗೂ ಪೊಲೀಸರ ಲಾಠಿ ಪ್ರಹಾರದಿಂದ ಹಲವಾರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅನ್ಯಾಯದ ವಿರುದ್ಧ ಪ್ರತಿಭಟಿಸುವುದು ತಪ್ಪೇ? ಮೋದಿ ನೇತೃತ್ವದ ಸರ್ಕಾರವನ್ನು ಯಾರೂ ಪ್ರಶ್ನಿಸುವಂತಿಲ್ಲವೇ? ದೇಶದ ಯುವಜನತೆಯ ಭವಿಷ್ಯದ ಜೊತೆ ಸರ್ಕಾರ ಚೆಟವಾಡುತ್ತಿದೆ. ಕೇಂದ್ರ ಸರ್ಕಾರದ ಧೋರಣೆಯನ್ನು ಖಂಡಿಸಿ ಪ್ರತಿಭಟಿಸುವುದು ಪ್ರತಿಯೊಬ್ಬರ ಕರ್ತವ್ಯ ಮತ್ತು ಹಕ್ಕು. ಇದನ್ನು ಯಾರಿಂದಲೂ ಕಸಿದುಕೊಳ್ಳಲು ಸಾಧ್ಯವಿಲ್ಲ. ನೀಟ್ ಪರೀಕ್ಷಾ ಅಕ್ರಮದ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವರು ರಾಜೀನಾಮೆ ನೀಡಬೇಕು. ನ್ಯಾಯಯುತವಾಗಿ ಹಕ್ಕುಗಳಿಗಾಗಿ ಧ್ವನಿ ಎತ್ತಿದ ವಿದ್ಯಾರ್ಥಿಗಳ ಮೇಲೆ ಲಾಠಿ ಪ್ರಹಾರ ನಡೆದು ಕೇಂದ್ರ ಸರ್ಕಾರ ಅಮಾನುಷವಾಗಿ ಅವರ ಧ್ವನಿಯನ್ನು ಹತ್ತಿಕ್ಕಲು ಯತ್ನಿಸಿದೆ.
ವಿದ್ಯಾರ್ಥಿಗಳ ಪರವಾಗಿ ಬೆಂಬಲಕ್ಕೆ ನಿಂತ ಪ್ರತಿಪಕ್ಷ ನಾಯಕರನ್ನು ಪೊಲೀಸ್ ಬಲಪ್ರಯೋಗದ ಮೂಲಕ ಮೌನಗೊಳಿಸಲು ಹೊರಟಿರುವುದು ಪ್ರಜಾಪ್ರಭುತ್ವ ವಿರೋಧಿ ನಡೆಯಾಗಿದೆ. ಪ್ರಜಾಪ್ರಭುತ್ವ ವಿರೋಽ ಸರ್ಕಾರಕ್ಕೆ ಮುಂದಿನ ಚುನಾವಣೆಯಲ್ಲಿ ಜನರು ತಕ್ಕ ಪಾಠ ಕಲಿಸಬೇಕಿದೆ.
-ವಿಜಯ್‌ಕುಮಾರ್, ಎಂಬಿಎ ವಿದ್ಯಾರ್ಥಿ, ಮೈಸೂರು



