Andolana originals

ಓದುಗರ ಪತ್ರ: ವಿದ್ಯಾರ್ಥಿಗಳ ಮೇಲೆ ಲಾಠಿ ಪ್ರಹಾರ ಖಂಡನೀಯ

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ದಿಲ್ಲಿಯಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆ ವೇಳೆ ಕೇಂದ್ರ ಸರ್ಕಾರದ ಕುಮ್ಮಕ್ಕು ಹಾಗೂ ಪೊಲೀಸರ ಲಾಠಿ ಪ್ರಹಾರದಿಂದ ಹಲವಾರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅನ್ಯಾಯದ ವಿರುದ್ಧ ಪ್ರತಿಭಟಿಸುವುದು ತಪ್ಪೇ? ಮೋದಿ ನೇತೃತ್ವದ ಸರ್ಕಾರವನ್ನು ಯಾರೂ ಪ್ರಶ್ನಿಸುವಂತಿಲ್ಲವೇ? ದೇಶದ ಯುವಜನತೆಯ ಭವಿಷ್ಯದ ಜೊತೆ ಸರ್ಕಾರ ಚೆಟವಾಡುತ್ತಿದೆ. ಕೇಂದ್ರ ಸರ್ಕಾರದ ಧೋರಣೆಯನ್ನು ಖಂಡಿಸಿ ಪ್ರತಿಭಟಿಸುವುದು ಪ್ರತಿಯೊಬ್ಬರ ಕರ್ತವ್ಯ ಮತ್ತು ಹಕ್ಕು. ಇದನ್ನು ಯಾರಿಂದಲೂ ಕಸಿದುಕೊಳ್ಳಲು ಸಾಧ್ಯವಿಲ್ಲ. ನೀಟ್ ಪರೀಕ್ಷಾ ಅಕ್ರಮದ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವರು ರಾಜೀನಾಮೆ ನೀಡಬೇಕು. ನ್ಯಾಯಯುತವಾಗಿ ಹಕ್ಕುಗಳಿಗಾಗಿ ಧ್ವನಿ ಎತ್ತಿದ ವಿದ್ಯಾರ್ಥಿಗಳ ಮೇಲೆ ಲಾಠಿ ಪ್ರಹಾರ ನಡೆದು ಕೇಂದ್ರ ಸರ್ಕಾರ ಅಮಾನುಷವಾಗಿ ಅವರ ಧ್ವನಿಯನ್ನು ಹತ್ತಿಕ್ಕಲು ಯತ್ನಿಸಿದೆ.

ವಿದ್ಯಾರ್ಥಿಗಳ ಪರವಾಗಿ ಬೆಂಬಲಕ್ಕೆ ನಿಂತ ಪ್ರತಿಪಕ್ಷ ನಾಯಕರನ್ನು ಪೊಲೀಸ್ ಬಲಪ್ರಯೋಗದ ಮೂಲಕ ಮೌನಗೊಳಿಸಲು ಹೊರಟಿರುವುದು ಪ್ರಜಾಪ್ರಭುತ್ವ ವಿರೋಧಿ ನಡೆಯಾಗಿದೆ. ಪ್ರಜಾಪ್ರಭುತ್ವ ವಿರೋಽ ಸರ್ಕಾರಕ್ಕೆ ಮುಂದಿನ ಚುನಾವಣೆಯಲ್ಲಿ ಜನರು ತಕ್ಕ ಪಾಠ ಕಲಿಸಬೇಕಿದೆ.

-ವಿಜಯ್‌ಕುಮಾರ್, ಎಂಬಿಎ ವಿದ್ಯಾರ್ಥಿ, ಮೈಸೂರು

ಆಂದೋಲನ ಡೆಸ್ಕ್

Recent Posts

ತಮಿಳುನಾಡಿಗೆ ಪ್ರತಿದಿನ 6 ಸಾವಿರ ಕ್ಯೂಸೆಕ್ಸ್ ನೀರು ಹರಿಸುವಂತೆ CWRC ಶಿಫಾರಸು

ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಹಿನ್ನಡೆಯಾಗಿದೆ. ತಮಿಳುನಾಡಿಗೆ ಪ್ರತಿದಿನ 6 ಸಾವಿರ ಕ್ಯೂಸೆಕ್ಸ್‌ ಕಾವೇರಿ…

6 mins ago

ಓದುಗರ ಪತ್ರ: ಮನವಿಗೆ ಸ್ಪಂದಿಸಿದಕ್ಕಾಗಿ ಅಭಿನಂದನೆಗಳು

ಮೈಸೂರಿನ ವಿ.ವಿ.ಮೊಹಲ್ಲದ ೨ನೇ ಮುಖ್ಯರಸ್ತೆಯಲ್ಲಿರುವ (ಕ್ಲಬ್ ಹಿಂಭಾಗ) ವಾರ್ಡ್ ಸಂಖ್ಯೆ ೧೯ರ ವ್ಯಾಪ್ತಿಗೆ ಒಳಪಡುವ ಕನ್ಸರ್‌ವೆನ್ಸಿಯಲ್ಲಿ ಗಿಡ ಗಂಟಿಗಳು ಬೃಹದಾಕಾರವಾಗಿ…

8 hours ago

ಓದುಗರ ಪತ್ರ: ಬಸ್ ನಿಲ್ದಾಣದಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆಯಾಗಲಿ

ಮೈಸೂರು ಜಿಲ್ಲೆಯ ಎಚ್. ಡಿ. ಕೋಟೆ ತಾಲ್ಲೂಕು ವನಸಿರಿ ನಾಡು ಎಂದೇ ಪ್ರಸಿದ್ಧಿ ಪಡೆದಿದೆ. ಹಾಗೆ ಹಲವು ದೇವಾಲಯಗಳ ಬೀಡು, ಈ…

8 hours ago

ಓದುಗರ ಪತ್ರ: ಹಳೆ ಪಿಂಚಣಿ ಮರುಜಾರಿಯಿಂದ ಖಜಾನೆಗೆ ಭಾರ ಆಗದೇ?

ಚುನಾವಣಾ ಲಾಭಕ್ಕಾಗಿ ಹಳೆ ಪಿಂಚಣಿ ಯೋಜನೆ ಮರುಜರಿಗೆ ಹೊರಟಿರುವುದು ರಾಜ್ಯದ ಆರ್ಥಿಕ ಪರಿಸ್ಥಿತಿ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ. ೩.೫…

8 hours ago

ಓದುಗರ ಪತ್ರ: ದಸರಾ ಚಲನಚಿತ್ರೋತ್ಸವ ಕೈಬಿಡಬಾರದು

ಮೈಸೂರಿನ ದಸರಾ ಚಲನಚಿತ್ರೋತ್ಸವವನ್ನು ಕಳೆದ ಸುಮಾರು ೫೦ ವರ್ಷಗಳಿಂದಲೂ ನಡೆಸಿಕೊಂಡು ಬರಲಾಗುತ್ತಿದೆ. ಪ್ರೇಕ್ಷಕರ ಭಾಗವಹಿಸುವಿಕೆ ಕಡಿಮೆಯಾಗಿದೆ ಎಂಬ ಕಾರಣಕ್ಕೆ ಈ…

8 hours ago

ವರ್ಷದಲ್ಲಿ 180 ದ್ವಿಚಕ್ರ ವಾಹನಗಳ ಕಳ್ಳತನ!

ಎಚ್.ಎಸ್.ದಿನೇಶ್ ಕುಮಾರ್ ವರ್ಷದಿಂದೀಚೆಗೆ ೯೬ ವಾಹನಗಳ ಪತ್ತೆ; ೧೦ಕ್ಕೂ ಹೆಚ್ಚು ಆರೋಪಿಗಳ ಬಂಧನ ವಾಹನ ಸವಾರರಿಗೆ ಮುನ್ನೆಚ್ಚರಿಕೆ * ವಾಹನ…

8 hours ago