Mysore
23
mist

Social Media

ಶನಿವಾರ, 06 ಡಿಸೆಂಬರ್ 2025
Light
Dark

ಓದುಗರ ಪತ್ರ:  ‘ಕಾನೂನು ಕ್ಲಿನಿಕ್ ’ ಕ್ರಾಂತಿಕಾರಿ ಯೋಜನೆ

ಓದುಗರ ಪತ್ರ

ಮೈಸೂರಿನ ಹಳೇ ಜಿಲ್ಲಾಧಿಕಾರಿಗಳ ಕಚೇರಿ ಸಮೀಪದಲ್ಲಿ ಇರುವ ಜಿಲ್ಲಾ ಸೈನಿಕ್ ಭವನದಲ್ಲಿ ವೀರ್ ಪರಿವಾರ್ ಸಹಾಯತಾ ಯೋಜನೆ ಅಡಿಯಲ್ಲಿ ‘ ಉಚಿತ ಕಾನೂನು ಸೇವೆಗಳ ಕ್ಲಿನಿಕ್‘ ಅನ್ನು ಇತ್ತೀಚೆಗೆ ಪ್ರಾರಂಭಿಸಿರುವುದು ಸ್ವಾಗತಾರ್ಹವಾಗಿದೆ.  ದೇಶಕ್ಕಾಗಿ ತಮ್ಮ ಬದುಕನ್ನೇ ಮುಡಿಪಾಗಿಡುವ ಸೈನಿಕರ ನೆಮ್ಮದಿಯ ಜೀವನಕ್ಕಾಗಿ ಹಾಗೂ ಅವರ ಕುಟುಂಬದ ಸದಸ್ಯರ ಕಾನೂನಾತ್ಮಕ ಸಮಸ್ಯೆಗಳ ನಿವಾರಣೆಗಾಗಿ ಈ ಕ್ಲಿನಿಕ್ ಸ್ಥಾಪಿಸಲಾಗಿದೆ ಎಂದು ಹೇಳಲಾಗಿದೆ.

ರಕ್ಷಣಾ ಸಿಬ್ಬಂದಿ, ಮಾಜಿ ಸೈನಿಕರು, ಅವರ ಅವಲಂಬಿತರಿಗೆ ಆಸ್ತಿ, ವೈವಾಹಿಕ ಹಾಗೂ ನಾಗರಿಕ ವಿವಾದಗಳು ಹಾಗೂ ಕಲ್ಯಾಣ ಯೋಜನೆ ಸಂಬಂಧವಾಗಿ ಕಾನೂನು ವಿಷಯದಲ್ಲಿ ಉಚಿತ ಮತ್ತು ಸಮರ್ಥ ಕಾನೂನು ಸೇವೆಗಳು ಮತ್ತು ಸಹಾಯವನ್ನು ಈ ಕ್ಲಿನಿಕ್‌ನಲ್ಲಿ ಒದಗಿಸಲಾಗುವುದು ಎಂದು ಹೇಳಲಾಗಿದೆ. ರಾಜ್ಯ ಸರ್ಕಾರ ೨-೩ ವರ್ಷಗಳ ಹಿಂದೆ ‘ ನಮ್ಮ ಕ್ಲಿನಿಕ್‘ ಎಂಬ ಹೆಸರಿನಲ್ಲಿ ರಾಜ್ಯಾದ್ಯಂತ ಉಚಿತ ಆರೋಗ್ಯ ಕ್ಲಿನಿಕ್ ಅನ್ನು ಪ್ರಾರಂಭಿಸಿರುವುದನ್ನು ಇಲ್ಲಿ ಸ್ಮರಿಸಬಹುದು. ಇದೀಗ ಕಾನೂನು ಸೇವೆಗಳ ಕ್ಲಿನಿಕ್ ಆರಂಭಿಸುವ ಮೂಲಕ ಮತ್ತೊಂದು ಕ್ರಾಂತಿಕಾರಿ ಹೆಜ್ಜೆ ಇಟ್ಟಿರುವುದು ಸ್ವಾಗತಾರ್ಹ.

– ಕೆ.ವಿ.ವಾಸು, ವಿವೇಕಾನಂದ ನಗರ, ಮೈಸೂರು

Tags:
error: Content is protected !!