ಓದುಗರ ಪತ್ರ
ಮೈಸೂರಿನ ಹಳೇ ಜಿಲ್ಲಾಧಿಕಾರಿಗಳ ಕಚೇರಿ ಸಮೀಪದಲ್ಲಿ ಇರುವ ಜಿಲ್ಲಾ ಸೈನಿಕ್ ಭವನದಲ್ಲಿ ವೀರ್ ಪರಿವಾರ್ ಸಹಾಯತಾ ಯೋಜನೆ ಅಡಿಯಲ್ಲಿ ‘ ಉಚಿತ ಕಾನೂನು ಸೇವೆಗಳ ಕ್ಲಿನಿಕ್‘ ಅನ್ನು ಇತ್ತೀಚೆಗೆ ಪ್ರಾರಂಭಿಸಿರುವುದು ಸ್ವಾಗತಾರ್ಹವಾಗಿದೆ. ದೇಶಕ್ಕಾಗಿ ತಮ್ಮ ಬದುಕನ್ನೇ ಮುಡಿಪಾಗಿಡುವ ಸೈನಿಕರ ನೆಮ್ಮದಿಯ ಜೀವನಕ್ಕಾಗಿ ಹಾಗೂ ಅವರ ಕುಟುಂಬದ ಸದಸ್ಯರ ಕಾನೂನಾತ್ಮಕ ಸಮಸ್ಯೆಗಳ ನಿವಾರಣೆಗಾಗಿ ಈ ಕ್ಲಿನಿಕ್ ಸ್ಥಾಪಿಸಲಾಗಿದೆ ಎಂದು ಹೇಳಲಾಗಿದೆ.
ರಕ್ಷಣಾ ಸಿಬ್ಬಂದಿ, ಮಾಜಿ ಸೈನಿಕರು, ಅವರ ಅವಲಂಬಿತರಿಗೆ ಆಸ್ತಿ, ವೈವಾಹಿಕ ಹಾಗೂ ನಾಗರಿಕ ವಿವಾದಗಳು ಹಾಗೂ ಕಲ್ಯಾಣ ಯೋಜನೆ ಸಂಬಂಧವಾಗಿ ಕಾನೂನು ವಿಷಯದಲ್ಲಿ ಉಚಿತ ಮತ್ತು ಸಮರ್ಥ ಕಾನೂನು ಸೇವೆಗಳು ಮತ್ತು ಸಹಾಯವನ್ನು ಈ ಕ್ಲಿನಿಕ್‌ನಲ್ಲಿ ಒದಗಿಸಲಾಗುವುದು ಎಂದು ಹೇಳಲಾಗಿದೆ. ರಾಜ್ಯ ಸರ್ಕಾರ ೨-೩ ವರ್ಷಗಳ ಹಿಂದೆ ‘ ನಮ್ಮ ಕ್ಲಿನಿಕ್‘ ಎಂಬ ಹೆಸರಿನಲ್ಲಿ ರಾಜ್ಯಾದ್ಯಂತ ಉಚಿತ ಆರೋಗ್ಯ ಕ್ಲಿನಿಕ್ ಅನ್ನು ಪ್ರಾರಂಭಿಸಿರುವುದನ್ನು ಇಲ್ಲಿ ಸ್ಮರಿಸಬಹುದು. ಇದೀಗ ಕಾನೂನು ಸೇವೆಗಳ ಕ್ಲಿನಿಕ್ ಆರಂಭಿಸುವ ಮೂಲಕ ಮತ್ತೊಂದು ಕ್ರಾಂತಿಕಾರಿ ಹೆಜ್ಜೆ ಇಟ್ಟಿರುವುದು ಸ್ವಾಗತಾರ್ಹ.
– ಕೆ.ವಿ.ವಾಸು, ವಿವೇಕಾನಂದ ನಗರ, ಮೈಸೂರು
ಬೆಂಗಳೂರು: ರಾಜ್ಯದಲ್ಲಿ ಇರುವ 50 ವರ್ಷ ಹಳೆಯ ಎಲ್ಲಾ ಜಲಾಶಯಗಳ ಗೇಟ್‌ಗಳನ್ನು ಬದಲಾವಣೆ ಮಾಡಲು ನಮ್ಮ ಸರ್ಕಾರ ನಿರ್ಧಾರ ಮಾಡಿದೆ…
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಗ್ಯಾಸ್ ಸಿಲಿಂಡರ್ ಕೊರತೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಆಹಾರ ಇಲಾಖೆ ಸಚಿವ ಮುನಿಯಪ್ಪ ಪ್ರತಿಕ್ರಿಯೆ…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನಾದ್ಯಂತ ಗ್ರಾಮೀಣ ಭಾಗದ ದೇವಸ್ಥಾನಗಳ ಕಳ್ಳತನ ಪ್ರಕರಣ ಸಂಖ್ಯೆ ದಿನದಿಂದ ದಿನಕ್ಕೆ…
ವಿವಾಹದ ಬಳಿಕ ಭಾರೀ ಸುದ್ದಿಯಲ್ಲಿರುವ ನಟಿ ರಶ್ಮಿಕಾ ಮಂದಣ್ಣ ಅವರು ಕನ್ನಡದಲ್ಲಿಯೇ ಪೋಸ್ಟ್ ಒಂದನ್ನು ಹಾಕಿದ್ದಾರೆ. ಇಲ್ಲಿ ತನಕ ನನಗೆ…
ಮಡಿಕೇರಿ: ಅನೈತಿಕ ಸಂಬಂಧ ಹಿನ್ನೆಲೆ ಸಹೋದರಿ ಹಾಗೂ ಆಕೆಯ ಜೊತೆ ಸಹ ಜೀವನ ನಡೆಸುತ್ತಿದ್ದ ವ್ಯಕ್ತಿಯನ್ನು ೭೦ ವರ್ಷದ ವೃದ್ಧ…
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜುಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಾಮೀನು…