ಓದುಗರ ಪತ್ರ
ಲೋಕಸಭೆ ಮತ್ತು ವಿಧಾನಸಭೆ ಅಧಿವೇಶನಗಳು ಜನರ ಸಮಸ್ಯೆಗಳನ್ನು ಚರ್ಚಿಸಲು, ನೀತಿಗಳನ್ನು ರೂಪಿಸಲು ಹಾಗೂ ದೇಶ, ರಾಜ್ಯದ ಅಭಿವೃದ್ಧಿ ಕುರಿತು ಚರ್ಚಿಸಲು ಮೀಸಲಾಗಿವೆ. ಆದರೆ ಇತ್ತೀಚಿನ ದಿನಗಳಲ್ಲಿ ಶಾಸನಸಭೆಗಳ ಕಾರ್ಯ ವೈಖರಿ ಜನರ ನಿರೀಕ್ಷೆಗಳಿಗೆ ಸಂಪೂರ್ಣವಾಗಿ ವಿರುದ್ಧವಾಗಿ ಸಾಗುತ್ತಿರುವುದು ಬೇಸರದ ಸಂಗತಿಯಾಗಿದೆ.
ಎಲ್ಲ ರಾಜಕೀಯ ಪಕ್ಷಗಳ ಸದಸ್ಯರು ಅಭಿವೃದ್ಧಿ, ಆಡಳಿತ, ಉದ್ಯೋಗ, ಆರೋಗ್ಯ, ಶಿಕ್ಷಣ, ರೈತರ ಸಮಸ್ಯೆಗಳು, ಬಡತನ ನಿವಾರಣೆ ಮುಂತಾದ ವಿಚಾರಗಳ ಬಗ್ಗೆ ಚರ್ಚೆ ನಡೆಸಬೇಕಾದ ಸಮಯದಲ್ಲಿ, ವೈಯಕ್ತಿಕ ವ್ಯಕ್ತಿಗಳ ವಿರುದ್ಧದ ಆರೋಪಗಳು ಮತ್ತು ರಾಜಕೀಯ ಪಕ್ಷಗಳ ನಡುವಿನ ಭ್ರಷ್ಟಾಚಾರ ಆರೋಪಗಳಿಗೆ ಹೆಚ್ಚಿನ ಆದ್ಯತೆ ನೀಡುತ್ತಿದ್ದು, ಸದನಗಳು ಜನಸೇವೆಯ ಕೇಂದ್ರಗಳಾಗುವ ಬದಲು ಆರೋಪ- ಪ್ರತ್ಯಾರೋಪಗಳ ವೇದಿಕೆಯಾಗಿವೆ. ಭ್ರಷ್ಟಾಚಾರ ಕುರಿತ ಚರ್ಚೆಗಳು ಅಗತ್ಯವಾದರೂ ಅದಕ್ಕೆ ಪ್ರಾಮುಖ್ಯತೆ ನೀಡಿ ಸದನದ ಸಮಯವನ್ನು ವ್ಯರ್ಥ ಮಾಡುವುದು, ಸದನವನ್ನು ಬಹಿಷ್ಕಾರ ಮಾಡುವುದು ಅಥವಾ ಮುಂದೂಡುತ್ತಲೇ ಇದ್ದರೆ ಜನತೆಗೆ ಯಾವುದೇ ಪ್ರಯೋಜನ ನೀಡುವುದಿಲ್ಲ. ವೈಯಕ್ತಿಕ ದ್ವೇಷ, ರಾಜಕೀಯ ಪ್ರತಿಷ್ಠೆ, ಅಸಭ್ಯ ವರ್ತನೆ, ಹಾಗೂ ಅವಾಚ್ಯ ಶಬ್ದಗಳಲ್ಲಿ ನಿಂದನೆ ಮಾಡುವುದರಿಂದ ಶಾಸನಸಭೆಗಳ ಗೌರವ ಮತ್ತು ಪ್ರಾಮುಖ್ಯತೆ ಕುಸಿಯುತ್ತಿದ್ದು, ಸಾರ್ವಜನಿಕ ಹಣ ಹಾಗೂ ಅಮೂಲ್ಯವಾದ ಸಮಯ ವ್ಯರ್ಥವಾಗುತ್ತಿದೆ. ಎಲ್ಲಾ ಜನಪ್ರತಿನಿಽಗಳು ತಮ್ಮ ಜವಾಬ್ದಾರಿಯನ್ನು ಅರಿತು, ಸದನದ ಗೌರವವನ್ನು ಕಾಪಾಡುವುದು ಅಗತ್ಯ.
– ವಿನೋದ್ ಶಂಕರ್, ಮೈಸೂರು
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ದೀಪಾಲಂಕಾರ ಕಾಮಗಾರಿಯಲ್ಲೇ ಯಡವಟ್ಟಾಗಿದ್ದು, ನಗರದ ಗನ್ ಹೌಸ್ ವೃತ್ತದಲ್ಲಿ ಕಟ್ಟಲಾಗಿದ್ದ ದಸರಾ ದೀಪಾಲಂಕಾರದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶಾಸಕರು ಕಮಿಷನ್ ಕೇಳುತ್ತಿದ್ದಾರೆ ಎಂಬ ಗುತ್ತಿಗೆದಾರರ ಆರೋಪ ಸುಳ್ಳು,ಮತದಾರರ ಪಟ್ಟಿಯ…
ಯಳಂದೂರು: ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಕಳೆದ ಕೆಲ ದಿನಗಳಿಂದ ಸತತವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ರೈತರು ಭತ್ತದ ನಾಟಿ ಕಾರ್ಯದಲ್ಲಿ…
ಮಡಿಕೇರಿ: ನಾಡಿನ ಜೀವನದಿ ಕಾವೇರಿ ಉಗಮಸ್ಥಾನ ತಲಕಾವೇರಿಯಲ್ಲಿ ನಡೆಯಲಿರುವ ಪವಿತ್ರ ತೀರ್ಥೋದ್ಭವಕ್ಕೆ ದಿನಗಣನೆ ಶುರುವಾಗಿದ್ದು, ಇನ್ನೇನು ಕೇವಲ 15 ದಿನಗಳಷ್ಟೇ…
ಮಂಡ್ಯ: ರಾಜ್ಯದಲ್ಲಿ ಕಂಡು ಕೇಳರಿಯದ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಇಂದು ಕೇಂದ್ರ ಬರ ಅಧ್ಯಯನ ಸಮಿತಿ ಸದಸ್ಯರು ಮಂಡ್ಯಕ್ಕೆ ಆಗಮಿಸಿ…
ಐತಿಹಾಸಿಕ ಸಂಗತಿ! ಸರ್ಕಾರದ ನಿರ್ದೇಶನದ ಮೇರೆಗೆ ಬೆಳಗಾವಿ ನಗರಪಾಲಿಕೆ ‘ಗಡಿ ವಿಷಯದಲ್ಲಿ ಮಹಾಜನ್ ವರದಿಯೇ ಅಂತಿಮ’ಎಂಬ ನಿರ್ಣಯ ಅಂಗೀಕರಿಸಿರುವುದು ಐತಿಹಾಸಿಕ…