Andolana originals

ಓದುಗರ ಪತ್ರ: ನಿಷ್ಪಕ್ಷಪಾತ ತನಿಖೆ ನಡೆಯಲಿ

ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್‌ಗಳ ವಿಚಾರ ಪ್ರಜಪ್ರಭುತ್ವದ ಆಶಯಗಳಿಗೆ ಕಪ್ಪುಚುಕ್ಕೆಯಾಗಿದೆ. ಸಾರ್ವಜನಿಕರ ಹಿತಾಸಕ್ತಿ ಕಡೆ ಗಮನಹರಿಸಬೇಕಾದ ರಾಜಕಾರಣಿಗಳು ವೈಯಕ್ತಿಕ ತೇಜೋವಧೆ ಹಾಗೂ ರಾಜಕೀಯ ಲಾಭಕ್ಕಾಗಿ ಇಂತಹ ತಂತ್ರಗಳನ್ನು ಬಳಸುವುದು ಆತಂಕಕಾರಿ ಬೆಳವಣಿಗೆ.

ಮಾಧ್ಯಮಗಳ ಸ್ಟಿಂಗ್ ಆಪರೇಷನ್ ಮೂಲತಃ ಭ್ರಷ್ಟಾಚಾರವನ್ನು ಬಯಲಿಗೆಳೆ ಯುವುದು ಉತ್ತಮ ಮಾರ್ಗವಾಗಿತ್ತು. ಆದರೆ ಈ ದಿನಮಾನಗಳಲ್ಲಿ ಅದು ಎದುರಾಳಿಗಳನ್ನು ಮಣಿಸಲು, ಹೆದರಿಸಲು ಮತ್ತು ಬ್ಲಾಕ್‌ಮೇಲ್ ಮಾಡಲು ಬಳಸುವ ಅಸವಾಗುತ್ತಿರುವುದು ಬೇಸರ ಉಂಟುಮಾಡುತ್ತದೆ.

ರಾಜಕೀಯ ಪಕ್ಷಗಳು ವೈಯಕ್ತಿಕ ನಿಂದನೆ ಬಿಟ್ಟು ಮೌಲ್ಯಾಧಾರಿತ ರಾಜಕಾರಣಕ್ಕೆ ಆದ್ಯತೆ ನೀಡಬೇಕಿದೆ. ಸ್ಟಿಂಗ್ ಆಪರೇಷನ್ ಬಗ್ಗೆ ಆರೋಪ, ಪ್ರತ್ಯಾರೋಪಗಳು ಏನೇ ಇದ್ದರೂ ಆ ಬಗ್ಗೆ ನಿಷ್ಪಕ್ಷಪಾತವಾಗಿ ತನಿಖೆ ನಡೆದು, ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು. ಏಕೆಂದರೆ ರಾಜಕೀಯ ನೈತಿಕತೆ ಉಳಿದರೆ ಮಾತ್ರ ಪ್ರಜಪ್ರಭುತ್ವ ಉಳಿಯುತ್ತದೆ.

 – ಹರಳಹಳ್ಳಿ ಪುಟ್ಟರಾಜು, ಪಾಂಡವಪುರ

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ದೀಪಾಲಂಕಾರ ಸಮಿತಿ ಕೆಲಸಕ್ಕೆ ಒಂದು ಸಲಾಂ

ಈ ವರ್ಷದ ದಸರಾ ಮಹೋತ್ಸವದಲ್ಲಿನ ವಿದ್ಯುತ್ ದೀಪಾಲಂಕಾರಗಳು ಪ್ರತಿ ವರ್ಷದಂತೆ ಈ ವರ್ಷವೂ ಜನರ ಮನಸ್ಸನ್ನು ಆಕರ್ಷಿಸುತ್ತಿದೆ. ಅದರಲ್ಲೂ ದೇವರಾಜ…

7 mins ago

ಓದುಗರ ಪತ್ರ: ‘ಈ ಮಾತು’ ಶೋಭೆ ತರುವುದೇ?

‘ಮತ್ತೆ ಹಾರ್ಟ್ ಸರ್ಜರಿ ಮಾಡಿಸಿಕೊಳ್ಳಬೇಕಾಗುತ್ತದೆ’- ಇದು ಮಾಜಿ ಮುಖ್ಯಮಂತ್ರಿ, ಹಾಲಿ ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ ಅವರ ಕುರಿತು…

9 mins ago

ದಾರಿ ತೋರಿದ ರಾಘವೇಂದ್ರ?!

ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ನನ್ನ ಮನೆಯಲ್ಲಿ ಇಟ್ಟಿದ್ದ ನೋಟಿನ ಕಂತೆಗಳನ್ನು ಪೊಲೀಸ್ ಸಿಬ್ಬಂದಿ ಮತ್ತು ಮಹಜರ್ ಸಾಕ್ಷಿದಾರರು ಎಣಿಸಿದರು.…

15 mins ago

ಮತದಾನದ ಹಕ್ಕು ಕಸಿಯಲು ನಮೂನೆ ೭ ದುರ್ಬಳಕೆ ಆರೋಪ!

ಕೆ.ಎಸ್.ಚಂದ್ರಶೇಖರ ಮೂರ್ತಿ ಮೈಸೂರಿನ ಎನ್.ಆರ್. ಕ್ಷೇತ್ರದಲ್ಲಿ ೫೦೦ಕ್ಕೂ ಹೆಚ್ಚು ಮತದಾರರ ವಿರುದ್ಧ ಸುಳ್ಳು ಮಾಹಿತಿ ಸಲ್ಲಿಕೆ ಆರೋಪ; ಪೊಲೀಸ್ ತನಿಖೆ …

30 mins ago

ಮಳೆ ಬಂದರೆ ತಾತ್ಕಾಲಿಕ ಬಸ್ ನಿಲ್ದಾಣದಲ್ಲಿ ಫಜೀತಿ!

ಆರ್.ಎಲ್.ಮಂಜುನಾಥ್ ದಸರಾ ನೋಡಲು ಬಂದವರ ಪಾಡು ಅಯೋಮಯ; ತಾತ್ಕಾಲಿಕ ಶೆಲ್ಟರ್ ಅಳವಡಿಸಲು ಆಗ್ರಹ  ಮೈಸೂರು: ಸಾಂಸ್ಕೃತಿಕ ನಗರಿಯಲ್ಲಿ ದಸರಾ ಮಹೋತ್ಸವದ…

42 mins ago

ಎಚ್.ಡಿ.ಕೋಟೆಯಲ್ಲಿ ಕಳೆಗಟ್ಟಿದ ನವರಾತ್ರಿ ಉತ್ಸವ

ಮಂಜು ಕೋಟೆ ವರದರಾಜಸ್ವಾಮಿ, ಚಾಮುಂಡೇಶ್ವರಿ ದೇವಸ್ಥಾನಗಳಲ್ಲಿ ವಿವಿಧ ಕಾರ್ಯಕ್ರಮಗಳು; ಪ್ರತಿನಿತ್ಯ ನೂರಾರು ಮಂದಿ ಭಾಗಿ ಎಚ್.ಡಿ.ಕೋಟೆ: ನವರಾತ್ರಿ ಉತ್ಸವ ಮತ್ತು…

53 mins ago