ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ತನಿಖೆ ನಡೆಸಲು ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ.
ಇದು ಕಾಂಗ್ರೆಸ್ ಪಕ್ಷಕ್ಕೆ ಮುಜುಗರ ಉಂಟುಮಾಡಿರುವುದಂತೂ ನಿಜ. ಇಂತಹ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದವರು ಜವಾಬ್ದಾರಿಯುತವಾಗಿ ವರ್ತಿಸಬೇಕು.
ರಾಜ್ಯಪಾಲರು ತಾವು ಎಲ್ಲ ಆಯಾಮ ಗಳಲ್ಲಿಯೂ ಪರಿಶೀಲಿಸಿ ತನಿಖೆಗೆ ಆದೇಶಿಸಿರು ವುದಾಗಿ ತಿಳಿಸಿದ್ದಾರೆ. ನಾನು ಎಲ್ಲಿಯೂ ಪ್ರಭಾವ ಬೀರಿಲ್ಲ, ಅಲ್ಲದೆ ಮುಡಾ ನಿವೇಶನಗಳು ನನ್ನ ಅಧಿಕಾರದ ಅವಧಿಯಲ್ಲಿ ಮಂಜೂರು ಮಾಡಿಸಿದ್ದಲ್ಲ, ಅವು ಬಿಜೆಪಿ ಅಧಿಕಾರಾವಧಿಯಲ್ಲಿ ಮಂಜೂರಾಗಿರುವುದು, ಇದರಲ್ಲಿ ನನ್ನ ಪಾತ್ರವೇನೂ ಇಲ್ಲ ಎಂದು ಸಿದ್ದರಾಮಯ್ಯ ಸಮರ್ಥಿಸಿಕೊಂಡಿದ್ದಾರೆ.
ಹೀಗಿದ್ದ ಮೇಲೆ ನಿಯಮ ಬಾಹಿರವಾಗಿ ಕೆಸರೆ ಬದಲಿಗೆ ವಿಜಯನಗರದಲ್ಲಿ ನಿವೇಶನ ಮಂಜೂರಾಗಿದ್ದು ಹೇಗೆ? ಇದರಲ್ಲಿ ಅವರ ಪ್ರಭಾವವಿದೆ ಎಂಬುದು ಸ್ಪಷ್ಟವಲ್ಲವೇ? ಒಂದು ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಪ್ಪು ಮಾಡಿಲ್ಲ ಎನ್ನುವುದಾದರೆ ತನಿಖೆ ಎದುರಿಸಲಿ.
ಇದರ ನಡುವೆ ಕೆಲ ಕಾಂಗ್ರೆಸ್‌ನ ಜನಪ್ರತಿನಿಧಿಗಳು ಸಿದ್ದರಾಮಯ್ಯ ನವರ ವಿರುದ್ಧ ತನಿಖೆಗೆ ಆದೇಶಿಸಿದರೆ ಜನ ದಂಗೆ ಏಳುತ್ತಾರೆ, ರಕ್ತ ಕ್ರಾಂತಿ ಆಗುತ್ತದೆ, ಬಾಂಗ್ಲಾ ದೇಶದ ಪ್ರಧಾನಿ ದೇಶ ಬಿಟ್ಟ ಪರಿಸ್ಥಿತಿ ರಾಜ್ಯಪಾಲರಿಗೂ ಬರಬಹುದು ಎಂದು ಪ್ರಚೋದನಕಾರಿ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಇದು ನಿಜಕ್ಕೂ ಖಂಡನೀಯ. ಕಾಂಗ್ರೆಸ್ ಪಕ್ಷ ಸಂವಿಧಾನಬದ್ಧವಾಗಿ ಆಡಳಿತ ನಡೆಸುತ್ತಿದೆ ಎಂಬ ವಿಶ್ವಾಸ ಜನರಲ್ಲಿ ಗಟ್ಟಿಗೊಳ್ಳಬೇಕಾದರೆ ಸಿದ್ದರಾಮಯ್ಯನವರು ಕಾನೂನು ಹೋರಾಟ ಮಾಡಲಿ.
-ಮುಳ್ಳೂರು ಪ್ರಕಾಶ್, ದಟ್ಟಗಳ್ಳಿ, ಮೈಸೂರು.
ಹೊಸದಿಲ್ಲಿ : ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚರಿಸುವ ಸಾರ್ವಜನಿಕರಿಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಮಹತ್ವದ ಸುದ್ದಿಯೊಂದನ್ನು ನೀಡಿದೆ.…
ಹೊಸದಿಲ್ಲಿ : ಪ್ರಧಾನ ಮಂತ್ರಿ ಕಾರ್ಯಾಲಯ (ಪಿಎಂಒ), ರಾಷ್ಟ್ರೀಯ ಭದ್ರತಾ ಮಂಡಳಿ ಸಚಿವಾಲಯ ಮತ್ತು ಸಂಪುಟ ಸಚಿವಾಲಯಗಳನ್ನು ಒಳಗೊಂಡಿರುವ ‘ಸೇವಾ…
ಹೊಸದಿಲ್ಲಿ : ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಶುಕ್ರವಾರ ನಡೆದ ‘ಡಿ’ಗುಂಪಿನ ಪಂದ್ಯದಲ್ಲಿ ಯುಎಇ ಕ್ರಿಕೆಟ್ ತಂಡವು ಕೆನಡಾ ತಂಡವನ್ನು ಐದು…
ಸೇಲಂ : ತಮಿಳಿಗ ವೆಟ್ರಿ ಕಳಗಂ(ಟಿವಿಕೆ) ಪಕ್ಷದ ರ‍್ಯಾಲಿ ವೇಳೆ ಕುಸಿದು ಬಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗದ ಮಧ್ಯೆ…
ಬೆಂಗಳೂರು : ಭಾರತೀಯ ರೈಲ್ವೆಯು ತನ್ನ ಅಧಿಕೃತ ಆಪ್ ‘ರೈಲ್‌ಒನ್’ ಅನ್ನು ಇತ್ತೀಚೆಗೆ ಬಿಡುಗಡೆ ಮಾಡಿದೆ. ಇದರಲ್ಲಿ ರೈಲ್ವೆ ಸೇವೆಗಳೆಲ್ಲವೂ…
ಢಾಕಾ : ಬಾಂಗ್ಲಾದೇಶ ಸಾರ್ವತ್ರಿಕ ಚುನಾವಣೆಯಲ್ಲಿ ಬಾಂಗ್ಲಾದೇಶ ನ್ಯಾಷನಲ್ ಪಾರ್ಟಿ(ಬಿಎನ್‌ಪಿ) ಗೆದ್ದು ಬೀಗಿದೆ. ಸಂಸತ್ತಿನ ಒಟ್ಟು 300 ಸ್ಥಾನಗಳ ಪೈಕಿ…