ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆಯ ಮೇಲೆ ಕೆಲವರು ಕಲ್ಲು ತೂರಾಟ ಮಾಡಿದ ಪರಿಣಾಮವಾಗಿ ಉದ್ವಿಗ್ನ ವಾತಾವರಣ ಉಂಟಾಗಿತ್ತು. ಆದರೆ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನಲ್ಲಿ ನಡೆದ ಗ್ರ್ಯಾಜುಯೇಟ್ಸ್ ಕೋ – ಆಪರೇಟೀವ್ ಸೊಸೈಟಿಯ ಸರ್ವ ಸದಸ್ಯರ ಸಭೆಯಲ್ಲಿ, ಸೊಸೈಟಿಯ ಇ-ಸ್ಟಾಂಪ್ ವಿಭಾಗದಲ್ಲಿ ಕೆಲಸ ಮಾಡುವ ನಗ್ಮಾ ಬಾನು ಅವರು ಗರ್ಭಿಣಿಯಾಗಿರುವ ಹಿನ್ನೆಲೆಯಲ್ಲಿ ಅವರಿಗೆ ಹಿಂದೂ ಧರ್ಮದ ಸಂಪ್ರದಾಯದಂತೆ, ಸೀಮಂತ ಮಾಡಿ, ಉಡಿ ತುಂಬಿ, ಹೊಸ ಸೀರೆ ಉಡುಗೊರೆ ನೀಡಿ, ಸಭೆಗೆ ಆಗಮಿಸಿದ್ದ ಎಲ್ಲ ಮಹಿಳೆಯರೂ ಆಕೆಯನ್ನು ಆಶೀರ್ವದಿಸಿರುವುದು ಕೋಮು ಸೌಹಾರ್ದತೆಗೆ ಸಾಕ್ಷಿಯಾಗಿದೆ.
ನಮ್ಮ ಧರ್ಮಗಳ ಆಚರಣೆಯನ್ನು ಮೀರಿ ನಡೆಯುವ ಇಂತಹ ಕಾರ್ಯಕ್ರಮಗಳು ಮಾನವೀಯ ಸಂಬಂಧಗಳಿಗೆ ಜ್ವಲಂತ ಉದಾಹರಣೆಯಾಗಿದೆ. ಇಂದಿಗೂ ಗ್ರಾಮೀಣ ಪ್ರದೇಶದಲ್ಲಿ ಜಾತಿ, ಮತ, ಪಂಥ ಬಿಟ್ಟು ನಡೆಯುವ ಇಂತಹ ಕಾರ್ಯಕ್ರಮಗಳಿಂದ ಜನರು ಸೌಹಾರ್ದತೆಯಿಂದ ಬಾಳುವಂತಾಗಿದೆ.
-ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು





