ಸರ್ಕಾರಿ ಉದ್ಯೋಗ ಪಡೆಯುವ ದೃಷ್ಟಿಯಿಂದ ಆಕಾಂಕ್ಷಿಗಳು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಾರೆ. ಆದರೆ ಕೆಲವು ಸಮಯದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆ ಪತ್ರಿಕೆಗಳು ಪರೀಕ್ಷೆ ನಡೆಯುವ ಮೊದಲೇ ಸೋರಿಕೆ ಆಗಿ ಗೊಂದಲಕ್ಕೆ ಕಾರಣವಾಗುತ್ತದೆ. ಕೆಲವು ಬಾರಿ ಪರೀಕ್ಷೆಗಳು ರದ್ದಾಗಿವೆ.
ಹೀಗಾಗುವುದರಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುವವರ ವಯೋಮಿತಿ ಮೀರಿ ಅವರ ಭವಿಷ್ಯಕ್ಕೆ ಮಾರಕವಾಗುತ್ತಿದೆ. ಆದ್ದರಿಂದ ಸರ್ಕಾರಿ ಹುದ್ದೆಗಳಿಗೆ ನಡೆಯುವ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಪಾರದರ್ಶಕವಾಗಿ ನಡೆಸಲು ಸಂಬಂಧಪಟ್ಟ ಇಲಾಖೆಗಳು ಕ್ರಮ ಕೈಗೊಳ್ಳಬೇಕಾಗಿದೆ.
– ನಾಗೇಶ್, ಮಾನಸಗಂಗೋತ್ರಿ, ಮೈಸೂರು





