ಗ್ರಾಮೀಣ ಪ್ರದೇಶಗಳಲ್ಲಿರುವ ಅನೇಕ ಸರ್ಕಾರಿ ಕಟ್ಟಡಗಳು ಶಿಥಿಲಗೊಂಡಿದ್ದು, ಮಳೆ ನೀರು ನಿಂತು ಸೋರಿಕೆಯಾಗುವ ಜತೆಗೆ ಕಿಟಕಿ, ಬಾಗಿಲುಗಳು ಮುರಿದುಬಿದ್ದಿದ್ದು, ಕುಸಿದು ಬೀಳುವ ಹಂತಕ್ಕೆ ತಲುಪಿವೆ.
ಸರ್ಕಾರ ಸರ್ಕಾರಿ ಕಚೇರಿಗಳಿಗೆ ಮೂಲ ಸೌಕರ್ಯಗಳನ್ನು ಕಲ್ಪಿಸುವುದಿರಲಿ ಕನಿಷ್ಠ ಪಕ್ಷ ಅಂಗನವಾಡಿ ಕೇಂದ್ರಗಳಿಗೆ ಕನಿಷ್ಠ ಮೂಲ ಸೌಕರ್ಯಗಳನ್ನು ಒದಗಿಸುವಲ್ಲಿ ವಿಫಲವಾಗಿದೆ. ಇನ್ನು ಸರ್ಕಾರಿ ಶಾಲೆಗಳಲ್ಲಿಯೂ ಮೂಲಸೌಕರ್ಯಗಳ ಕೊರತೆ, ಶಿಕ್ಷಕರ ಕೊರತೆ ಹೆಚ್ಚಾಗಿದ್ದು, ದಾಖಲಾತಿ ಪ್ರಮಾಣ ಇಳಿಮುಖವಾಗುತ್ತಿದೆ. ಇದರಿಂದಾಗಿ ಸರ್ಕಾರಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿವೆ. ಇನ್ನೂ ಕೆಲ ಗ್ರಾಮಗಳಲ್ಲಿ ಸರ್ಕಾರಿ ಕಟ್ಟಡಗಳನ್ನು ಖಾಸಗಿ ವ್ಯಕ್ತಿಗಳು ಬಳಕೆ ಮಾಡುತ್ತಿರುವ ಆರೋಪಗಳಿವೆ. ಆದ್ದರಿಂದ ಸರ್ಕಾರ ಈ ಬಗ್ಗೆ ಗಮನಹರಿಸಿ ಸರ್ಕಾರಿ ಕಚೇರಿಗಳನ್ನು ಅಭಿವೃದ್ಧಿಪಡಿಸುವ ಜತೆಗೆ ಗ್ರಾಮೀಣ ಭಾಗದ ಸರ್ಕಾರಿ ಶಾಲೆ, ಅಂಗನವಾಡಿ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಬೇಕಿದೆ ಹಾಗೂ ಎಲ್ಲ ಗ್ರಾಮಗಳಲ್ಲಿಯೂ ಸಾರ್ವಜನಿಕ ಶೌಚಾಲಯಗಳನ್ನು ನಿರ್ಮಿಸಬೇಕಿದೆ.
-ನಾಗೇಶ್, ಮಾನಸಗಂಗೋತ್ರಿ, ಮೈಸೂರು.





