ದಲಿತ ಸಮುದಾಯಕ್ಕೆ ಮೀಸಲಿಟ್ಟಿದ್ದ ಹಣವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬೇರೆ ಖಾತೆಗೆ ವರ್ಗಾವಣೆ ಮಾಡಿಸಿದ್ದಾರೆ. ಹೀಗೆ ದಲಿತ ಸಮುದಾಯಕ್ಕೆ ಅನ್ಯಾಯ ಮಾಡಿದ್ದಕ್ಕಾಗಿ ಅವರು ಕುಂಟುತ್ತಿದ್ದಾರೆ ಎಂದು ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿಯವರು ಹೇಳಿಕೆ ನೀಡಿದ್ದಾರೆ.
ದಲಿತ ಸಮುದಾಯಕ್ಕೆ ಸೇರಿದ ಹಣ ಬೇರೆ ಖಾತೆಗಳಿಗೆ ವರ್ಗಾವಣೆಯಾಗುವುದಕ್ಕೂ, ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮಂಡಿನೋವು ಕಾಣಿಸಿಕೊಂಡಿರುವುದಕ್ಕೂ ಏನು ಸಂಬಂಧ? ಜವಾಬ್ದಾರಿಯುತ ಸ್ಥಾನದಲ್ಲಿರುವ ನಾರಾಯಣಸ್ವಾಮಿಯವರಿಗೆ ಯಾವುದನ್ನು ಯಾವುದಕ್ಕೆ ಹೋಲಿಸಿ ಮಾತನಾಡಬೇಕು ಎಂಬ ಕನಿಷ್ಠ ಜ್ಞಾನವಾದರೂ ಬೇಡವೇ? ಈಗ ವ್ಹೀಲ್‌ಚೇರ್‌ನಲ್ಲಿ ಓಡಾಡುತ್ತಿರುವ ಸಿದ್ದರಾಮಯ್ಯನವರಿಗೆ ಮುಂದಿನ ದಿನಗಳಲ್ಲಿ ಬೇರೆಯೇ ಚೇರ್ ಬರಲಿದೆ ಎಂದು ಹೇಳಿರುವುದು ನಾರಾಯಣಸ್ವಾಮಿಯವರ ಕೆಟ್ಟ ಮನಃಸ್ಥಿತಿಯನ್ನು ತೋರಿಸುತ್ತದೆ. ಅವರು ಯಾರನ್ನು ಮೆಚ್ಚಿಸಲು ಈ ರೀತಿಯ ಹೇಳಿಕೆಗಳನ್ನು ನೀಡುತ್ತಿದ್ದಾರೋ ತಿಳಿಯದು. ಆದರೆ ಇಂತಹ ಹೇಳಿಕೆಗಳು ಅವರ ಘನತೆಯನ್ನು ಕುಗ್ಗಿಸುತ್ತವೆ. ಮುಂದಾದರೂ ಅವರು ಜವಾಬ್ದಾರಿಯುತವಾಗಿ ವರ್ತಿಸುವುದನ್ನು ಕಲಿಯಲಿ.
-ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು.





